ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಇತ್ತೀಚಿಗೆ ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಇವರ ಈ ಪ್ರದರ್ಶನ ಕಂಡು ಆರ್‌ಸಿಬಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಇವರು ಚಾಂಪಿಯನ್ಸ್ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಸಾಧಕರ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ಆಟಗಾರ. ಈಗ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್‌ನಲ್ಲಿ ಭಾಗವಹಿಸಲು ವಿರಾಟ್ ಬೆಂಗಳೂರಿಗೆ ಬಂದಿದ್ದಾರೆ. ಈ ವೇಳೆ ಅವರು ಹೇಳಿದ ಆ ಒಂದು ಡೈಲಾಗ್ ನಿಜಕ್ಕೂ ಎದುರಾಳಿಗಳಿಗೆ ನಡುಕ ಹುಟ್ಟಿಸಿದೆ.
ಇನ್ನೇನು ಕೆಲವೇ ದಿನಗಳಲ್ಲಿ ಐಪಿಎಲ್ ಆರಂಭವಾಗಲಿದೆ. ಈ ಮೆಗಾ ಟೂರ್ನಿಯಲ್ಲಿ ಭಾಗವಹಿಸಲು ವಿರಾಟ್ ಕೊಹ್ಲಿ ಸಜ್ಜಾಗಿದ್ದಾರೆ. ಆರ್‌ಸಿಬಿ ತಂಡ ಬ್ರ್ಯಾಂಡ್ ಆಗಿರುವ ವಿರಾಟ್, ಮೈದಾನಕ್ಕೆ ಇಳಿಯಲು ಬೇಕಾದ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇವರು ಬೆಂಗಳೂರಿಗೆ ಆಗಮಿಸಿದ್ದು, ತಮ್ಮದೇ ಧಾಟಿಯಲ್ಲಿ ಸಖತ್ ಎಂಟ್ರಿ ನೀಡಿದ್ದಾರೆ. ವಿರಾಟ್ ಈಗ 18 ನೇ ಋತುವಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಲು ತಯಾರಿ ನಡೆಸುತ್ತಿದ್ದಾರೆ.

ವಿರಾಟ್ ಕೊಹ್ಲಿ ಆರ್‌ಸಿಬಿ ತಂಡ ಸೇರಿದ ಬಗ್ಗೆ ಮ್ಯಾನೇಜ್ಮೆಂಟ್ ಒಂದು ವಿಡಿಯೋ ಹಂಚಿಕೊಂಡಿದೆ. ಆರ್‌ಸಿಬಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಎಲ್ಲರೂ ವಿರಾಟ್ ಅವರ ಬರುವಿಕೆಗಾಗಿ ಕಾಯುತ್ತಲೆ ಇರುತ್ತಾರೆ. ಇವರಿಗೆ ಭರ್ಜರಿ ಸ್ವಾಗತ ನೀಡಲು ಪ್ಲ್ಯಾನ್ ಮಾಡಿಕೊಂಡಿರುತ್ತಾರೆ. ಆದರೆ ವಿರಾಟ್ ಇವರ ಕಣ್ಣು ತಪ್ಪಿಸಿ ಅದಾಗಲೆ ತಮ್ಮ ರೂಮ್‌ಗೆ ಹೋಗಿರುತ್ತಾರೆ. ಆಗಲೇ ಶುರುವಾಗುತ್ತೆ ವಿರಾಟ್ ವಿಡಿಯೋ.
ವಿರಾಟ್ ಈ ವಿಡಿಯೋದಲ್ಲಿ ಡಾನ್ ಚಿತ್ರದ ಖ್ಯಾತ ಡೈಲಾಗ್ ಹೇಳಿದ್ದಾರೆ. ಈ ಮೂಲಕ ಮುಂದಿನ ಬಾರಿಯ ಐಪಿಎಲ್‌ನಲ್ಲಿ ನನ್ನನ್ನು ಕಟ್ಟಿ ಹಾಕುವುದು ಅಷ್ಟು ಸುಲಭದ ಮಾತಲ್ಲ ಎಂಬುದನ್ನು ಸಾರಿ ಹೇಳಿದ್ದಾರೆ. ವಿರಾಟ್ ಮುಜೆ ಪಕಡನಾ ಮುಷ್ಕೀಲ್ ಹಿ ನಹಿ ನಾ ಮುನ್ಕಿನ್ ಹೈ ಎಂದು ಹೇಳುತ್ತಲೆ, ತಮ್ಮ ಜೆರ್ಸಿಯನ್ನು ರಿವೀಲ್ ಮಾಡ್ತಾರೆ. ಆರ್‌ಸಿಬಿ ಫ್ರಾಂಚೈಸಿಯ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಬಹಳ ವೇಗವಾಗಿ ವೈರಲ್ ಆಗುತ್ತಿದೆ.

ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಈಗಾಗಲೇ ಇವರು 252 ಪಂದ್ಯಗಳನ್ನು ಆಡಿದ್ದು 8004 ರನ್ ಸಿಡಿಸಿದ್ದಾರೆ. ಈ ವೇಳೆ 8 ಶತಕ ಹಾಗೂ 55 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇವರ ಬ್ಯಾಟ್‌ನಿಂದ 705 ಬೌಂಡರಿ, 272 ಸಿಕ್ಸರ್‌ಗಳು ಹರಿದು ಬಂದಿವೆ.
ಆರ್‌ಸಿಬಿ ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್‌ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್, ರಸಿಕ್‌ದರ್ ಸಲಾಂ, ಸುಯಂಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಮನೋಜ್ ಭಂಡಗೆ, ಜಕೆಲ್ ಬೆಥೆಲ್, ದೇವದತ್ ಪಡಿಕ್ಕಲ್, ಸಾತ್ವಿಕ್ ಚಿಕಾರ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