ಮೊದಲೆರೆಡು ಟೆಸ್ಟ್‌ಗೆ ವಿರಾಟ್ ಕೊಹ್ಲಿ ಅಲಭ್ಯ: ಟೀಮ್ ಇಂಡಿಯಾ ಆಡುವ ಬಳಗ ಹೇಗಿರಲಿದೆ?
ಹೈದರಾಬಾದ್‌ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ಮೊದಲ ಟೆಸ್ಟ್‌ಗೆ ಕ್ಷಣಗಣನೆ ಆರಂಭವಾಗಿದೆ. ಈ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳಲು ಟೀಮ್ ಇಂಡಿಯಾ ಪ್ಲ್ಯಾನ್ ಮಾಡಿಕೊಂಡಿದೆ. ಆದರೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣದಿಂದಲೇ ಆರಂಭಿಕ ಎರಡು ಟೆಸ್ಟ್‌ನಿಂದ ದೂರ ಸರಿದಿದ್ದಾರೆ. ಹೀಗಿದ್ದಾಗ ಟೀಮ್ ಇಂಡಿಯಾ ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎಂಬ ಕುತೂಹಲ ಹೆಚ್ಚಿದೆ.
ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬದಲಿಗೆ ಯಾರು ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಮೊದಲ ಎರಡು ಟೆಸ್ಟ್‌ಗಳಿಗೆ ವಿರಾಟ್ ಕೊಹ್ಲಿ ಬದಲಿಗೆ ಬಿಸಿಸಿಐ ಇನ್ನೂ ಘೋಷಣೆ ಮಾಡಿಲ್ಲ. ಜನವರಿ 25 ರಿಂದ ಪ್ರಾರಂಭವಾಗುವ ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ವೈಯಕ್ತಿಕ ಕಾರಣಗಳಿಂದ ವಿರಾಟ್ ಕೊಹ್ಲಿ ಭಾಗವಾಗುವುದಿಲ್ಲ ಎಂಬ ಮಾಹಿತಿ ಸೋಮವಾರದ ಮೊದಲು ಬೆಳಕಿಗೆ ಬಂದಿದೆ. ಈಗ ಆಡುವ 11ರಲ್ಲಿ ವಿರಾಟ್ ಬದಲಿಗೆ ಕೆಎಲ್ ರಾಹುಲ್ ಆಡುವ ಸಾಧ್ಯತೆ ಹೆಚ್ಚಿದೆ.

ವಿರಾಟ್ ಕೊಹ್ಲಿ ಬದಲಿಗೆ ಕೆಎಲ್ ರಾಹುಲ್ ಕಣಕ್ಕಿಳಿಯಲಿರುವ ಆಟಗಾರ. ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ವೇಳೆ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿದ್ದರು. ಆದರೆ, ಕೆಎಲ್ ರಾಹುಲ್ ದಕ್ಷಿಣ ಆಫ್ರಿಕಾ ವಿರುದ್ಧ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನೂ ಹೊತ್ತುಕೊಂಡರು. ಆದರೆ ಭಾರತದಲ್ಲಿನ ಟರ್ನಿಂಗ್ ಟ್ರ್ಯಾಕ್‌ನಿಂದಾಗಿ, ರಾಹುಲ್ ಕೇವಲ ಬ್ಯಾಟ್ಸ್‌ಮನ್ ಆಗಿ ಆಡುವುದನ್ನು ಕಾಣಬಹುದು. ರಾಹುಲ್ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯತೆ ಇದೆ.
ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವುದು ಯಾರು?
ಟೆಸ್ಟ್ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಾರೆ. ಇನ್ನು ಟೀಮ್ ಇಂಡಿಯಾದ ಮಿಡ್ಲ್ ಆರ್ಡರ್ ಬ್ಯಾಟಿಂಗ್ ಆಧಾರ. ಜವಾಬ್ದಾರಿಯುತ ಸ್ಥಾನದಲ್ಲಿ ಕಣಕ್ಕೆ ಇಳಿದು ತಂಡಕ್ಕೆ ನೆರವಾಗಬಲ್ಲ ಪ್ಲೇಯರ್. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಈ ಕ್ರಮಾಂಕದಲ್ಲಿ ಬ್ಯಾಟ್ ಮಾಡುವುದು ಯಾರು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಮೆಲ್ನೋಟಕ್ಕಂತು ಈ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಬ್ಯಾಟ್ ಮಾಡಬಹುದು ಎಂದು ನಂಬಲಾಗಿದೆ.

4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಜವಾಬ್ದಾರಿಯನ್ನು ಶ್ರೇಯಸ್ ಅಯ್ಯರ್ ಗೆ ನೀಡಬಹುದು. ಹೋಮ್ ಪಿಚ್‌ಗಳಲ್ಲಿ ಅಯ್ಯರ್ ಅವರ ದಾಖಲೆಯು ಅತ್ಯುತ್ತಮವಾಗಿದೆ. ಅಯ್ಯರ್ ಕಳೆದ ಎರಡು ವರ್ಷಗಳಿಂದ ಟೆಸ್ಟ್ ಭಾಗವಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಅವರಿಗೆ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ನೀಡಲಾಗುವುದು. ಮೊದಲಿನಂತೆ, ಶುಭಮನ್ ಗಿಲ್ ಇನ್ನೂ ಮೂರನೇ ಕ್ರಮಾಂಕದಲ್ಲಿ ಆಡುವುದನ್ನು ಕಾಣಬಹುದು ಆದರೆ ಆರಂಭಿಕ ಜವಾಬ್ದಾರಿಯು ನಾಯಕ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಕೈಯಲ್ಲಿದೆ.
ಶ್ರೇಯಸ್ ಅಯ್ಯರ್ ಭಾರತದಲ್ಲಿ ಉತ್ತಮವಾಗಿ ಪ್ರದರ್ಶನ ನೀಡಿದ್ದಾರೆ. ಶ್ರೇಯಸ್ ಅಯ್ಯರ್ ತವರಿನಲ್ಲಿ ನಡೆದ 7 ಪಂದ್ಯಗಳಲ್ಲಿ 3 ಅರ್ಧಶತಕ ಹಾಗೂ 1 ಶತಕ ಸೇರಿದಂತೆ ಒಟ್ಟು 430 ರನ್ ಸಿಡಿಸಿದ್ದಾರೆ. ಈ ವೇಳೆ ಅವರ ಸರಾಸರಿ 39.09 ಆಗಿದೆ.
ಆಡುವ ಸಂಭಾವ್ಯ ಹನ್ನೊಂದರ ಬಳಗ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications