ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿರಾಟ್ ಕೊಹ್ಲಿ ಕೆಟ್ಟ ದಿನಗಳು ಮುಕ್ತಾಯಗೊಂಡಿದೆ, ಇನ್ಮೇಲೆ ಒಳ್ಳೆಯ ದಿನಗಳು ಶುರು: ವೀರೇಂದ್ರ ಸೆಹ್ವಾಗ್‌

Virat kohli

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಕಳಪೆ ಫಾರ್ಮ್ ಮುಕ್ತಾಯದ ಹಂತಕ್ಕೆ ಬಂದಿದೆ ಎಂದು ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. ಇಂಗ್ಲೆಂಡ್ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ ಎಂದು ಭವಿಷ್ಯ ನುಡಿದರು.

ಲೀಸೆಸ್ಟರ್‌ಶೈರ್ ವಿರುದ್ಧದ ನಾಲ್ಕು ದಿನಗಳ ಅಭ್ಯಾಸ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ 69 ಎಸೆತಗಳಲ್ಲಿ 4 ಬೌಂಡರಿ ಮತ್ತು ಒಂದು ಸಿಕ್ಸರ್‌ನೊಂದಿಗೆ 69 ರನ್ ಗಳಿಸಿದರು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 98 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 67 ರನ್ ಗಳಿಸಿ ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಔಟಾದರು.

ಉತ್ತಮ ಬ್ಯಾಟಿಂಗ್ ಲಯ ಕಂಡುಕೊಂಡಿರುವ ಕೊಹ್ಲಿ

ಉತ್ತಮ ಬ್ಯಾಟಿಂಗ್ ಲಯ ಕಂಡುಕೊಂಡಿರುವ ಕೊಹ್ಲಿ

ಎರಡು ಇನ್ನಿಂಗ್ಸ್‌ಗಳಲ್ಲಿ ಒಟ್ಟು 100 ರನ್ ಗಳಿಸಿದ ವಿರಾಟ್ ಕೊಹ್ಲಿ, ಎರಡನೇ ಇನ್ನಿಂಗ್ಸ್‌ನಲ್ಲಿ ತಮ್ಮ ಶೈಲಿಯಲ್ಲಿ 68.37 ಸ್ಟ್ರೈಕ್ ರೇಟ್‌ನೊಂದಿಗೆ ಫಾರ್ಮ್‌ಗೆ ಮರಳಿದರು. ಈ ಇನ್ನಿಂಗ್ಸ್ ನಂತರ ವಿರಾಟ್ ಕೊಹ್ಲಿ ಮತ್ತೊಮ್ಮೆ ಸ್ಕೋರ್ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. ಸೋನಿ ನೆಟ್‌ವರ್ಕ್‌ನಲ್ಲಿ ನಡೆದ 'ಎಕ್ಸ್ಟ್ರಾ ಇನ್ನಿಂಗ್ಸ್' ಕಾರ್ಯಕ್ರಮದಲ್ಲಿ ವೀರೇಂದ್ರ ಸೆಹ್ವಾಗ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆಯಲ್ಲಿ ವಿರಾಟ್ ಕಂಬ್ಯಾಕ್ ಬಗ್ಗೆ ಸೆಹ್ವಾಗ್ ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರೋಹಿತ್ ಶರ್ಮಾರನ್ನು ಟಿ20 ನಾಯಕತ್ವದಿಂದ ಮುಕ್ತಗೊಳಿಸಿ ಎಂದ ಮಾಜಿ ಬ್ಯಾಟ್ಸ್‌ಮನ್

