ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭವಿಷ್ಯದ ನಾಯಕನಾಗಿ ಕನ್ನಡಿಗ ಕೆಎಲ್ ರಾಹುಲ್ ಬೆಳೆಸಲು ಗವಾಸ್ಕರ್ ಸಲಹೆ

Virat Kohli to quit T20I captaincy, Sunil Gavaskar said groom KL Rahul as future captain

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟಿ20 ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರ ಪ್ರಕಟಿಸಿದ್ದಾರೆ. ಈ ನಿರ್ಧಾರದ ಬಳಿಕ ಈಗ ಮುಂದಿನ ನಾಯಕತ್ವದ ವಿಚಾರವಾಗಿ ಸಾಕಷ್ಟು ಚರ್ಚೆಗಳು ಆರಂಭವಾಗಿದೆ. ತಂಡದ ನಾಯಕತ್ವ ಯಾರಿಗೆ ಸೂಕ್ತ ಎಂಬ ಬಗ್ಗೆ ನಾನಾ ಚರ್ಚೆಗಳು ಆರಂಭವಾಗಿದೆ. ಈ ಸಂದರ್ಭದಲ್ಲಿ ಭಾರತೀಯ ಕ್ರಿಕೆಟ್‌ನ ಮಾಜಿ ನಾಯಕ ದಿಗ್ಗಜ ಆಟಗಾರ ಸುನಿಲ್ ಗವಾಸ್ಕರ್ ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ.

ಟಿ20 ನಾಯಕತ್ವದಿಂದ ಕೆಳಗಿಳಿಯಲು ವಿರಾಟ್ ಕೊಹ್ಲಿ ನಿರ್ಧಾರ!ಟಿ20 ನಾಯಕತ್ವದಿಂದ ಕೆಳಗಿಳಿಯಲು ವಿರಾಟ್ ಕೊಹ್ಲಿ ನಿರ್ಧಾರ!

ಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ನಾಯಕನನ್ನಾಗಿ ರೂಪುಗೊಳಿಸಲು ಬಿಸಿಸಿಐ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದು ಗವಾಸ್ಕರ್ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾದ ಉಪನಾಯಕನಾಗಿ ಕೆಎಲ್ ರಾಹುಲ್‌ರನ್ನು ನೇಮಿಸಬೇಕು. ಈ ಮೂಲಕ ಭವಿಷ್ಯದ ನಾಯಕನನ್ನಾಗಿ ಬೆಳೆಸಬೇಕಿದೆ ಎಂದು ಸುನಿಲ್ ಗವಾಸ್ಕರ್ ಸಲಹೆಯನ್ನು ನೀಡಿದ್ದಾರೆ.

ಕೊಹ್ಲಿ ನಂತರ ರೋಹಿತ್ ಮಾತ್ರ ಅಲ್ಲ ನಾಯಕತ್ವದ ರೇಸ್ ನಲ್ಲಿರೋ ಈ ಮೂವರು ಯಾರು? | Oneindia Kannada

ಬಿಸಿಸಿಐ ದೂರದೃಷ್ಟಿಯೊಂದಿಗೆ ನಿರ್ಧಾರವನ್ನು ತೆಗೆದುಕೊಂಡರೆ ಅದು ಬಹಳ ಉತ್ತಮ ವಿಷಯವಾಗಲಿದೆ. ಅದು ತಂಡಕ್ಕೂ ಬಯಳ ಅಗತ್ಯವಿದೆ. ಭಾರತ ಯುವ ಆಟಗಾರನನ್ನು ನಾಯಕನಾಗಿ ಬೆಳೆಸುವತ್ತ ಗಮನ ನೀಡಿದರೆ ಕೆಎಲ್ ರಾಹುಲ್ ಅದಕ್ಕೆ ಉತ್ತಮ ಆಯ್ಕೆಯಾಗುತ್ತಾರೆ. ಅದು ಉತ್ತಮವಾಗಿ ಪ್ರದರ್ಶನವನ್ನು ಕೂಡ ನೀಡುತ್ತಿದ್ದಾರೆ. ಇತ್ತೀಚೆಗೆ ಇಂಗ್ಲೆಂಡ್‌ನಲ್ಲಿಯೂ ಕೆಎಲ್ ರಾಹುಲ್ ಅವರ ಬ್ಯಾಟಿಂಗ್ ಅದ್ಭುತವಾಗಿತ್ತು. ಅವರು ಐಪಿಎಲ್ ಹಾಗೂ ಏಕದಿನ ಕ್ರಿಕೆಟ್‌ನಲ್ಲಿಯೂ ಬಹಳ ಸಮಯಗಳಿಂದ ಸ್ಥಿರವಾಗಿ ಅತ್ಯುತ್ತಮ ಪ್ರದರ್ಶನ ನೀಡಿಕೊಂಡು ಬಂದಿದ್ದಾರೆ. ಅವರನ್ನು ತಂಡದ ಉಪನಾಯಕನನ್ನಾಗಿ ಆಯ್ಕೆ ಮಾಡಬಹುದು ಎಂದು ಸುನಿಲ್ ಗವಾಸ್ಕರ್ ಕೆಎಲ್ ರಾಹುಲ್ ಸಾಮರ್ಥ್ಯವನ್ನು ಪ್ರಶಂಶಿಸಿದ್ದಾರೆ.

