For Quick Alerts
ALLOW NOTIFICATIONS  
For Daily Alerts
 

ಓವಲ್ ಟೆಸ್ಟ್ ಪಂದ್ಯದ ಕೊನೆಯ ದಿನ ಕೊಹ್ಲಿ ಈ ಆಟಗಾರನನ್ನು ಮಿಸ್ ಮಾಡಿಕೊಳ್ಳಲಿದ್ದಾರೆ: ಲಕ್ಷ್ಮಣ್

Virat Kohli will miss Ravichandran Ashwin on Final day of the test match said VVS Laxman
ಟೆಸ್ಟ್ ಮ್ಯಾಚ್ ನಡುವೆ ಕ್ಲಿಕ್ ಮಾಡಿದ ಫೋಟೋ ವೈರಲ್! | Oneindia Kannada

ಲಂಡನ್, ಸೆಪ್ಟಂಬರ್ 3: ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದ ಎರಡು ದಿನಗಳ ಆಟ ಮುಕ್ತಾಯವಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ವಿರುದ್ಧ ಇಂಗ್ಲೆಂಡ್ ತಂಡ ಮುನ್ನಡೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಆರಂಭಿಸಿರುವ ಭಾರತ ಉತ್ತಮ ಆರಂಭ ಪಡೆದುಕೊಂಡಿದ್ದು ದ್ವಿತೀಯ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ಗೆ ಸವಾಲೊಡ್ಡುವ ವಿಶ್ವಾಸದಲ್ಲಿದೆ. ಆದರೆ ಪಂದ್ಯದ ಅಂತಿಮ ದಿನ ಭಾರತ ತಂಡಕ್ಕೆ ಸವಾಲು ಎದುರಾಗಲಿದ್ದು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಓರ್ವ ಆಟಗಾರನನ್ನು ಖಂಡಿತಾ ಮಿಸ್ ಮಾಡಿಕೊಳ್ಳಲಿದ್ದಾರೆ ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.

ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಹೀಗೆ ನೇರವಾಗಿ ಹೇಳಿದ್ದು ಟೀಮ್ ಇಂಡಿಯಾದ ಅನುಭವಿ ಬೌಲರ್ ಆರ್ ಅಶ್ವಿನ್ ವಿಚಾರವಾಗಿ. ಈ ಸರಣಿಯ ನಾಲ್ಕನೇ ಪಂದ್ಯದಲ್ಲಿಯೂ ಆನುಭವಿ ಆರ್ ಅಶ್ವಿನ್‌ಗೆ ಆಡುವ ಬಳಗದಲ್ಲಿ ಸ್ಥಾನ ದೊರಕಿಲ್ಲ. ಓವಲ್ ಅಂಗಳದಲ್ಲಿ ಅಶ್ವಿನ್ ಖಂಡಿತಾ ಆಡಲು ಇಳಿಯುತ್ತಾರೆ ಎಂಬ ಅಭಿಪ್ರಾಯಗಳು ಬಲವಾಗಿ ಕೇಳಿಬಂದಿದ್ದರೂ ಈ ಬಗ್ಗೆ ಸಾಕಷ್ಟು ಒತ್ತಾಯಗಳನ್ನು ಮಾಡಲಾಯಿತಾದರೂ ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಈ ಬಗ್ಗೆ ತಲೆಕೆಡಿಸಿಕೊಳ್ಳಲಿಲ್ಲ. ಹೀಗಾಗಿ ಸಾಕಷ್ಟು ಟೀಕೆಗಳು ಕೂಡ ವ್ಯಕ್ತವಾಗಿದೆ. ಈ ಹಿನ್ನೆಯಲ್ಲಿ ಲಕ್ಷ್ಮಣ್ ಪ್ರತಿಕ್ರಿಯಿಸಿದ್ದಾರೆ.

ಎಎಸ್‌ಪಿಎನ್ ಕ್ರಿಕ್‌ಇನ್ಫೋ ಜೊತೆಗೆ ಮಾತನಾಡಿದ ಲಕ್ಷ್ಮಣ್ ಆರ್ ಅಶ್ವಿನ್‌ಗೆ ಅವಕಾಶ ನೀಡದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಪಂದ್ಯವನ್ನು ವೀಕ್ಷಿಸುವಾಗ ನಾನು ಆರ್‌ ಅಶ್ವಿನ್‌ ಅವರನ್ನು ಆಡುವ ಬಳಗದಿಮದ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ವಿರಾಟ್ ಕೊಹ್ಲಿಗೆ ಅಶ್ವಿನ್ ಅತ್ಯುತ್ತಮವಾದ ಆಯ್ಕೆಯಾಗಿದ್ದರು. ಕೇವಲ ರನ್‌ಗಳಿಸುವ ಮೂಲಕ ಮಾತ್ರವಲ್ಲದೆ ವಿಕೆಟ್ ಪಡೆಯುವ ಮೂಲಕ ಇಂಗ್;ಲೆಂಡ್ ದಾಂಡಿಗರ ವಿರುದ್ಧ ಅವರು ಮೇಲುಗೈ ಸಾಧಿಸುತ್ತಿದ್ದರು. ಕೊನೆಯ ದಿನದಾಟಕ್ಕೆ ಬಂದಾಗ ವಿರಾಟ್ ಕೊಹ್ಲಿ ಖಂಡಿತವಾಗಿಯತೂ ಆರ್ ಅಶ್ವಿನ್ ಸೇವೆಯನ್ನು ಮಿಸ್ ಮಾಡಿಕೊಳ್ಳಲಿದ್ದಾರೆ ಎಂದು ಆರ್ ಅಶ್ವಿನ್ ವಿವರಿಸಿದ್ದಾರೆ.

