For Quick Alerts
ALLOW NOTIFICATIONS  
For Daily Alerts
 

ವಿರಾಟ್ ಕೊಹ್ಲಿಗೆ 35ರ ಸಂಭ್ರಮ: ಆಧುನಿಕ ಬ್ಯಾಟಿಂಗ್ ಮಾಂತ್ರಿಕನ 5 ವಿಶಿಷ್ಟ ದಾಖಲೆಗಳು

ಭಾರತೀಯ ಕ್ರಿಕೆಟ್‌ನ ಸೂಪರ್‌ಸ್ಟಾರ್ ವಿರಾಟ್ ಕೊಹ್ಲಿ ಇಂದು (ನವೆಂಬರ್ 5) 35ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಇದು ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧದ ಭಾರತ ತಂಡದ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದೊಂದಿಗೆ ಹೊಂದಿಕೆಯಾಗಲಿದೆ.

ವಿಶ್ವಕಪ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಜನ್ಮದಿನದಂದು 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಅಭಿಮಾನಿಗಳು ಕಣ್ತುಂಬಿಕೊಳ್ಳಲಿದ್ದಾರೆ ಮತ್ತು ಈ ದಿನದಂದು ತಮ್ಮ 49ನೇ ಏಕದಿನ ಶತಕ ಬಾರಿಸಲಿ ಎಂಬುದು ಕೋಟ್ಯಂತರ ಅಭಿಮಾನಿಗಳ ಹಾರೈಕೆಯಾಗಿದೆ.

Virat Kohlis 35th Birthday: Indian Star Batters 5 Unique Records In International Cricket

ನವೆಂಬರ್ 5ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಹೈ-ವೋಲ್ಟೇಜ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ ಸೆಣಸಾಡಲಿದೆ.

ಬಾಂಗ್ಲಾದೇಶ ವಿರುದ್ಧದ ಶತಕವು 35 ವರ್ಷದ ವಿರಾಟ್ ಕೊಹ್ಲಿ ಅವರು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಏಕದಿನ ಶತಕಗಳ ದಾಖಲೆಯನ್ನು ಸರಿಗಟ್ಟಲು ಒಂದು ಹೆಜ್ಜೆ ಹತ್ತಿರಕ್ಕೆ ಬಂದಿದ್ದಾರೆ. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ ಕ್ರಿಕೆಟ್‌ ವೃತ್ತಿಜೀವನದ 5 ವಿಶಿಷ್ಟ ದಾಖಲೆಗಳ ಪಟ್ಟಿ ಇಲ್ಲಿದೆ.

1) ಅಸಾಧಾರಣ ಟೆಸ್ಟ್ ಮತ್ತು ಟಿ20 ಕ್ರಿಕೆಟಿಗ

ವಿರಾಟ್ ಕೊಹ್ಲಿ ಇದುವರೆಗೆ ಆಡಿರುವ 111 ಟೆಸ್ಟ್ ಪಂದ್ಯಗಳಲ್ಲಿ 49.29ರ ಸರಾಸರಿಯಲ್ಲಿ 8,676 ರನ್ ಗಳಿಸುವ ಮೂಲಕ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.

Virat Kohlis 35th Birthday: Indian Star Batters 5 Unique Records In International Cricket

ಆಧುನಿಕ ಕ್ರಿಕೆಟ್‌ನ ಬ್ಯಾಟಿಂಗ್ ಮಾಂತ್ರಿಕ ವಿರಾಟ್ ಕೊಹ್ಲಿ ಟೆಸ್ಟ್‌ನಲ್ಲಿ 29 ಶತಕ ಮತ್ತು 29 ಅರ್ಧಶತಕಗಳನ್ನು ಬಾರಿಸಿದ್ದಾರೆ ಮತ್ತು ಆಟದ ಸುದೀರ್ಘ ಸ್ವರೂಪದಲ್ಲಿ ಅಜೇಯ 254 ರನ್‌ಗಳನ್ನು ಗಳಿಸಿದ್ದಾರೆ.

ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಮತ್ತು ಚುಟುಕು ಸ್ವರೂಪದಲ್ಲಿ ಪಂದ್ಯಶ್ರೇಷ್ಠ ಮತ್ತು ಸರಣಿಶ್ರೇಷ್ಠ ಪ್ರಶಸ್ತಿಗಳ ದಾಖಲೆಯನ್ನು ಹೊಂದಿದ್ದಾರೆ.

ವಿರಾಟ್ ಕೊಹ್ಲಿ ಇಲ್ಲಿಯವರೆಗೆ ಆಡಿರುವ 115 ಪಂದ್ಯಗಳಲ್ಲಿ 52.73ರ ಸರಾಸರಿ ಮತ್ತು 137.97ರ ಸ್ಟ್ರೈಕ್‌ರೇಟ್‌ನಲ್ಲಿ 4,008 ರನ್ ಗಳಿಸಿದ್ದಾರೆ. ಒಂದು ಶತಕ ಮತ್ತು 37 ಅರ್ಧ ಶತಕಗಳನ್ನು ದಾಖಲಿಸಿದ್ದಾರೆ ಮತ್ತು ಅಜೇಯ 122 ರನ್ ಗರಿಷ್ಠ ಸ್ಕೋರ್ ಆಗಿದೆ.