ಟಿ20 ನಾಯಕತ್ವಕ್ಕೆ ವಿರಾಟ್ ವಿದಾಯ: ರೋಹಿತ್ ಹೊರತು ಬೇರೆ ಆಯ್ಕೆ ಇಲ್ಲ ಎನ್ನುತ್ತಿವೆ ಈ ಅಂಕಿಅಂಶಗಳುಟಿ20 ನಾಯಕತ್ವಕ್ಕೆ ವಿರಾಟ್ ವಿದಾಯ: ರೋಹಿತ್ ಹೊರತು ಬೇರೆ ಆಯ್ಕೆ ಇಲ್ಲ ಎನ್ನುತ್ತಿವೆ ಈ ಅಂಕಿಅಂಶಗಳು

ಇನ್ನು ಇದೇ ಸಂದರ್ಭದಲ್ಲಿ ಕರ್ನಾಟಕದ ಬ್ಯಾಟ್ಸ್‌ಮನ್ ಐಪಿಎಲ್‌ನಲ್ಲಿ ನೀಡಿಕೊಂಡು ಬಂದ ಗುಣಮಟ್ಟದ ನಾಯಕತ್ವದ ಕೌಶಲ್ಯದ ಬಗ್ಗೆಯೂ ಕೆಎಲ್ ರಾಹುಲ್ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಕೆಎಲ್ ರಾಹುಲ್ ಐಪಿಎಲ್‌ನಲ್ಲಿ ಪಂಜಾನ್ ಕಿಂಗ್ಸ್ ತಂಡವನ್ನು ಐಪಿಎಲ್‌ನಲ್ಲಿ ಮುನ್ನಡೆಸಿಕೊಂಡು ಬರುತ್ತಿದ್ದಾರೆ. "ಐಪಿಎಲ್‌ನಲ್ಲಿ ಕೆಎಲ್ ರಾಹುಲ್ ನಾಯಕನಾಗಿ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದಾರೆ. ನಾಯಕತ್ವದ ಹೊರೆ ಬ್ಯಾಟಿಂಗ್‌ನ ಮೇಲೆ ಬೀಳದಂತೆ ನೊಡಿಕೊಳ್ಳುಯವಲ್ಲಿಯೂ ಅವರು ಯಶಸ್ವಿಯಾಗಿದ್ದಾರೆ. ಹೀಗಾಗಿ ಇವರ ಹೆಸರನ್ನು ಆಯ್ಕೆಗೆ ಪರಿಗಣಿಸಬಹುದು" ಎಂದಿದ್ದಾರೆ ಸುನಿಲ್ ಗವಾಸ್ಕರ್.

ಹಳೆ ಯುಜಿ ವಾಪಸ್ಸಾಗ್ತಾರೆ: ಉತ್ತಮ ಪ್ರದರ್ಶನದ ಭರವಸೆಯಿತ್ತ ಚಾಹಲ್ಹಳೆ ಯುಜಿ ವಾಪಸ್ಸಾಗ್ತಾರೆ: ಉತ್ತಮ ಪ್ರದರ್ಶನದ ಭರವಸೆಯಿತ್ತ ಚಾಹಲ್

ಸದ್ಯ ಟೀಮ್ ಇಂಡಿಯಾದ ಸೀಮಿತ ಓವರ್‌ಗಳ ಉಪನಾಯಕನ ಸ್ಥಾನವನ್ನು ರೋಹಿತ್ ಶರ್ಮಾ ವಹಿಸಿಕೊಂಡಿದ್ದು ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದ ಬಳಿಕ ನಾಯಕನ ಸ್ಥಾನವನ್ನು ರೋಹಿತ್ ಶರ್ಮಾ ವಹಿಸಿಕೊಳ್ಳುವ ಸಾಧ್ಯತೆಯಿದೆ. ಆದರೆ ಬಿಸಿಸಿಐ ಈ ಬಗ್ಗೆ ತನ್ನ ಅಂತಿಮ ನಿರ್ಧಾರವನ್ನು ಇನ್ನಷ್ಟೇ ತೆಗೆದುಕೊಳ್ಳಬೇಕಿದೆ. 34ರ ಹರೆಯದ ರೋಹಿತ್ ಶರ್ಮಾ ತಾನೋರ್ವ ಸ್ವಾಭಾವಿಕ ನಾಯಕ ಎಂಬುದನ್ನು ಈಗಾಗಲೇ ಸಾಬೀತುಪಡಿಸಿದ್ದಾರೆ. ಅಲ್ಲದೆ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಶ್ರೇಷ್ಠ ಆಟಗಾರರಲ್ಲಿ ಒಬ್ಬರೆನಿಸಿದ್ದಾರೆ ರೋಹಿತ್. ಮೂರು ಮಾದರಿಯ ಕ್ರಿಕೆಟ್‌ನಲ್ಲಿಯೂ ಶತಕಗಳಿಸಿದ ಕೆಲವೇ ಆಟಗಾರರ ಪೈಕಿ ರೋಹಿತ್ ಶರ್ಮಾ ಕೂಡ ಒಬ್ಬರಾಗಿದ್ದಾರೆ. ಈಗಾಗಲೇ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ 19 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದು 15 ಪಂದ್ಯಗಳಲ್ಲಿ ಗೆಲುವಿನ ದಾಖಲೆ ಹೊಂದಿದ್ದು ನಾಲ್ಕು ಪಂದ್ಯಗಳಲ್ಲಿ ಮಾತ್ರವೇ ಸೋಲು ಕಂಡಿದ್ದಾರೆ.

Story first published: Friday, September 17, 2021, 10:14 [IST]
Other articles published on Sep 17, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X