For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್‌ನಲ್ಲಿ ಕೊಹ್ಲಿ-ಜೈಸ್ವಾಲ್ ಇನ್ನಿಂಗ್ಸ್ ಓಪನ್?; ರೋಹಿತ್ ಶರ್ಮಾ ಸ್ಥಾನವೇನು?

ಜೂನ್ 2ರಿಂದ ಯುಎಸ್ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದ್ದು, ಮತ್ತೊಂದು ಕ್ರಿಕೆಟ್ ಹಬ್ಬಕ್ಕಾಗಿ ಜಗತ್ತಿನಾದ್ಯಂತದ ಅಭಿಮಾನಿಗಳು ಕಾತರರಾಗಿದ್ದಾರೆ.

ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಈಗಾಗಲೇ ಆತಿಥೇಯ ಯುಎಸ್‌ಎ ತಲುಪಿದ್ದು, ಜೂನ್ 5ರಂದು ಐರ್ಲೆಂಡ್ ವಿರುದ್ಧದ ಪಂದ್ಯದೊಂದಿಗೆ ತಮ್ಮ ಎರಡನೇ ಟಿ20 ವಿಶ್ವಕಪ್ ಪ್ರಶಸ್ತಿ ಅನ್ವೇಷಣೆಯನ್ನು ಪ್ರಾರಂಭಿಸಲಿದೆ.

Virat Kohli-Yashasvi Jaiswal Should Open batting Innings in T20 World Cup 2024 Says Wasim Jaffer

ಇದೇ ವೇಳೆ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡಕ್ಕೆ ವಿರಾಟ್ ಕೊಹ್ಲಿ ಇನ್ನಿಂಗ್ಸ್ ತೆರೆಯಬೇಕೆಂದು ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಸಲಹೆ ನೀಡಿದ್ದಾರೆ.

ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅಗ್ರ ಕ್ರಮಾಂಕದಲ್ಲಿ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಜೊತೆಗೂಡಬೇಕು ಎಂದು ವಾಸಿಂ ಜಾಫರ್ ಹೇಳಿದ್ದಾರೆ. ಇನ್ನು ನಾಯಕ ರೋಹಿತ್ ಶರ್ಮಾ ಅವರು 'ಉತ್ತಮ ಸ್ಪಿನ್ ಆಟಗಾರ' ಎಂದು ಪರಿಗಣಿಸಿ ಮೂರನೇ ಕ್ರಮಾಂಕಕ್ಕೆ ಇಳಿಯಬೇಕು ಎಂದರು.

ಈ ವರ್ಷದ ಆರಂಭದಲ್ಲಿ ತವರಿನಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧ ಭಾರತ ತಂಡದ ಟಿ20 ಸರಣಿಯ ವೇಳೆ, ರೋಹಿತ್ ಶರ್ಮಾ ಅವರು ಯಶಸ್ವಿ ಜೈಸ್ವಾಲ್ ಜೊತೆಗೆ ಇನ್ನಿಂಗ್ಸ್ ತೆರೆದರು. ಇದೀಗ ಇಬ್ಬರು ಪ್ರಸ್ತುತ ಮುಂದಿನ ವಾರದ ಐಸಿಸಿ ಟಿ20 ಪಂದ್ಯಾವಳಿಯಲ್ಲಿ ಭಾರತ ತಂಡಕ್ಕೆ ಇನ್ನಿಂಗ್ಸ್ ಆರಂಭಿಕರಾಗಿ ತಮ್ಮ ಪಾತ್ರಗಳನ್ನು ಪುನರಾವರ್ತಿಸಲು ನಿರ್ಧರಿಸಿದ್ದಾರೆ.

ಆದರೆ, 2024ರ ಟಿ20 ವಿಶ್ವಕಪ್ ಪ್ರಾರಂಭವಾಗುವ ಕೆಲವು ದಿನಗಳ ಮೊದಲು, ಮಾಜಿ ಬ್ಯಾಟರ್ ವಾಸಿಂ ಜಾಫರ್ ಅವರು ಆರಂಭಿಕ ಸಂಯೋಜನೆಯಲ್ಲಿ ಬದಲಾವಣೆಗೆ ಸಲಹೆ ನೀಡಿದ್ದಾರೆ.