ಮುಂದುವರಿದು ಮಾತನಾಡಿದ ಲಕ್ಷ್ಮಣ್ "ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಮಧ್ಯೆ ನಾವು ಹೋಲಿಕೆ ಮಾಡುವುದಾದರೆ ಅಲ್ಲಿ ಕೌಶಲ್ಯವನ್ನು ಗಣನೆಗೆ ತೆಗೆದುಕೊಳ್ಳಬೇಕು. ಸ್ಪಿನ್ನರ್ ಆಗಿ ಆರ್ ಅರ್ಶವಿನ್ ಜಡೇಜಾಗಿಂತ ತುಂಬಾ ಕೌಶಲ್ಯಯುತವಾದ ಸ್ಪಿನ್ನರ್" ಎಂದಿದ್ದಾರೆ ವಿವಿಎಸ್ ಲಕ್ಷ್ಮಣ್. ಆರ್ ಅಶ್ವಿನ್ ಟೀಮ್ ಇಂಡಿಯಾ ಪರವಾಗಿ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಬೌಲರ್‌ಗಳಲ್ಲಿ ಒಬ್ಬರೆನಿಸಿದ್ದಾರೆ. 79 ಪಂದ್ಯಗಳನ್ನು ಆಡಿರುವ ಅಶ್ವಿನ್ 413 ವಿಕೆಟ್ ಪಡೆದಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ರವೀಂದ್ರ ಜಡೇಜಾ ಬೌಲಿಂಗ್ ಕೌಶಲ್ಯದ ಬಗ್ಗೆಯೂ ಲಕ್ಷ್ಮಣ್ ಮಾತನಾಡಿದ್ದಾರೆ. ರವೀಂದ್ರ ಜಡೇಜಾ ಇತ್ತೀಚಿನ ದಿನಗಳಲ್ಲಿ ಬೌಲಿಂಗ್‌ನಲ್ಲಿ ಬಹಳ ಯಶಸ್ಸು ಸಾಧಿಸಿದ್ದಾರೆ ಎಂದು ಲಕ್ಷ್ಮಣ್ ಹೇಳಿದ್ದಾರೆ. ಖಂಡಿತವಾಗಿಯೂ ಜಡೇಜಾ ತುಂಬಾ ಪ್ರಗತಿಯನ್ನು ಕಂಡಿದ್ದಾರೆ ಎಂದಿರುವ ಲಕ್ಷ್ಮಣ್ ಅಶ್ವಿನ್‌ಗೆ ಹೋಲಿಸಿದರೆ ಕೌಶಲ್ಯದಲ್ಲಿ ಹಿಂದಿದ್ದಾರೆ ಎಂದು ವಿವರಿಸಿದ್ದಾರೆ. ಅದರಲ್ಲೂ ಓವಲ್ ಅಂಗಳದಂತಾ ಮೇಲ್ಮೈ ಹೊಂದಿರುವ ಅಂಗಳದಲ್ಲಿ ಆರ್ಅಶ್ವಿನ್ ಹೆಚ್ಚು ಪರಿಣಾಮಕಾರಿಯಾಗುತ್ತಾರೆ ಎಂದು ಲಕ್ಷ್ಮಣ್ ವಿವರಿಸಿದ್ದಾರೆ.

ಟೀಮ್ ಇಂಡಿಯಾ ಆಡುವ ಬಳಗ: ಕೆಎಲ್ ರಾಹುಲ್, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಜಿಂಕ್ಯ ರಹಾನೆ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ.

ಇಂಗ್ಲೆಂಡ್ ಆಡುವ ಬಳಗ: ಹಸೀಬ್ ಹಮೀದ್, ರೋರಿ ಬರ್ನ್ಸ್, ಡೇವಿಡ್ ಮಲನ್, ಜೋ ರೂಟ್ (ನಾಯಕ), ಕ್ರೇಗ್ ಓವರ್‌ಟನ್, ಒಲ್ಲಿ ಪೋಪ್, ಕ್ರಿಸ್ ವೋಕ್ಸ್, ಜಾನಿ ಬೈರ್‌ಸ್ಟೊವ್ (ವಿಕೆಟ್ ಕೀಪರ್), ಮೊಯೀನ್ ಅಲಿ, ಒಲ್ಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್,

Story first published: Saturday, September 4, 2021, 9:52 [IST]
Other articles published on Sep 4, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+