IND vs BAN: ಗಂಗೂಲಿ-ಸೆಹ್ವಾಗ್ ಮಾಡಲು ಸಾಧ್ಯವಾಗದ ದಾಖಲೆಯತ್ತ ಕೊಹ್ಲಿ
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಹಲವು ದಾಖಲೆಗಳು ಮುರಿಯಲಿವೆ. ಉಭಯ ತಂಡಗಳ ಮೊದಲ ಪಂದ್ಯ ಸೆಪ್ಟೆಂಬರ್ 19 ರಿಂದ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಹಲವು ಆಟಗಾರರು ಹೊಸ ಸಾಧನೆ ಮಾಡುವ ಉತ್ಸಾಹದಲ್ಲಿದ್ದಾರೆ. ಅವರಲ್ಲಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಕೂಡ ಒಬ್ಬರು. ಬಾಂಗ್ಲಾದೇಶ ಟೆಸ್ಟ್ ಸರಣಿಯಲ್ಲಿ ಅವರು
ಐತಿಹಾಸಿಕ ದಾಖಲೆ ನಿರ್ಮಿಸಲಿದ್ದಾರೆ.

ಕೊಹ್ಲಿ ಹೊಸ ದಾಖಲೆ ಏನು?
ಇಲ್ಲಿಯವರೆಗೆ ಭಾರತದ ಮೂವರು ಬ್ಯಾಟರ್‌ಗಳು ಮಾತ್ರ ಈ ವಿಶೇಷವಾದ ದಾಖಲೆ ಮಾಡಲು ಸಮರ್ಥರಾಗಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 152 ರನ್ ಗಳಿಸಿದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ 9,000 ರನ್ ಪೂರೈಸಿದ ನಾಲ್ಕನೇ ಭಾರತೀಯ ಬ್ಯಾಟರ್ ಆಗಲಿದ್ದಾರೆ. ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಮತ್ತು ಸುನಿಲ್ ಗವಾಸ್ಕರ್ ಈಗಾಗಲೇ ಟೆಸ್ಟ್ ಕ್ರಿಕೆಟ್‌ನಲ್ಲಿ 9000 ರನ್ ಕಲೆ ಹಾಕಿದ್ದಾರೆ.
ವಿರಾಟ್ ಕೊಹ್ಲಿ ಇದುವರೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ 8,848 ರನ್ ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು 15,921 ರನ್ ಗಳಿಸಿ ಆಗ್ರ ಸ್ಥಾನದಲ್ಲಿದ್ದಾರೆ. ಪ್ರಸ್ತುತ ಆಡುತ್ತಿರುವ ಬ್ಯಾಟರ್‌ಗಳ ಪೈಕಿ ಇಂಗ್ಲೆಂಡ್ ಮಾಜಿ ನಾಯಕ ಜೋ ರೂಟ್ (12402) ಮತ್ತು ಆಸ್ಟ್ರೇಲಿಯಾ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ (9685) ಮಾತ್ರ 9000 ಟೆಸ್ಟ್ ರನ್‌ಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೊಹ್ಲಿ ವಿಡಿಯೋ ವೈರಲ್
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ತಂಡ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಅಭ್ಯಾಸ ನಡೆಸುತ್ತಿದೆ. ನೂತನ ಕೋಚ್ ಗೌತಮ್ ಗಂಭೀರ್ ನೇತೃತ್ವದಲ್ಲಿ ಟೀಮ್ ಇಂಡಿಯಾದ ಬಾಂಗ್ಲಾದೇಶವನ್ನು ಕಟ್ಟಿ ಹಾಕಲು ಸಜ್ಜಾಗಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಈ ವೇಳೆ ವಿರಾಟ್ ಕೊಹ್ಲಿ ಅವರ ವಿಡಿಯೋವೊಂದು ವೈರಲ್ ಆಗಿದೆ.
ಈ ವಿಡಿಯೋದಲ್ಲಿ ಭರ್ಜರಿ ಅಭ್ಯಾಸ ನಡೆಸಿರುವ ವಿರಾಟ್ ಕೊಹ್ಲಿ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ.
ಕೊಹ್ಲಿ ತಮ್ಮ ಬುಲೆಟ್ ಶಾಟ್‌ನಿಂದ ಎಂಎ ಚಿದಂಬರಂ ಸ್ಟೇಡಿಯಂನ ಗೋಡೆಯ ರಂಧ್ರವನ್ನೂ ಮಾಡಿದ್ದಾರೆ. ಈ ಶಾಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications