Virat Kohli: ಐಪಿಎಲ್ 2023ರಲ್ಲಿ ರೋಹಿತ್ ಶರ್ಮಾಗಿಂತ ವಿರಾಟ್ ಕೊಹ್ಲಿ ಹೆಚ್ಚು ರನ್ ಗಳಿಸುತ್ತಾರೆ; ರವಿಶಾಸ್ತ್ರಿ
ಭಾನುವಾರ, ಏಪ್ರಿಲ್ 2ರಂದು ಬೆಂಗಳೂರಿನಲ್ಲಿ ನಡೆದ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ 8 ವಿಕೆಟ್‌ಗಳ ಅಮೋಘ ಗೆಲುವು ಸಾಧಿಸಿತು. ಆರ್‌ಸಿಬಿ ಗೆಲುವಿನಲ್ಲಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅತ್ಯುತ್ತಮ ರನ್ ಕಾಣಿಕೆ ನೀಡಿದರು.
ಇದೇ ವೇಳೆ, ಭಾರತದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಅವರು 2023ರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಅವರಿಗಿಂತ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೆಚ್ಚು ರನ್ ಗಳಿಸಲು ಬೆಂಬಲಿಸಿದ್ದಾರೆ. ಭಾನುವಾರದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 82 ರನ್ ಗಳಿಸಿದರೆ, ರೋಹಿತ್ ಶರ್ಮಾ ಕೇವಲ 1 ರನ್ ಗಳಿಸಿ ಔಟಾದರು.

ಮುಂಬೈ ಇಂಡಿಯನ್ಸ್ ಮತ್ತು ಆರ್‌ಸಿಬಿ ತಂಡಗಳ ನಡುವಿನ ಪಂದ್ಯದ ವೇಳೆ ಮಾತನಾಡಿದ ರವಿಶಾಸ್ತ್ರಿ, ವಿರಾಟ್ ಕೊಹ್ಲಿಗೆ ದೀರ್ಘವಾದ ಬ್ಯಾಟಿಂಗ್ ಮಾಡುವ ಪಾತ್ರವಿದ್ದು, ಅದು ಅವರಿಗೆ ಹೆಚ್ಚು ರನ್ ಗಳಿಸಲು ಅನುವು ಮಾಡಿಕೊಡುತ್ತದೆ. ಆದರೆ ರೋಹಿತ್ ಶರ್ಮಾ ತಮ್ಮ ತಂಡಕ್ಕಾಗಿ ಕಡಿಮೆ ಸಮಯದಲ್ಲಿ ಸ್ಫೋಟಕ ಇನ್ನಿಂಗ್ಸ್ ಆಡುವ ಜವಾಬ್ದಾರಿ ಎಂದರು.
"ವಿರಾಟ್ ಕೊಹ್ಲಿ ಆರ್‌ಸಿಬಿ ತಂಡಕ್ಕಾಗಿ ದೀರ್ಘ ಬ್ಯಾಟಿಂಗ್ ಮಾಡಬೇಕಾಗಿರುವುದರಿಂದ ಆತನಿಗೆ ಅಧಿಕೆ ರನ್‌ಗಳನ್ನು ಪಡೆಯಲು ಅವಕಾಶವಿದೆ. ಮತ್ತೊಂದೆಡೆ, ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಅವರಿಂದ ಕಡಿಮೆ ಸಮಯದಲ್ಲಿ ಸ್ಫೋಟಕ ಬ್ಯಾಟಿಂಗ್ ನೋಡಬಹುದು. ಹೀಗಾಗಿ ವಿರಾಟ್ ಕೊಹ್ಲಿ 2023ರ ಐಪಿಎಲ್ ಪಂದ್ಯಾವಳಿಯಲ್ಲಿ ರೋಹಿತ್ ಶರ್ಮಾಗಿಂತ ಹೆಚ್ಚು ರನ್ ಗಳಿಸುತ್ತಾರೆ," ಎಂದು ರವಿಶಾಸ್ತ್ರಿ ಅಭಿಪ್ರಾಯಪಟ್ಟರು.

