4ನೇ ಟೆಸ್ಟ್ ಪಂದ್ಯದಿಂದ ಕೊಹ್ಲಿ ಔಟ್: ರಹಾನೆ ನಾಯಕ
ಭಾರತ-ಆಸ್ಟ್ರೇಲಿಯಾ ನಡುವಿನ ನಾಲ್ಕನೆ ಹಾಗೂ ಅಂತಿಮ ಟೆಸ್ಟ್ ಪಂದ್ಯದಿಂದ ಕ್ಯಾಪ್ಟನ್ ಕೊಹ್ಲಿ ಹೊರಬಿದ್ದಿದ್ದಾರೆ. ಗಾಯದ ಸಮಸ್ಯೆಯಿಂದ ಬಳುತ್ತಿದ್ದ ಕೊಹ್ಲಿ ಕೊನೆಯ ಪಂದ್ಯದಿಂದ ಹಿಂದೆ ಸರಿದಿದ್ದಾರೆ.
ರಾಂಚಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್ ವೇಳೆ ಬೌಂಡರಿ ಬಳಿ ಫೀಲ್ಡಿಂಗ್ ಮಾಡುತ್ತಿದ್ದ ನಾಯಕ ವಿರಾಟ್ ಕೊಹ್ಲಿ ಅವರು ಚೆಂಡು ತಡೆಯುವ ಪ್ರಯತ್ನದಲ್ಲಿ ಕೆಳಗೆ ಬಿದ್ದು, ಬಲ ಭುಜಕ್ಕೆ ಗಾಯ ಮಾಡಿಕೊಂಡಿದ್ದರು. ಸದ್ಯ, ಗಾಯದಿಂದ ಚೇತರಿಸಿಕೊಳ್ಳದ ಕೊಹ್ಲಿ ನಾಲ್ಕನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.[ಮೊದಲ ಎಸೆತದಲ್ಲೇ ವಾರ್ನರ್ ಗೆ ಜೀವದಾನ: ಆಸೀಸ್ 1 ವಿಕೆಟ್ ಪತನ]

ಹೀಗಾಗಿ, ನಾಯಕ ವಿರಾಟ್ ಕೊಹ್ಲಿ ಅವರ ಅನುಪಸ್ಥಿತಿಯಲ್ಲಿ ಅಂಜಿಕ್ಯ ರಹಾನೆ ನಾಯಕರಾಗಿದ್ದು, ಕೊನೆಯ ಟೆಸ್ಟ್ ಪಂದ್ಯವನ್ನ ಮುನ್ನಡೆಸುತ್ತಿದ್ದಾರೆ. ಈ ಮೂಲಕ ಭಾರತ ಟೆಸ್ಟ್ ತಂಡಕ್ಕೆ ನಾಯಕನಾದ 33ನೇ ಆಟಗಾರ ಎಂಬ ಹೆಗ್ಗಳಿಕೆಗೆ ಅಜಿಂಕ್ಯ ರಹಾನೆ ಪಾತ್ರರಾಗಿದ್ದಾರೆ.
Story first published: Wednesday, January 3, 2018, 10:04 [IST]
Other articles published on Jan 3, 2018
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications