ವಿರಾಟ್ ಕೊಹ್ಲಿ ಖಂಡಿತಾ ಶತಕ ಬಾರಿಸಲಿದ್ದಾರೆ: ದ. ಆಫ್ರಿಕಾದ ದಿಗ್ಗಜನ ವಿಶ್ವಾಸ

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿ ಅಂತ್ಯವಾಗಿದ್ದು ಏಕದಿನ ಸರಣಿ ಇಂದಿನಿಂದ ಆರಂಭವಾಗಿದೆ. ಈ ಸರಣಿಯಲ್ಲಿ ಭಾರತ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸುತ್ತಿದ್ದು ಜಸ್ಪ್ರೀತ್ ಬೂಮ್ರಾ ಉಪ ನಾಯಕನ ಜವಾಬ್ಧಾರಿ ವಹಿಸಿಕೊಂಡಿದ್ದಾರೆ. ಆದರೆ ಮಾಜಿ ನಾಯಕ ವಿರಾಟ್ ಕೊಹ್ಲಿ ಪೂರ್ಣ ಪ್ರಮಾಣದ ಆಟಗಾರನಾಗಿ ಮಾತ್ರವೇ ಈ ಸರಣಿಯಿಂದ ತಮ್ಮ ವೃತ್ತಿ ಜೀವನವನ್ನು ಮುಂದುವರಿಸಲಿದ್ದಾರೆ.

ವಿರಾಟ್ ಕೊಹ್ಲಿ ಟಿ20 ಹಾಗೂ ಏಕದಿನ ನಾಯಕತ್ವದಿಂದ ಕೆಳಗಿಳಿದ ಬಳಿಕ ಈಗ ಟೆಸ್ಟ್ ನಾಯಕತ್ವವನ್ನು ಕೂಡ ತ್ಯಜಿಸಿದ್ದಾರೆ. ಹೀಗಾಗಿ ಕೊಹ್ಲಿ ಎಲ್ಲಾ ಮಾದರಿಯಲ್ಲಿಯೂ ಕೇವಲ ಆಟಗಾರನಾಗಿ ಮಾತ್ರವೇ ತಂಡದಲ್ಲಿ ಮುಂದುವರಿದಿದ್ದಾರೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಬಗ್ಗೆ ದಕ್ಷಿಣ ಆಫ್ರಿಕಾ ತಂಡದ ದಿಗ್ಗಜ ಆಟಗಾರ ಮಾರ್ನೆ ಮಾರ್ಕೆಲ್ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ದಕ್ಷಿಣ ಆಪ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಖಂಡಿತಾ ಶತಕವನ್ನು ಸಿಡಿಸಲಿದ್ದಾರೆ ಎಂದು ಮಾರ್ಕೆಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆ್ಯಶಸ್ ಟೆಸ್ಟ್: ಮದ್ಯಪಾನ ಮಾಡಿದ್ದ ಇಂಗ್ಲೆಂಡ್ ಆಟಗಾರರ ವಿರುದ್ಧ ತನಿಖೆಗೆ ಮುಂದಾದ ಇಸಿಬಿಆ್ಯಶಸ್ ಟೆಸ್ಟ್: ಮದ್ಯಪಾನ ಮಾಡಿದ್ದ ಇಂಗ್ಲೆಂಡ್ ಆಟಗಾರರ ವಿರುದ್ಧ ತನಿಖೆಗೆ ಮುಂದಾದ ಇಸಿಬಿ

33ರ ಹರೆಯದ ಭಾರತೀಯ ತಂಡದ ಪ್ರಮುಖ ಆಟಗಾರ ವಿರಾಟ್ ಕೊಹ್ಲಿ ಕಳೆದ ಎರಡು ವರ್ಷಗಳಿಂದ ಶತಕವನ್ನು ಸಿಡಿಸಲು ವಿಫಲವಾಗಿದ್ದಾರೆ. ದಕ್ಷಿಣ ಆಪ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅವಕಾಶವನ್ನು ಬಳಸಿಕೊಂಡು ತಮ್ಮ 71ನೇ ಅಂತಾರಾಷ್ಟ್ರೀಯ ಶತಕವನ್ನು ಬಾರಿಸಲಿದ್ದಾರೆ ಎನ್ನುವ ವಿಶ್ವಾಸವನ್ನು ಮಾರ್ನೆ ಮಾರ್ಕೆಲ್ ಹೇಳಿದ್ದಾರೆ.

ಸ್ಟಾರ್ ಸ್ಪೋರ್ಟ್ಸ್‌ನ ಗೇಮ್‌ಪ್ಲಾನ್ ಕಾರ್ಯಕ್ರಮದಲ್ಲಿ ಮಾತನಾಡಿದ ಮಾರ್ಕೆಲ್ ಈ ಸರಣಿಯಲ್ಲಿ ವಿರಾಟ್ ಕೊಹ್ಲಿಯ ಶತಕದ ಬಲ ಅಂತ್ಯವಾಗಲಿದೆ ಎಂದಿದ್ದಾರೆ. "ವಿರಾಟ್ ಕೊಹ್ಲಿ ಖಮಡಿತವಾಗಿಯೂ ಈ ಸರಣಿಯಲ್ಲಿ ಶತಕವನ್ನು ಬಾರಿಸಲಿದ್ದಾರೆ. ಈ ಸರಣಿಯನ್ನಾಡುವ ಎರಡು ತಾಣಗಳು ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡಲು ಇಷ್ಟಪಡುವಂತಾ ತಾಣಗಳಾಗಿದೆ. ಕೇಪ್‌ಟೌನ್ ಕೂಡ ಅದರಲ್ಲಿ ಒಂದಾಗಿದೆ. ಇನ್ನು ಅವರೇ ಹಲವಾರು ಸಂದರ್ಶನಗಳಲ್ಲಿ ಹೇಳಿರುವಂತೆ ನ್ಯೂಲ್ಯಾಂಡ್ಸ್ ಅಂಗಳದಲ್ಲಿ ಕೊಹ್ಲಿ ಬ್ಯಾಟಿಂಗ್ ಮಾಡುವುದನ್ನು ಇಷ್ಟಪಡುತ್ತಾರೆ. ನನ್ನ ಪ್ರಕಾರ ಈ ಸರಣಿಯ ಮೂರು ಪಂದ್ಯಗಳಲ್ಲಿ ಕೊಹ್ಲಿ ಶತಕ ಸಿಡಿಸುವುದನ್ನು ನಾನು ನೋಡಲಿದ್ದೇನೆ" ಎಂದು ಮಾರ್ನೆ ಮಾರ್ಕೆಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಭಾರತ ಹಾಗೂ ದಕ್ಷಿಣ ಆಪ್ರಿಕಾ ತಂಡಗಳ ನಡುವಿನ ಏಕದಿನ ಸರಣಿಯಲ್ಲಿ ಭಾರತವೇ ಗೆಲ್ಲುವ ಫೇರೀಟ್ ತಂಡ ಎಂದು ಹೇಳಿದ್ದಾರೆ. ಟೆಸ್ಟ್ ಸರಣಿಯಲ್ಲಿ ಸೋಲು ಕಂಡಿದ್ದರೂ ಏಕದಿನ ಸರಣಿಯಲ್ಲಿ ಭಾರತ ತಂಡ ಗೆಲ್ಲುವ ನೆಚ್ಚಿನ ತಂಡವಾಗಿದೆ ಎಂದಿದ್ದಾರೆ. "ನನ್ನ ಪ್ರಕಾರ ಭಾರತ ಸ್ಥಿರವಾದ ಪ್ರದರ್ಶನ ನೀಡುವ ತಂಡವಾಗಿದೆ. ಪಾರ್ಲ್‌ನಲ್ಲಿ ಆಡುವುದು ಭಾರತ ತಂಡಕ್ಕೆ ಸ್ವಲ್ಪ ಹೆಚ್ಚಿನ ಅನುಕೂಲವನ್ನು ಒದಗಿಸಲಿದೆ. ಅದರಲ್ಲೂ ಮೊದಲ ಎರಡು ಪಂದ್ಯಗಳು ಇಲ್ಲಿಯೇ ನಡೆಯುವ ಕಾರಣ ಭಾರತ 2-1 ಅಂತರದಿಂದ ಸರಣಿ ಗೆಲ್ಲಬಹುದು ಎಂದು ನಾನು ಊಹಿಸುತ್ತೇನೆ" ಎಂದಿದ್ದಾರೆ ಮಾರ್ನೆ ಮಾರ್ಕೆಲ್.