ಐಪಿಎಲ್ ಸಮೀಕ್ಷೆ ಬಂದ ನಂತರ ಕಾಮೆಂಟೇಟರ್ ರವಿಶಾಸ್ತ್ರಿ ಅವರಿಂದ ಈ ಹೇಳಿಕೆ ಬಂದಿದೆ. ಈ ಬಾರಿಯ ಐಪಿಎಲ್ ಋತುವಿನಲ್ಲಿ ಯಾರು ಹೆಚ್ಚು ರನ್ ಗಳಿಸುತ್ತಾರೆ? ವಿರಾಟ್ ಕೊಹ್ಲಿ ಅಥವಾ ರೋಹಿತ್ ಶರ್ಮಾ? ಎಂದು ವೀಕ್ಷಕರನ್ನು ಕೇಳಲಾಗಿತ್ತು. ವಿರಾಟ್ ಕೊಹ್ಲಿ ಪರ ಶೇ.67ರಷ್ಟು ಜನರು ಮತ ಹಾಕಿದರೆ, ಶೇ.33ರಷ್ಟು ಜನರು ಮಾತ್ರ ರೋಹಿತ್ ಶರ್ಮಾ ಪರ ಹಾಕಿದ್ದಾರೆ. ಹೀಗಾಗಿ ಜನರ ತೀರ್ಪು ಆರ್‌ಸಿಬಿ ತಂಡದ ಬ್ಯಾಟ್ಸ್‌ಮನ್ ಪರವಾಗಿದೆ.
ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 49 ಎಸೆತಗಳಲ್ಲಿ 82 ರನ್ ಗಳಿಸಿದ ವಿರಾಟ್ ಕೊಹ್ಲಿ ಆರ್‌ಸಿಬಿ ತಂಡವನ್ನು ಎಂಟು ವಿಕೆಟ್‌ಗಳಿಂದ ಸುಲಭ ಗೆಲ್ಲಿಸಲು ನೆರವಾದರು. ಇನ್ನು ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಆರಂಭದಿಂದಲೂ ಆರ್‌ಸಿಬಿ ಬೌಲರ್‌ಗಳ ವಿರುದ್ಧ ರನ್ ಗಳಿಸಲು ಪರದಾಡಿದರು ಮತ್ತು 10 ಎಸೆತಗಳಲ್ಲಿ ಕೇವಲ 1 ರನ್ ಗಳಿಸಿ ಔಟಾದರು.

ಕಳಪೆ ಫಾರ್ಮ್‌ನಿಂದ ಹೊರಬಂದಿರುವ ವಿರಾಟ್ ಕೊಹ್ಲಿ 2023ರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬ್ಯಾಟ್ ಮೂಲಕ ಮತ್ತೆ ಘರ್ಜಿಸುತ್ತಿದ್ದಾರೆ. ಏಕದಿನ ಮತ್ತು ಟೆಸ್ಟ್ ಕ್ರಿಕೆಟ್‌ನ 13 ಪಂದ್ಯಗಳಲ್ಲಿ ಆಡಿ 51.71 ಸರಾಸರಿಯಲ್ಲಿ 724 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧ ಎರಡು ಏಕದಿನ ಶತಕಗಳನ್ನು ಬಾರಿಸಿದರು ಮತ್ತು ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿಯ ಅಂತಿಮ ಟೆಸ್ಟ್ ಪಂದ್ಯದಲ್ಲಿ ಅದ್ಭುತ 186 ರನ್ ಗಳಿಸಿದರು.
ಇದೇ ವೇಳೆ ಟಿ20 ಹೊರತುಪಡಿಸಿ, 12 ಪಂದ್ಯಗಳನ್ನು ಅಡಿರುವ ರೋಹಿತ್ ಶರ್ಮಾ 43.78 ಸರಾಸರಿಯಲ್ಲಿ 613 ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಶತಕ ಮತ್ತು ಎರಡು ಅರ್ಧ ಶತಕಗಳು ಒಳಗೊಂಡಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications