ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

WTC Final: ಭಾರತ ತಂಡದ ಈ ಮೂವರಿಂದ ಗೆಲುವು ಖಚಿತ ಎಂದ ವಿರೇಂದ್ರ ಸೆಹ್ವಾಗ್

Virender Sehwag reveals his choice for India’s WTC final bowling combination

ಸದ್ಯ ವಿಶ್ವದಾದ್ಯಂತ ಇರುವ ಕ್ರಿಕೆಟ್ ಅಭಿಮಾನಿಗಳ ಚಿತ್ತ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದತ್ತ ನೆಟ್ಟಿದೆ. ಜೂನ್ 18-22ರವರೆಗೆ ನಡೆಯಲಿರುವ ಈ ಪ್ರತಿಷ್ಟಿತ ಪಂದ್ಯದ ಕುರಿತು ಈಗಾಗಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಮಾಜಿ ಕ್ರಿಕೆಟಿಗರು, ಕ್ರಿಕೆಟ್ ಪಂಡಿತರು ಹಾಗೂ ಕ್ರೀಡಾಭಿಮಾನಿಗಳು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಫೀಲ್ಡಿಂಗ್ ವೇಳೆ ಸಹ ಆಟಗಾರನಿಗೆ ಡಿಕ್ಕಿ ಹೊಡೆದು ಮೈದಾನದಲ್ಲೇ ಕುಸಿದು ಬಿದ್ದ ಡು ಪ್ಲೆಸಿಸ್ಫೀಲ್ಡಿಂಗ್ ವೇಳೆ ಸಹ ಆಟಗಾರನಿಗೆ ಡಿಕ್ಕಿ ಹೊಡೆದು ಮೈದಾನದಲ್ಲೇ ಕುಸಿದು ಬಿದ್ದ ಡು ಪ್ಲೆಸಿಸ್

ಜೂನ್ 18ರಿಂದ ಆರಂಭವಾಗಲಿರುವ ಈ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ಎರಡೂ ತಂಡಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವ ತವಕದಲ್ಲಿವೆ. ಈ ಪಂದ್ಯದ ಕುರಿತು ಈಗಾಗಲೇ ಸಾಕಷ್ಟು ಮಾಜಿ ಕ್ರಿಕೆಟಿಗರು ಮಾತನಾಡಿದ್ದು ತಮ್ಮ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ. ಕೆಲವರು ಭಾರತ ತಂಡ ಜಯ ಸಾಧಿಸಲಿದೆ ಎಂದು ಹೇಳಿಕೆ ನೀಡಿದ್ದರೆ ಮತ್ತೊಂದಿಷ್ಟು ಜನರು ನ್ಯೂಜಿಲೆಂಡ್ ತಂಡ ಜಯಭೇರಿ ಬಾರಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

WTC Final: ನ್ಯೂಜಿಲೆಂಡ್‌ನ ಈ ಆಟಗಾರ ಭಾರತಕ್ಕೆ ತಲೆನೋವಾಗಿ ಪರಿಣಮಿಸಲಿದ್ದಾನೆ ಎಂದ ಪನೇಸರ್

ಇದೀಗ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕೂಡ ಈ ಪ್ರತಿಷ್ಟಿತ ಪಂದ್ಯದ ಕುರಿತು ಮಾತನಾಡಿದ್ದು ಭಾರತದ ಮೂವರು ಆಟಗಾರರ ಕುರಿತು ವಿಶೇಷವಾಗಿ ಈ ಕೆಳಕಂಡಂತೆ ಹೇಳಿಕೆಗಳನ್ನು ನೀಡಿದ್ದಾರೆ.