ಈ ಬಾರಿಯ ಶತಕ ಹೊಡೆಯುವುದು ಗ್ಯಾರೆಂಟಿ

ಈ ಬಾರಿಯ ಶತಕ ಹೊಡೆಯುವುದು ಗ್ಯಾರೆಂಟಿ

''ಈ ಬಾರಿ ವಿರಾಟ್ ಕೊಹ್ಲಿ ಎಡ್ಜ್‌ಬಾಸ್ಟನ್ ನಲ್ಲಿ ನಡೆಯಲಿರುವ ಸರಣಿ ಡಿಸೈಡರ್‌ ಟೆಸ್ಟ್‌ ಪಂದ್ಯದಲ್ಲಿ ದೊಡ್ಡ ಮೊತ್ತವನ್ನು ಗಳಿಸುತ್ತಾರೆ ಎಂದು ನನಗೆ ತೋರುತ್ತದೆ. ಅವನ ಎಲ್ಲಾ ಕೆಟ್ಟ ದಿನಗಳು ಕಳೆದುಹೋಗಿವೆ. ಈ ಪಿಚ್‌ನಲ್ಲಿ ಉತ್ತಮ ಇನ್ನಿಂಗ್ಸ್ ಆಡುವ ಮೂಲಕ ಕೊನೆಗೊಳ್ಳುತ್ತದೆ. ಒಳ್ಳೆಯ ದಿನಗಳು ಈಗಾಗಲೇ ಪ್ರಾರಂಭವಾಗಿವೆ. ಅವರು ಅಭ್ಯಾಸ ಪಂದ್ಯದಲ್ಲಿ ಅರ್ಧ ಶತಕ ಗಳಿಸಿದರು. ಅವರು ಮೊದಲ ಇನ್ನಿಂಗ್ಸ್‌ನಲ್ಲಿ ಅತ್ಯಮೂಲ್ಯ 33 ರನ್ ಗಳಿಸಿದರು. ಈ ಪಂದ್ಯದಲ್ಲಿ ವಿರಾಟ್ ಅವರ ಬ್ಯಾಟಿಂಗ್ ನೋಡಿದರೆ, ಅವರು ಫುಲ್ ಫಾರ್ಮ್‌ನಲ್ಲಿರುವಂತೆ ತೋರುತ್ತಿದೆ'' ಎಂದು ಸೆಹ್ವಾಗ್‌ ಹೇಳಿದ್ದಾರೆ.

ಆರಂಭಿಕನಾಗಿ ಶುಬ್ಮನ್ ಗಿಲ್ ಕಣಕ್ಕಿಳಿಯುವುದು ಬೇಡ್ವೇ ಬೇಡ ಎಂದಿದ್ಯಾಕೆ ಆಕಾಶ್ ಚೋಪ್ರ

ಮೂರು ವರ್ಷಗಳ ಹಿಂದೆ ಶತಕ ಸಿಡಿಸಿದ್ದ ಕೊಹ್ಲಿ

ಮೂರು ವರ್ಷಗಳ ಹಿಂದೆ ಶತಕ ಸಿಡಿಸಿದ್ದ ಕೊಹ್ಲಿ

2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಬಾರಿಗೆ ಶತಕ ಸಿಡಿಸಿದ್ದ ವಿರಾಟ್ ಕೊಹ್ಲಿ, 2021 ರ ಇಂಗ್ಲೆಂಡ್ ಪ್ರವಾಸದಲ್ಲಿ ನಾಲ್ಕು ಪಂದ್ಯಗಳಲ್ಲಿ 31.14 ರ ಸರಾಸರಿಯಲ್ಲಿ 218 ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಅರ್ಧ ಶತಕಗಳು ಸೇರಿವೆ.

ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಈಗಾಗಲೇ 2-1 ರಿಂದ ಮುನ್ನಡೆ ಸಾಧಿಸಿದೆ. ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟಿದ್ದ ಕೊನೆಯ ಪಂದ್ಯವು, ಜುಲೈ 1 ರಿಂದ ಪ್ರಾರಂಭವಾಗಲಿದೆ. ಆದರೆ, ಪಂದ್ಯಕ್ಕೂ ಮುನ್ನ ನಾಯಕ ರೋಹಿತ್ ಶರ್ಮಾಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಒಂದು ವೇಳೆ ಅವರು ತಂಡ ತೊರೆದ್ರೆ, ಬುಮ್ರಾ ಮುನ್ನಡೆಸುವ ಸಾಧ್ಯತೆ ಇದೆ.

Story first published: Monday, June 27, 2022, 20:51 [IST]
Other articles published on Jun 27, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X