Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತದ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಆಸ್ಪತ್ರೆಗೆ ದಾಖಲು

Virat Kohli Wife Anushka Sharma admitted in hospital for Delivery

ನವದೆಹಲಿ: ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಸೋಮವಾರ (ಜನವರಿ 11) ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮ್ಮ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರುವ ಕೊಹ್ಲಿ ದಂಪತಿ ಆಸ್ಪತ್ರೆಗೆ ಹೋಗಿದೆ ಎಂದು ತಿಳಿದುಬಂದಿದೆ.

2017ರ ಡಿಸೆಂಬರ್‌ನಂದು ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಜೋಡಿ ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿತ್ತು. ಸದ್ಯ ಗರ್ಭಿಣಿಯಾಗಿರುವ ಅನುಷ್ಕಾ ಶರ್ಮಾ ಜನವರಿಯಲ್ಲಿ ಮಗುವಿಗೆ ಜನ್ಮ ನೀಡಲಿರುವುದಾಗಿ ಅವರ ವೈದ್ಯರು ತಿಳಿಸಿದ್ದರು.

ಮೊದಲ ಮಗುವಿಗೆ ಅಪ್ಪನಾಗುವ ಖುಷಿಯಲ್ಲಿರುವ ವಿರಾಟ್ ಕೊಹ್ಲಿ, ಈಗಾಗಲೇ ಆಸ್ಟ್ರೇಲಿಯಾದಿಂದ ಭಾರತಕ್ಕೆ ವಾಪಸ್ ಬಂದಾಗಿದೆ. ಆಸ್ಟ್ರೇಲಿಯಾ-ಭಾರತ ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯ ಆರಂಭಿಕ ಪಂದ್ಯದಲ್ಲಿ ಭಾಗವಹಿಸಿದ ಬಳಿಕ ಕೊಹ್ಲಿ ಪಿತೃತ್ವ ರಜೆ ಪಡೆದುಕೊಂಡಿದ್ದರು.

ಕೊಹ್ಲಿ ಯುಗದವರೇ ಆದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಕೂಡ ಇತ್ತೀಚೆಗೆ ಹೆಣ್ಣು ಮಗುವಿಗೆ ತಂದೆಯಾಗಿದ್ದರು. ಅಂದ್ಹಾಗೆ, ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ತಂಡ ಅಜಿಂಕ್ಯ ರಹಾನೆ ನಾಯಕತ್ವದಡಿಯಲ್ಲಿ ಟೆಸ್ಟ್ ಸರಣಿಯನ್ನು 1-1ರಿಂದ ಸರಿದೂಗಿಸಿಕೊಂಡಿದೆ. 3ನೇ ಪಂದ್ಯ ಡ್ರಾ ಆಗಿದ್ದು, 4ನೇ ಪಂದ್ಯ ಜನವರಿ 15ರಿಂದ ಆರಂಭವಾಗಲಿದೆ.

Story first published: Monday, January 11, 2021, 15:52 [IST]
Other articles published on Jan 11, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+