ಬೌಲ್ಟ್ ಎದುರಿಸಿ ರೋಹಿತ್ ನೆಲಕಚ್ಚಿ ನಿಲ್ಲಬೇಕು

ಬೌಲ್ಟ್ ಎದುರಿಸಿ ರೋಹಿತ್ ನೆಲಕಚ್ಚಿ ನಿಲ್ಲಬೇಕು

ಭಾರತ ತಂಡದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವ ರೋಹಿತ್ ಶರ್ಮಾ ಕನಿಷ್ಠ ಹತ್ತು ಓವರ್‌ಗಳವರೆಗೆ ವಿಕೆಟ್ ಒಪ್ಪಿಸದೆ ನೆಲಕಚ್ಚಿ ಆಡಬೇಕು. ಹೀಗೆ ಕನಿಷ್ಠ ಹತ್ತು ಓವರ್‌ಗಳ ತನಕ ರೋಹಿತ್ ಶರ್ಮಾ ನೆಲಕಚ್ಚಿ ನಿಂತರೆ ನ್ಯೂಜಿಲೆಂಡ್ ತಂಡದ ಬೌಲರ್ ಟ್ರೆಂಟ್ ಬೌಲ್ಟ್ ಮತ್ತು ಶರ್ಮಾ ನಡುವಿನ ಕಾಳಗವನ್ನು ನೋಡಲು ಮಜವಾಗಿರುತ್ತದೆ ಮತ್ತು ರೋಹಿತ್ ಶರ್ಮಾ ಭಾರತ ತಂಡದ ಪರ ಅತ್ಯುತ್ತಮ ಇನ್ನಿಂಗ್ಸ್ ಕಟ್ಟಲಿದ್ದಾರೆ ಎಂದು ವಿರೇಂದ್ರ ಸೆಹ್ವಾಗ್ ಹೇಳಿದ್ದಾರೆ.

ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ

ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ

ಭಾರತ ತಂಡದ ಇಬ್ಬರು ಸ್ಪಿನ್ ಬೌಲರ್‌ಗಳಾದ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಇಬ್ಬರೂ ಸಹ ಆಲ್‌ರೌಂಡರ್‌ಗಳಾಗಿದ್ದು ಕೇವಲ ಬೌಲಿಂಗ್ ಮಾತ್ರವಲ್ಲ ಬ್ಯಾಟಿಂಗ್ ವಿಭಾಗ ಕೂಡ ಬಲಶಾಲಿಯಾಗಿರಲಿದೆ. ಈ ಇಬ್ಬರು ಇರುವ ಕಾರಣ ಆರನೇ ಕ್ರಮಾಂಕದ ಬ್ಯಾಟ್ಸ್‌ಮನ್‌ನ ಅಗತ್ಯತೆ ಬೀಳುವದಿಲ್ಲ ಮತ್ತು 5 ಬೌಲರ್‌ಗಳನ್ನು ಕಣಕ್ಕಿಳಿಸುವ ಅವಕಾಶ ಭಾರತ ತಂಡಕ್ಕೆ ಲಭಿಸಲಿದೆ ಎಂದು ವಿರೇಂದ್ರ ಸೆಹ್ವಾಗ್ ಹೇಳಿದ್ದಾರೆ.

ಟಿಮ್ ಸೌಥಿ ಮತ್ತು ಟ್ರೆಂಟ್ ಬೌಲ್ಟ್ ಭಾರತವನ್ನು ಕಾಡಲಿದ್ದಾರೆ

ಟಿಮ್ ಸೌಥಿ ಮತ್ತು ಟ್ರೆಂಟ್ ಬೌಲ್ಟ್ ಭಾರತವನ್ನು ಕಾಡಲಿದ್ದಾರೆ

ಇಂಗ್ಲೆಂಡ್ ಪಿಚ್ ವೇಗಿಗಳಿಗೆ ಹೆಚ್ಚಿನ ಸಹಕಾರಿಯಾದ ಕಾರಣ ನ್ಯೂಜಿಲೆಂಡ್ ತಂಡದ ವೇಗಿಗಳಾದ ಟ್ರೆಂಟ್ ಬೌಲ್ಟ್ ಮತ್ತು ಟಿಮ್ ಸೌಥಿ ಭಾರತೀಯ ಬ್ಯಾಟ್ಸ್‌ಮನ್‌ಗಳನ್ನು ಹೆಚ್ಚಾಗಿ ಕಾಡಲಿದ್ದಾರೆ ಎಂದು ವಿರೇಂದ್ರ ಸೆಹ್ವಾಗ್ ಹೇಳಿದ್ದಾರೆ.

Story first published: Thursday, July 8, 2021, 17:05 [IST]
Other articles published on Jul 8, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X