ಮಾಜಿ ಟೆಸ್ಟ್ ಆಟಗಾರ ವಾಸಿಂ ಜಾಫರ್ ಅವರು ಎಕ್ಸ್ (ಟ್ವಿಟ್ಟರ್) ನಲ್ಲಿ ಪೋಸ್ಟ್ ಮಾಡಿ, ಕ್ರಮಾಂಕದ ಮೇಲ್ಭಾಗದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಭಾರತೀಯ ತಂಡದ ಮ್ಯಾನೇಜ್‌ಮೆಂಟ್‌ಗೆ ಸೂಚಿಸಿದರು.

ಇನ್ನಿಂಗ್ಸ್ ಆರಂಭಿಕರಿಗಾಗಿ, ವಿರಾಟ್ ಕೊಹ್ಲಿ ಮತ್ತು ಯಶಸ್ವಿ ಜೈಸ್ವಾಲ್ ಅವರ ಆರಂಭಿಕ ಸಂಯೋಜನೆಯನ್ನು ಕ್ರಿಕೆಟಿಗ ಕಂ ಕಾಮೆಂಟೇಟರ್ ವಾಸಿಂ ಜಾಫರ್ ಪ್ರತಿಪಾದಿಸಿದರು ಮತ್ತು ನಾಯಕ ರೋಹಿತ್ ಶರ್ಮಾ ಅವರನ್ನು ಮೂರನೇ ಸ್ಥಾನಕ್ಕೆ ಇಳಿಸಲು ತಿಳಿಸಿದರು.

ಅಲ್ಲದೆ, ಟೀಮ್ ಇಂಡಿಯಾ ಕ್ರಮಾಂಕದ ನಂತರದಲ್ಲಿ ಸೂರ್ಯಕುಮಾರ್ ಯಾದವ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕು ಎಂದು ವಾಸಿಂ ಜಾಫರ್ ಬರೆದುಕೊಂಡಿದ್ದಾರೆ.

ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಜಸ್ಪ್ರೀತ್ ಬುಮ್ರಾ ಮತ್ತು ಸೂರ್ಯಕುಮಾರ್ ಯಾದವ್ ಅವರಂತಹ ಹಲವಾರು ಭಾರತೀಯ ಆಟಗಾರರು ಮುಂಬರುವ 2024ರ ಟಿ20 ವಿಶ್ವಕಪ್‌ಗಾಗಿ ಈಗಾಗಲೇ ನ್ಯೂಯಾರ್ಕ್ ತಲುಪಿದ್ದಾರೆ. ಜೂನ್ 1ರಂದು ತಮ್ಮ ಏಕೈಕ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸಲು ಭಾರತ ತಂಡ ಪ್ರಸ್ತುತ ಸಜ್ಜಾಗಿದೆ.

ಎ ಗುಂಪಿನಲ್ಲಿರುವ ಭಾರತ ತಂಡವು ಜೂನ್ 5ರಂದು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಐರ್ಲೆಂಡ್ ವಿರುದ್ಧದ ಪಂದ್ಯದೊಂದಿಗೆ ತಮ್ಮ ಟಿ20 ವಿಶ್ವಕಪ್ 2024ರ ಅಭಿಯಾನವನ್ನು ಪ್ರಾರಂಭಿಸಲಿದೆ.

ನಂತರ ಅದೇ ಸ್ಥಳದಲ್ಲಿ ಜೂನ್ 9ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಹೈ-ವೋಲ್ಟೇಜ್ ಪಂದ್ಯದಲ್ಲಿ ಸೆಣಸಾಡಲಿದೆ. ಆ ಬಳಿಕ ಜೂನ್ 12 ಮತ್ತು 15ರಂದು ಕ್ರಮವಾಗಿ ಯುಎಸ್ಎ ಮತ್ತು ಕೆನಡಾ ವಿರುದ್ಧ ಭಾರತದ ಪಂದ್ಯಗಳು ನಡೆಯಲಿವೆ.

Story first published: Wednesday, May 29, 2024, 22:37 [IST]
Other articles published on May 29, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+