Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Virat Kohli: ವಿರಾಟ್ ಕೊಹ್ಲಿ ದೇಶ ಬಿಡುವುದು ಏಕೆ? ಭಾರತದ ಋಣ ಮುಗಿತಾ?

ಭಾರತ ತಂಡ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಇತ್ತೀಚೆಗೆ ಹೆಚ್ಚಾಗಿ ಲಂಡನ್‌ನಲ್ಲಿ ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ. ಎಲ್ಲರಿಗೂ ಗೊತ್ತಿರುವಂತೆ ವಿರಾಟ್ ಕೊಹ್ಲಿ ಲಂಡನ್‌ನಲ್ಲಿ ಮನೆ ಮಾಡಿದ್ದಾರೆ. ತಮ್ಮ ಪತ್ನಿ ಅನುಷ್ಕಾ ಶರ್ಮಾ, ಇಬ್ಬರ ಮಕ್ಕಳಾದ ವಾಮಿಕಾ ಮತ್ತು ಅಕಾಯ್ ಜೊತೆ ಅಲ್ಲೇ ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದಾರೆ. ಲಂಡನ್‌ ಬೀದಿಗಳಲ್ಲಿ ವಿರಾಟ್ ಕೊಹ್ಲಿ ಏಕಾಂಗಿ ಓಡಾಡುವ ಫೋಟೋಗಳು ಆಗಾಗ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗುತ್ತಿರುತ್ತವೆ.

ವಿರಾಟ್ ಕೊಹ್ಲಿ ಭಾರತವನ್ನು ತೊರೆದು ಲಂಡನ್‌ನಲ್ಲಿ ನೆಲೆಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಲೇ ಇದೆ. ಆದರೆ ಇದುವರೆಗೆ ಈ ಕುರಿತು ಯಾರು ಸ್ಪಷ್ಟನೆ ಕೊಟ್ಟಿಲ್ಲ. ಇದೀಗ ವಿರಾಟ್ ಕೊಹ್ಲಿ ಅವರ ಬಾಲ್ಯದ ಕೋಚ್ ರಾಜ್ ಕುಮಾರ್ ಶರ್ಮಾ ಈ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ.

Virat Kohli to leave India soon and settle in London

ರಾಜ್ ಕುಮಾರ್ ಶರ್ಮಾ ಹೇಳಿಕೆ ಪ್ರಕಾರ ವಿರಾಟ್ ಕೊಹ್ಲಿ ತಮ್ಮ ಕುಟುಂಬದ ಜೊತೆ ಶೀಘ್ರದಲ್ಲೇ ಲಂಡನ್‌ಗೆ ಸ್ಥಳಾಂತರವಾಗಲಿದ್ದಾರಂತೆ. ಆದರೆ ಈ ಸಂಬಂಧ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ. ಅನುಷ್ಕಾ ಶರ್ಮಾ ಅವರು ಎರಡನೇ ಮಗುವಿನ ಗರ್ಭದಾರಣೆಯ ಸಂದರ್ಭದ ಬಳಿಕ ವಿರಾಟ್ ಕೊಹ್ಲಿ ಕುಟುಂಬ ಲಂಡನ್‌ನಲ್ಲೇ ಬಹುತೇಕ ಸಮಯ ಕಳೆಯುತ್ತಿದೆ ಎಂದು ವರದಿಗಳು ಹೇಳಿವೆ. ಇಂತಹ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಬಾಲ್ಯದ ಕೋಚ್ ಹೇಳಿಕೆ ಚರ್ಚೆಗೆ ವೇದಿಕೆಯಾಗಿದೆ.

ವಿರಾಟ್ ಕೊಹ್ಲಿ ಭಾರತವನ್ನು ಬಿಟ್ಟು ಲಂಡನ್‌ನಲ್ಲಿ ನೆಲಸುವ ವಿಚಾರ ತಿಳಿದ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಎಲ್ಲವನ್ನು ಗಳಿಸಿದ ವಿರಾಟ್ ಕೊಹ್ಲಿ ಐಷಾರಾಮಿ ಜೀವನ ನಡೆಸಲು ಲಂಡನ್‌ಗೆ ಹೋಗಬೇಕಾ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ. 2023 ರಿಂದ ಕೊಹ್ಲಿ ಲಂಡನ್‌ನಲ್ಲಿ ಹೆಚ್ಚಾಗಿ ತಿರುಗಾಡುತ್ತಿರುವುದು ಕಂಡು ಬಂದಿದೆ.

