For Quick Alerts
ALLOW NOTIFICATIONS  
For Daily Alerts
 

Virat Kohli: ಲಾರಾ- ಸಚಿನ್ ದಾಖಲೆ ಮೇಲೆ ವಿರಾಟ್ ಕೊಹ್ಲಿ ಕಣ್ಣು!

ಬಹುನಿರೀಕ್ಷಿತ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 22 ರಂದು ಪ್ರಾರಂಭವಾಗಲಿದೆ. ಕ್ರಿಕೆಟ್ ಪ್ರೇಮಿಗಳು ಈ ಟೆಸ್ಟ್ ಸರಣಿಗಾಗಿ ಬಹಳ ದಿನಗಳಿಂದ ಕಾಯುತ್ತಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ತವರು ನೆಲದಲ್ಲಿ ಟೀಮ್ ಇಂಡಿಯಾ ವೈಟ್‌ವಾಶ್ ಆಗಿರುವುದು ಅಭಿಮಾನಿ ಬೇಸರ ತಂದಿದೆ . ಈಗ ಈ ಅವಮಾನಕರ ಸೋಲಿನ ನಂತರ ಟೀಮ್ ಇಂಡಿಯಾ ಪುನರಾಗಮನದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಕಾಂಗರೂ ಪಡೆ ವಿರುದ್ಧ ಟೆಸ್ಟ್ ಸರಣಿ ಗೆಲ್ಲುವುದು ಟೀಮ್ ಇಂಡಿಯಾಕ್ಕೆ ಸುಲಭವಲ್ಲ. ಮೊದಲ ಟೆಸ್ಟ್ ಪರ್ತ್‌ನಲ್ಲಿ ನಡೆಯಲಿದ್ದು, ಇದಾದ ನಂತರ ಅಡಿಲೇಡ್, ಬ್ರಿಸ್ಬೇನ್, ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ನಾಲ್ಕು ಟೆಸ್ಟ್ ಪಂದ್ಯಗಳು ನಡೆಯಲಿವೆ.

Virat Kohli to break Brian Lara and Sachin Tendulkar record in Australia

ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತದ ದಿಗ್ಗಜ ಬ್ಯಾಟರ್‌ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮೇಲೆ ಎಲ್ಲರ ಕಣ್ಣಿದೆ. ಇಬ್ಬರೂ ತಮ್ಮ ವೃತ್ತಿ ಜೀವನದ ಕೊನೆಯ ಹಂತದಲ್ಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ. ಹೀಗಿರುವಾಗ ತವರು ನೆಲದಲ್ಲಿ ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ವಿರುದ್ಧ ನಾಚಿಕೆಗೇಡಿನ ಪ್ರದರ್ಶನ ನೀಡಿದ ಬಳಿಕ ಎಲ್ಲರ ಕಣ್ಣು ಇವರಿಬ್ಬರ ಪ್ರದರ್ಶನದ ಮೇಲಿದೆ.

ಕಳೆದ 10 ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ 21.3 ಸರಾಸರಿಯಲ್ಲಿ 192 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಹೀಗಾಗಿ ಅವರು ಅವರು ಟೀಕೆಗಳನ್ನು ಎದುರಿಸುವಂತಾಗಿದೆ. ಇದೀಗ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಕೊಹ್ಲಿ ದಿಗ್ಗಜರ ದಾಖಲೆಗಳನ್ನು ಮುರಿಯುವ ಅವಕಾಶವನ್ನು ಹೊಂದಿದ್ದಾರೆ.