2) ಭಾರತ ತಂಡದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ

ವಿರಾಟ್ ಕೊಹ್ಲಿ ಭಾರತ ತಂಡದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕರೆನಿಸಿದ್ದಾರೆ. ಅವರ ನಾಯಕತ್ವದಲ್ಲಿ ತಂಡವು ಸತತ ಐದು ವರ್ಷಗಳ ಕಾಲ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿತ್ತು.

ವಿರಾಟ್ ಕೊಹ್ಲಿ 40 ಗೆಲುವು, 17 ಸೋಲು ಮತ್ತು 11 ಡ್ರಾದೊಂದಿಗೆ ಒಟ್ಟು 68 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ.

3) ಏಕದಿನ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠ ಬ್ಯಾಟರ್

ವಿರಾಟ್ ಕೊಹ್ಲಿ ವಾದಯೋಗ್ಯವಾಗಿ ಏಕದಿನ ಮಾದರಿಯ ಪಂದ್ಯಗಳನ್ನು ಆಡಿದ ವಿಶ್ವದ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದಾರೆ.

35 ವರ್ಷದ ವಿರಾಟ್ ಕೊಹ್ಲಿ ಏಕದಿನ ಸ್ವರೂಪದಲ್ಲಿ (13525) ನಾಲ್ಕನೇ ಅತಿ ಹೆಚ್ಚು ರನ್ ಗಳಿಸಿದವರಾಗಿದ್ದಾರೆ. ತಮ್ಮ ಆರಾಧ್ಯ ದೈವ ಸಚಿನ್ ತೆಂಡೂಲ್ಕರ್ ಅವರ ನಂತರ, ಭಾರತಕ್ಕಾಗಿ ಎರಡನೇ ಅತಿ ಹೆಚ್ಚು ಏಕದಿನ ರನ್ ಗಳಿಸಿದ ಆಟಗಾರರಾಗಿದ್ದಾರೆ.

4) ಎರಡನೇ ಅತಿ ಹೆಚ್ಚು ಏಕದಿನ ಶತಕಗಳು

ವಿರಾಟ್ ಕೊಹ್ಲಿ ಸದ್ಯಕ್ಕೆ ಏಕದಿನ ಮಾದರಿಯಲ್ಲಿ ಸಚಿನ್ ತೆಂಡೂಲ್ಕರ್ ಅವರ ಅತಿ ಹೆಚ್ಚು ಶತಕಗಳ ದಾಖಲೆಯನ್ನು ಬೆನ್ನಟ್ಟುತ್ತಿದ್ದಾರೆ.

ಲಿಟಲ್ ಮಾಸ್ಟರ್ 463 ಪಂದ್ಯಗಳಲ್ಲಿ 49 ಶತಕಗಳೊಂದಿಗೆ ಮುನ್ನಡೆಯಲ್ಲಿದ್ದರೆ, ವಿರಾಟ್ ಕೊಹ್ಲಿ ಕಡಿಮೆ ಪಂದ್ಯಗಳನ್ನು (288) ಆಡಿದ್ದರೂ 48 ಶತಕಗಳನ್ನು ಹೊಂದಿದ್ದಾರೆ ಮತ್ತು ಪ್ರಸ್ತುತ ವಿಶ್ವಕಪ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಹಿಂದಿಕ್ಕಲು ಪ್ರಯತ್ನಿಸುತ್ತಿದ್ದಾರೆ. ಒಟ್ಟಾರೆ 78 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿದ್ದಾರೆ.

5) ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಕಳೆದೊಂದು ದಶಕದಿಂದ ಭಾರತದ ಅತ್ಯುತ್ತಮ ಚೇಸಿಂಗ್‌ಗಳ ಬೆನ್ನೆಲುಬಾಗಿದ್ದಾರೆ ಮತ್ತು ಹೀಗಾಗಿ ಅವರಿಗೆ "ಚೇಸ್ ಮಾಸ್ಟರ್' ಎಂಬ ಬಿರುದು ತಂದುಕೊಟ್ಟಿದೆ.

ಏಕದಿನ ಕ್ರಿಕೆಟ್‌ ಮಾದರಿಯಲ್ಲಿ 23 ಶತಕಗಳು ಮತ್ತು 25 ಅರ್ಧಶತಕಗಳೊಂದಿಗೆ ಯಶಸ್ವಿ ರನ್ ಚೇಸ್‌ನಲ್ಲಿ ವಿರಾಟ್ ಕೊಹ್ಲಿ 90.40ರ ಸರಾಸರಿಯಲ್ಲಿ 5,786 ರನ್ ಬಾರಿಸಿದ್ದಾರೆ.

Story first published: Sunday, November 5, 2023, 11:20 [IST]
Other articles published on Nov 5, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+