
ಕುಟುಕಿದ ಸೆಹ್ವಾಗ್
ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ 5 ರನ್‌ಗಳ ಅಂತರದಿಂದ ಟೀಮ್ ಇಂಡಿಯಾ ಸೋಲು ಅನುಭವಿಸಿದ ಬಳಿಕ ವೀರೇಂದ್ರ ಸೆಹ್ವಾಗ್ ಟ್ವಿಟ್ಟರ್‌ನಲ್ಲಿ ತಮ್ಮದೇ ಶೈಲಿಯಲ್ಲಿ ಟೀಮ್ ಇಂಡಿಯಾ ಪಡೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ "ನಿಮ್ಮ ಪ್ರದರ್ಶನ ಕ್ರಿಪ್ಟೋ ಕರೆನ್ಸಿಯ ಮೌಲ್ಯಕ್ಕಿಂತಲೂ ವೇಗವಾಗಿ ಕುಸಿಯುತ್ತಿದೆ. ಶೀಘ್ರವಾಗಿ ಎಚ್ಚತ್ತುಕೊಳ್ಳಬೇಕಾದ ಅಗತ್ಯವಿದೆ" ಎಂದಿದ್ದಾರೆ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್.

ಎರಡು ಪಂದ್ಯಗಳಲ್ಲಿಯೂ ಕಳಪೆ ಬ್ಯಾಟಿಂಗ್
ಇನ್ನು ಈ ಸರಣಿಯಲ್ಲಿ ಟೀಮ್ ಇಂಡಿಯಾ ಎರಡು ಪಂದ್ಯಗಳಲ್ಲಿಯೂ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಮೊದಲ ಪಂದ್ಯದಲ್ಲಿ ಭಾರತ ಕೇವಲ 186 ರನ್‌ಗಳಿಗೆ ಆಲೌಟ್ ಆಗಿತ್ತು. ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಶ್ರೇಷ್ಠ ಬೌಲಿಂಗ್ ಪ್ರದರ್ಶನ ನಿಡುವ ಮೂಲಕ ಭಾರತಕ್ಕೆ ಗೆಲ್ಲುವ ಅವಕಾಶವನ್ನು ಸೃಷ್ಟಿಸಿಕೊಂಡಿತ್ತು. ಆದರೆ ಅಂತಿಮ ವಿಕೆಟ್ ಪಡೆಯಲು ವಿಫಲವಾದ ಕಾರಣ ಆ ಪಂದ್ಯ ಸೋತಿತ್ತು.

ಬೌಲಿಂಗ್‌ನಲ್ಲಿ ಮಿಂಚಿ ಎಡವಿದ ಭಾರತ
ಇನ್ನು ಎರಡನೇ ಪಂದ್ಯದಲ್ಲಿಯೂ ಟೀಮ್ ಇಂಡಿಯಾದ ಬೌಲಿಂಗ್ ಪ್ರದರ್ಶನ ಅದ್ಭುತವಾಗಿಯೇ ಇತ್ತು. ಆರಂಬಿಕ 20 ಓವರ್‌ಗಳಿಗೆ ಮುನ್ನವೇ ಬಾಂಗ್ಲಾದ 6 ವಿಕೆಟ್ ಪಡೆಯುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿತ್ತು. ಆದರೆ ಈ ಪಂದ್ಯದಲ್ಲಿ ಮತ್ತೊಮ್ಮೆ ಮೆಹದಿ ಹಸನ್ ಭಾರತ ತಂಡಕ್ಕೆ ವೊಲನ್ ಆದರು. ಮಾಜಿ ನಾಯಕ ಮಹಮದುಲ್ಲಾ ಜೊತೆ ಸೇರಿ ಅಮೋಘ ಪ್ರದರ್ಶನ ನಿಡಿ ಭಾರತಕ್ಕೆ ಸವಾಲಿನ ಗುರಿ ನೀಡಲು ಯಶಸ್ವಿಯಾಗಿತ್ತು. ಆದರೆ ಟೀಮ್ ಇಂಡಿಯಾ ಮತ್ತೊಮ್ಮೆ ಬ್ಯಾಟಿಂಗ್‌ನಲ್ಲಿ ವೈಫಲ್ಯವನ್ನು ಅನುಭವಿಸಿದ ಕಾರಣ ತಂಡ ಎರಡನೇ ಸೋಲು ಅನುಭವಿಸಿದೆ. ಈ ಪಂದ್ಯದಲ್ಲಿ ಶ್ರೇಯಸ್ ಐಯ್ಯರ್ ಹಾಗೂ ರೋಹಿತ್ ಶರ್ಮಾ ಮಾತ್ರವೇ ಅದ್ಭುತ ಹೋರಾಟವನ್ನು ಪ್ರದರ್ಶಿಸುವಲ್ಲಿ ಯಶಸ್ವಿಯಾದರು.

ಇತ್ತಂಡಗಳ ಆಡುವ ಬಳಗ
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್
ಬೆಂಚ್: ಶಹಬಾಜ್ ಅಹ್ಮದ್, ಕುಲದೀಪ್ ಸೇನ್, ರಜತ್ ಪಾಟಿದಾರ್, ಇಶಾನ್ ಕಿಶನ್, ರಾಹುಲ್ ತ್ರಿಪಾಠಿ
ಬಾಂಗ್ಲಾದೇಶ ಆಡುವ ಬಳಗ: ನಜ್ಮುಲ್ ಹೊಸೈನ್ ಶಾಂಟೊ, ಲಿಟ್ಟನ್ ದಾಸ್ (ನಾಯಕ), ಅನಾಮುಲ್ ಹಕ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್, ಎಬಾದತ್ ಹೊಸೈನ್, ಮುಸ್ತಾಫಿಜುರ್ ರೆಹಮಾನ್
ಬೆಂಚ್: ಹಸನ್ ಮಹಮೂದ್, ಯಾಸಿರ್ ಅಲಿ, ತಸ್ಕಿನ್ ಅಹ್ಮದ್, ನೂರುಲ್ ಹಸನ್