ಲಾರಾ-ಸಚಿನ್ ದಾಖಲೆ

ಬ್ರಿಯಾನ್ ಲಾರಾ ಆಸ್ಟ್ರೇಲಿಯಾದಲ್ಲಿ 19 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 35 ಇನ್ನಿಂಗ್ಸ್‌ಗಳಲ್ಲಿ 4 ಶತಕ ಮತ್ತು 4 ಅರ್ಧ ಶತಕಗಳ ನೆರವಿನಿಂದ 1469 ರನ್‌ಗಳು ಕಲೆ ಹಾಕಿದ್ದಾರೆ. ಆಸ್ಟ್ರೇಲಿಯಾದಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿದೇಶಿ ಆಟಗಾರರ ಪೈಕಿ ಲಾರಾ 10ನೇ ಸ್ಥಾನದಲ್ಲಿದ್ದಾರೆ. ಈಗ ಲಾರಾ ಅವರ ದಾಖಲೆಯನ್ನು ಹಿಂದಿಕ್ಕಲು ಕೊಹ್ಲಿ ಅವರಿಗೆ ಉತ್ತಮ ಅವಕಾಶವಿದೆ. ಕೊಹ್ಲಿ ಆಸ್ಟ್ರೇಲಿಯಾದಲ್ಲಿ 13 ಪಂದ್ಯಗಳ 25 ಇನ್ನಿಂಗ್ಸ್‌ಗಳಲ್ಲಿ 1352 ರನ್ ಗಳಿಸಿದ್ದಾರೆ. ಲಾರಾ ಅವರನ್ನು ಹಿಂದಿಕ್ಕಲು ವಿರಾಟ್ 118 ರನ್ ಗಳಿಸಬೇಕಿದೆ.

ಸಚಿನ್ 20 ಪಂದ್ಯಗಳ 38 ಇನ್ನಿಂಗ್ಸ್‌ಗಳಲ್ಲಿ 6 ಶತಕ ಮತ್ತು 7 ಅರ್ಧಶತಕಗಳೊಂದಿಗೆ 1809 ರನ್ ಗಳಿಸಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿದೇಶಿ ಆಟಗಾರರ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಜಾಕ್ ಹಾಬ್ಸ್ ಅಗ್ರಸ್ಥಾನದಲ್ಲಿದ್ದಾರೆ. ಅವರು 24 ಪಂದ್ಯಗಳಲ್ಲಿ 2493 ರನ್ ಗಳಿಸಿದ್ದಾರೆ. ಸಚಿನ್ ಅವರನ್ನು ಕೊಹ್ಲಿ ಹಿಂದಿಕ್ಕಬೇಕಾದರೆ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 458 ರನ್ ಗಳಿಸಬೇಕು. ಕೊಹ್ಲಿಗೆ ಇದು ದೊಡ್ಡ ವಿಷಯವಲ್ಲ, ಆದರೆ ಅವರ ಪ್ರಸ್ತುತ ಫಾರ್ಮ್ ಅನ್ನು ಪರಿಗಣಿಸಿದರೆ, ಈ ದಾಖಲೆಗಳನ್ನು ಮುರಿಯಲು ಕಮ್‌ಬ್ಯಾಕ್ ಮಾಡಬೇಕಾಗಿದೆ.

ಕಾಂಗೂರು ಪಡೆ ವಿರುದ್ಧ ಕೊಹ್ಲಿ ರೆಕಾರ್ಡ್

ಕೊಹ್ಲಿ 2011 ರಿಂದ ಕಾಂಗರೂ ಪಡೆ ವಿರುದ್ಧ 25 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅವರು 47.48 ಸರಾಸರಿಯಲ್ಲಿ 2042 ರನ್ ಗಳಿಸಿದ್ದಾರೆ. ಅವರ ಖಾತೆಯಲ್ಲಿ 8 ಶತಕ ಹಾಗೂ 5 ಅರ್ಧ ಶತಕಗಳಿವೆ. ಕೊಹ್ಲಿ ಅವರ ಗರಿಷ್ಠ ಸ್ಕೋರ್ 186 ರನ್. ಆಸ್ಟ್ರೇಲಿಯಾದಲ್ಲಿ ಕೊಹ್ಲಿ ಅವರು 13 ಪಂದ್ಯಗಳನ್ನು ಆಡಿದ್ದು, 54.08 ಸರಾಸರಿಯಲ್ಲಿ 1352 ರನ್ ಗಳಿಸಿದ್ದಾರೆ. ಕಾಂಗರೂ ನೆಲದಲ್ಲಿ 6 ಶತಕಗಳನ್ನು ಸಿಡಿಸಿದ್ದಾರೆ.

Story first published: Wednesday, November 6, 2024, 23:15 [IST]
Other articles published on Nov 6, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+