ನಾಯಕತ್ವ ಬಿಟ್ಟ ನಂತರ ಬ್ಯಾಟ್ಸ್‌ಮನ್‌ ಆಗಿ ಮೈದಾನದಲ್ಲಿ ಅಬ್ಬರಿಸಲು ವಿರಾಟ್ ಕೊಹ್ಲಿ ರೆಡಿನಾಯಕತ್ವ ಬಿಟ್ಟ ನಂತರ ಬ್ಯಾಟ್ಸ್‌ಮನ್‌ ಆಗಿ ಮೈದಾನದಲ್ಲಿ ಅಬ್ಬರಿಸಲು ವಿರಾಟ್ ಕೊಹ್ಲಿ ರೆಡಿ

ಈ ಹಿಂದಿನ ಬಾರಿ ಭಾರತ ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿಯನ್ನು ಆಡಿದ್ದಾಗ ಟೀಮ್ ಇಂಡಿಯಾ 5-1 ಅಂತರದ ಬೃಹತ್ ಗೆಲುವು ಸಾಧಿಸಿತ್ತು. ಈ ಬಾರಿ ಟೀಮ್ ಇಂಡಿಯಾವನ್ನು ಕೆಎಲ್ ರಾಹುಲ್ ಮುನ್ನಡೆಸುತ್ತಿದ್ದಾರೆ. ಅಲ್ಲದೆ ಅನುಭವಿ ರೋಹಿತ್ ಶರ್ಮಾ ಕೂಡ ಸರಣಿಗೆ ಅಲಭ್ಯವಾಗಿದ್ದಾರೆ.

ಭಾರತ ಏಕದಿನ ತಂಡ: ಕೆಎಲ್ ರಾಹುಲ್ (ನಾಯಕ), ಜಸ್ಪ್ರೀತ್ ಬುಮ್ರಾ, ಶಿಖರ್ ಧವನ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್, ಎಂಡಿ ಸಿರಾಜ್, ಜಯಂತ್ ಯಾದವ್, ನವದೀಪ್ ಸೈನಿ.

INS ರಣವೀರ್ ಯುದ್ಧನೌಕೆಯಲ್ಲಿ ಸ್ಫೋಟ,ಭಾರತೀಯ ನೌಕಾಪಡೆಯ 3 ಯೋಧರು ಹುತಾತ್ಮ | Oneindia Kannada

ದಕ್ಷಿಣ ಆಫ್ರಿಕಾದ ಏಕದಿನ ತಂಡ: ಟೆಂಬಾ ಬವುಮಾ (ನಾಯಕ), ಕೇಶವ್ ಮಹಾರಾಜ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಜುಬೇರ್ ಹಮ್ಜಾ, ಮಾರ್ಕೊ ಜಾನ್ಸೆನ್, ಜನೆಮನ್ ಮಲನ್, ಸಿಸಂಡಾ ಮಾಗಲಾ, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ವೇಯ್ನ್ ಪಾರ್ನೆಲ್, ಪ್ರೀ ಆಂಡಿಲ್ ಫೀಲ್ಯೂಕ್, ತಬ್ರೈಜ್ ಶಮ್ಸಿ, ಡಿವಾಹ್ಲಿನ್‌ವೇ, ರಾಸ್ಸಿ ವಾನ್ ಡೆರ್ ಡಸ್ಸೆನ್, ಕೈಲ್ ವೆರ್ರೆನ್ನೆ.

For Quick Alerts
ALLOW NOTIFICATIONS
For Daily Alerts
Story first published: Wednesday, January 19, 2022, 13:50 [IST]
Other articles published on Jan 19, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X