ಬಾಲ್ಯದ ಕೋಚ್ ಹೇಳಿದ್ದೇನು?

ಸಂದರ್ಶನವೊಂದರಲ್ಲಿ ಮಾತನಾಡಿರುವ ರಾಜ್ ಕುಮಾರ್ ಶರ್ಮಾ, ವಿರಾಟ್ ಕೊಹ್ಲಿ ಲಂಡನ್‌ನಲ್ಲಿ ನೆಲಸುತ್ತಿರುವುದು ನಿಜ. ಪತ್ನಿ ಅನುಷ್ಕಾ ಶರ್ಮಾ ಮತ್ತು ಮಕ್ಕಳ ಜೊತೆ ವಿರಾಟ್ ಕೊಹ್ಲಿ ಭಾರತವನ್ನು ಬಿಟ್ಟು ಲಂಡನ್‌ಗೆ ಸ್ಥಳಾಂತರವಾಗಲು ಯೋಜನೆ ಹಾಕಿಕೊಂಡಿದ್ದಾರೆ. ಶೀಘ್ರದಲ್ಲೇ ಕೊಹ್ಲಿ ಭಾರತವನ್ನು ಬಿಟ್ಟು ಲಂಡನ್‌ಗೆ ಸ್ಥಳಾಂತರವಾಗಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಕೊಹ್ಲಿ ದೇಶ ಬಿಡುತ್ತಿರುವುದು ಏಕೆ?

ವಿರಾಟ್ ಕೊಹ್ಲಿ ಲಂಡನ್‌ಗೆ ಶಿಫ್ಟ್ ಆಗುತ್ತಿರುವುದು ಏಕೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಇದಕ್ಕೆ ಈ ಹಿಂದೆಯೇ ಕಾರಣವನ್ನು ವಿರಾಟ್ ಕೊಹ್ಲಿ ಕೊಟ್ಟಿದ್ದಾರೆ. ಲಂಡನ್‌ನಲ್ಲಿ ಕ್ರಿಕೆಟ್ ಆಟವನ್ನು ಆಡುವುದು ಕಡಿಮೆ. ಆದ್ದರಿಂದ ಕೊಹ್ಲಿ ಜನ ಸಾಮಾನ್ಯರಂತೆ ಬೀದಿಗಳಲ್ಲಿ ಸುಲಭವಾಗಿ ತಿರುಗಾಡಬಹುದು. ಆದರೆ ಭಾರತದಲ್ಲಿ ವಿರಾಟ್ ಕೊಹ್ಲಿ ಹೀಗೆ ಮಾಡಲು ಸಾಧ್ಯವಿಲ್ಲ. ಏಕೆಂದರೆ ವಿರಾಟ್ ಕೊಹ್ಲಿ ಕೋಟ್ಯಾಂತರ ಅಭಿಮಾನಿಗಳು ಎಲ್ಲೆಡೆ ಹೊಂದಿದ್ದಾರೆ. ಈ ಹಿಂದೆಯೂ ಒಮ್ಮೆ ಸಂದರ್ಶನವೊಂದರಲ್ಲಿ ಕೊಹ್ಲಿ ತಮ್ಮ ಕುಟುಂಬದೊಂದಿಗೆ ಆರಾಮವಾಗಿ ಲಂಡನ್‌ನಲ್ಲಿ ಓಡಾಡಬಹುದು ಎಂದು ಹೇಳಿಕೊಂಡಿದ್ದರು. ಗೌಪ್ಯತೆ ಕಾಪಾಡಿಕೊಳ್ಳಲು ಬಹುಶ ವಿರಾಟ್ ಕೊಹ್ಲಿ ಲಂಡನ್‌ನಲ್ಲಿ ನೆಲಸುತ್ತಿದ್ದಾರೆ.

Story first published: Friday, December 20, 2024, 21:59 [IST]
Other articles published on Dec 20, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+