Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Virat Kohli: ದಾಖಲೆಗಳ ಒಡೆಯನ ಮುಕುಟಕ್ಕೆ ಮತ್ತೊಂದು ಗರಿ

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕ್ರಿಕೆಟ್‌ನ ಎಲ್ಲ ಫಾರ್ಮೆಟ್‌ಗಳಲ್ಲೂ ಸೂಟ್ ಆಗುವ ಪ್ಲೇಯರ್. ಈ ಆಟಗಾರ ಸದ್ಯ ಐಪಿಎಲ್‌ನಲ್ಲಿ ತನ್ನ ಧಮಾಕೆದಾರ್ ಬ್ಯಾಟಿಂಗ್ ಹಾಗೂ ಫೀಲ್ಡಿಂಗ್‌ನಿಂದಲೇ ಅಭಿಮಾನಿಗಳ ಮನ ಗೆಲ್ಲುತ್ತಿದ್ದಾರೆ. ಇವರು ಕ್ರೀಸ್‌ಗೆ ಬಂದರೆ ದಾಖಲೆಗಳು ನಿರ್ಮಾಣವಾಗುತ್ತಿವೆ. ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ ವಿರಾಟ್‌ ದಾಖಲೆಗಳನ್ನು ನಿರ್ಮಿಸಿದ್ದಾರೆ.

ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್‌ನಲ್ಲಿ ಅಬ್ಬರಿಸಿ ಕೆಕೆಆರ್‌ ಬೌಲರ್‌ಗಳನ್ನು ದಂಡಿಸಿದರು. ಇವರ ಆಟಕ್ಕೆ ಬ್ರೇಕ್‌ ಹಾಕುವಲ್ಲಿ ಕೆಕೆಆರ್ ಬ್ಯಾಟರ್‌ಗಳು ವಿಫಲರಾದರು. ಆರ್‌ಸಿಬಿ ಬ್ಯಾಟಿಂಗ್‌ ವಿಭಾಗವನ್ನೇ ತನ್ನ ಹೆಗಲ ಮೇಲೆ ಹೊತ್ತು ಕೊಂಡು ಆಡಿದ ವಿರಾಟ್‌, ಅಮೋಘ ಇನ್ನಿಂಗ್ಸ್ ಕಟ್ಟಿದರು. ಪ್ರಸಕ್ತ ಸಾಲಿನಲ್ಲಿ ಸತತ ಎರಡನೇ ಅರ್ಧಶತಕ ಬಾರಿಸಿ ಅಬ್ಬರಿಸಿದರು. ಇವರ ಅಮೋಘ ಆಟದ ಪರಿಣಾಮವೇ ಆರ್‌ಸಿಬಿ ಸ್ಪರ್ಧಾತ್ಮಕ ಮೊತ್ತವನ್ನು ಕಲೆ ಹಾಕಿತು.

Virat Kohli Virat Kohli Equals Suresh Raina s Record Of Most Catches

ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ 80 ಪ್ಲಸ್ ರನ್ ಗಳಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ 80ಕ್ಕೂ ಹೆಚ್ಚು ರನ್ ಸಿಡಿಸಿದ ದಾಖಲೆ ಯುನಿವರ್ಸಲ್‌ ಬಾಸ್ ಕ್ರಿಸ್‌ ಗೇಲ್‌ ಅವರ ಹೆಸರಿಗಿದೆ. ಇವರು ಐಪಿಎಲ್‌ನಲ್ಲಿ 17 ಬಾರಿ ಈ ಸಾಧನೆ ಮಾಡಿದರು. ವಿರಾಟ್‌ ಕೊಹ್ಲಿ ಐಪಿಎಲ್‌ನಲ್ಲಿ 16ನೇ ಬಾರಿ ಈ ಸಾಧನೆ ಮಾಡಿದ್ದು, ಈ ವಿಚಾರದಲ್ಲಿ ಕೊಹ್ಲಿ ಡೇವಿಡ್ ವಾರ್ನರ್ ಅವರನ್ನು ಹಿಂದಿಕ್ಕಿದ್ದಾರೆ. ವಾರ್ನರ್ ಐಪಿಎಲ್ ಇತಿಹಾಸದಲ್ಲಿ ಇದುವರೆಗೆ 15 ಬಾರಿ ಇನ್ನಿಂಗ್ಸ್‌ನಲ್ಲಿ 80ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

IPL 2024: ಐಪಿಎಲ್ ಸಾರ್ವಕಾಲಿಕ ಸಿಕ್ಸರ್‌ಗಳ ಪಟ್ಟಿಯಲ್ಲಿ ಎಂಎಸ್ ಧೋನಿ ಹಿಂದಿಕ್ಕಿದ ವಿರಾಟ್ ಕೊಹ್ಲಿ

ವಿರಾಟ್‌ ಬೆಸ್ಟ್‌ ಫೀಲ್ಡರ್‌

IPL ಇತಿಹಾಸದಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ಸುರೇಶ್‌ ರೈನಾ ಎದ್ದು ಕಾಣುತ್ತದೆ. ಇಬ್ಬರೂ ಭಾರತದ ಶ್ರೇಷ್ಠ ಆಟಗಾರರು ಐಪಿಎಲ್‌ನಲ್ಲಿ 109-109 ಕ್ಯಾಚ್‌ಗಳನ್ನು ತೆಗೆದುಕೊಂಡಿದ್ದಾರೆ. ಆದ್ದರಿಂದ, ವಿರಾಟ್ ಕೊಹ್ಲಿ ಕೇವಲ ಒಂದು ಕ್ಯಾಚ್ ತೆಗೆದುಕೊಳ್ಳುವ ಮೂಲಕ ಐಪಿಎಲ್‌ನಲ್ಲಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಫೀಲ್ಡರ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ತಲುಪಿದ್ದಾರೆ.

Virat Kohli Virat Kohli Equals Suresh Raina s Record Of Most Catches

ಐಪಿಎಲ್‌ನಲ್ಲಿ ಅತಿಹೆಚ್ಚು ಕ್ಯಾಚ್‌ ಪಡೆದ ಪಟ್ಟಿಯಲ್ಲಿ ಕಿರನ್‌ ಪೋಲಾರ್ಡ್‌ ಮೂರನೇ ಸ್ಥಾನದಲ್ಲಿದ್ದಾರೆ. ಇವರು 103 ಕ್ಯಾಚ್‌ ಪಡೆದಿದ್ದಾರೆ. ರೋಹಿತ್ ಶರ್ಮಾ ಐಪಿಎಲ್ ಇತಿಹಾಸದಲ್ಲಿ 99 ಕ್ಯಾಚ್ ಪಡೆದಿದ್ದಾರೆ. ಸಿಎಸ್‌ಕೆ ತಂಡದ ರವೀಂದ್ರ ಜಡೇಜಾ 97 ಪಡೆದಿದ್ದಾರೆ. ಒಂದೇ ಫ್ರಾಂಚೈಸಿ ಪರ ಅತಿ ಹೆಚ್ಚು ಕ್ಯಾಚ್ ಪಡೆದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಗೆ ಅಗ್ರ ಸ್ಥಾನ.

Story first published: Saturday, March 30, 2024, 12:30 [IST]
Other articles published on Mar 30, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+