ಐಪಿಎಲ್ 2021: ಆರ್‌ಸಿಬಿ ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರ ಮಾಡಿದ ವಿರಾಟ್ ಕೊಹ್ಲಿ

ಇತ್ತೀಚೆಗಷ್ಟೇ ಟೀಮ್ ಇಂಡಿಯಾ ಟಿ20 ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರ ಪ್ರಕಟಿಸಿದ್ದ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿಯೂ ಅಂಥಾದ್ದೇ ನಿರ್ಧಾರ ತೆಗೆದುಕೊಂಡಿದ್ದಾರೆ. ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ನಾಯಕನಾಗಿ ಈ ಆವೃತ್ತಿಯೇ ಕೊನೆ, ಮುಂಬರುವ ಆವೃತ್ತಿಯಲ್ಲಿ ತಾನು ಖೇವಲ ಆಟಗಾರನಾಗಿ ಮಾತ್ರವೇ ಮುಂದುವರಿಯಲಿದ್ದೇನೆ ಎಂದು ವಿರಾಟ್ ಕೊಹ್ಲಿ ಘೋಷಣೆ ಮಾಡಿದ್ದಾರೆ.
ಆರ್‌ಸಿಬಿ ತಂಡದ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು ಇದರಲ್ಲಿ ವಿರಾಟ್ ಕೊಹ್ಲಿ ಈ ಘೋಷಣೆ ಮಾಡಿದ್ದಾರೆ. ಈ ಮೂಲಕ 2013ರಿಂದ ಆರ್‌ಸಿಬಿ ತಂಡವನ್ನು ಮುನ್ನಡೆಸುತ್ತಿದ್ದ ವಿರಾಟ್ ಕೊಹ್ಲಿ ನಾಯತ್ವದ ಜವಾಬ್ಧಾರಿಯಿಂದ ಹಿಂದಕ್ಕೆ ಸರಿದಿದ್ದಾರೆ.
ಆರ್‌ಸಿಬಿ ನಾಯಕನಾಗಿ ವಿರಾಟ್ ಕೊಹ್ಲಿ ಮೊದಲ ಬಾರಿಗೆ ಜವಾಬ್ಧಾರಿ ವಹಿಸಿಕೊಂಡಿದ್ದು 2011ರ ಆವೃತ್ತಿಯಲ್ಲಿ. ಆದರೆ ಪೂರ್ಣ ಪ್ರಮಾಣದಲ್ಲಿ ಆರ್‌ಸಿಬಿ ತಂಡದ ನಾಯಕನಾಗಿ 2013ರ ಆವೃತ್ತಿಯ ಬಳಿಕ ವಿರಾಟ್ ಕೊಹ್ಲಿಯನ್ನು ಆರ್‌ಸಿಬಿ ನೇಮಿಸಿತ್ತು. ಈವರೆಗೆ ಆರ್‌ಸಿಬಿ ತಂಡವನ್ನು 132 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಮುನ್ನಡೆಸಿದ್ದಾರೆ. ಇದರಲ್ಲಿ 60 ಪಂದ್ಯಗಳಲ್ಲಿ ಆರ್‌ಸಿಬಿ ಗೆದ್ದಿದ್ದರೆ 65 ಪಂದ್ಯಗಲ್ಲಿ ಸೋಲು ಕಂಡಿದೆ. 3 ಪಂದ್ಯಗಳು ಟೈ ಫಲಿತಾಂಶ ಪಡೆದಿದ್ದು ನಾಲ್ಕು ಪಂದ್ಯಗಳು ಫಲಿತಾಂಶವಿಲ್ಲದೆ ಅಂತ್ಯವಾಗಿದೆ. 48.04ರಷ್ಟು ಗೆಲುವಿನ ಸರಾಸರಿಯನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ.
ಐಪಿಎಲ್‌ನಲ್ಲಿ ಆಟಗಾರನಾಗಿ ವಿರಾಟ್ ಕೊಹ್ಲಿ ಅಮೋಘ ಪ್ರದರ್ಶನ ನೀಡಲು ಯಶಸ್ವಿಯಾಗಿದ್ದಾರೆ. ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆ ವಿರಾಟ್ ಕೊಹ್ಲಿಗೆ ಇದೆ. ಆದರೆ ಆರ್‌ಸಿಬಿ ತಂಡದ ನಾಯಕನಾಗಿ ಹೇಳಿಕೊಳ್ಳುವಂತಾ ಯಶಸ್ಸು ವಿರಾಟ್ ಕೊಹ್ಲಿಗೆ ದಕ್ಕಲಿಲ್ಲ. ಅತ್ಯುತ್ತಮ ಆಟಗಾರರ ತಂಡವನ್ನು ಹೊಂದಿದ್ದರು ಕೂಡ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್‌ಸಿಬಿ ಚಾಂಫಿಯನ್ ಪಟ್ಟಕ್ಕೇರಲು ಸಾಧ್ಯವಾಗಲಿಲ್ಲ. 2016ರಲ್ಲಿ ರನ್ನರ್‌ಅಪ್ ಆಗಿದ್ದು ವಿರಾಟ್ ಕೊಹ್ಲಿ ನಾಯತ್ವದಲ್ಲಿ ಆರ್‌ಸಿಬಿ ಸಾಧಿಸಿದ ಅತ್ಯುತ್ತಮ ಸಾಧನೆಯಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications