ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಹಾರ್ದಿಕ್ ಪಾಂಡ್ಯಗೆ ಸಮರ್ಥ ಬದಲಿ ಆಟಗಾರನನ್ನು ಹೆಸರಿಸಿದ ವಿವಿಎಸ್ ಲಕ್ಷ್ಮಣ್

VVS Laxman believes Venkatesh Iyer can be a back-up to Hardik Pandya

ಟೀಮ್ ಇಂಡಿಯಾದ ಪ್ರಮುಖ ಆಲ್‌ರೌಂಡರ್ ಆಗಿದ್ದ ಹಾರ್ದಿಕ್ ಪಾಂಡ್ಯ ಭವಿಷ್ಯ ಈಗ ಮಸುಕಾಗಿದೆ. ಫಿಟ್‌ನೆಸ್ ಸಮಸ್ಯೆ, ಫಾರ್ಮ್ ಕೊರತೆ ಹಾರ್ದಿಕ್ ಪಾಂಡ್ಯಗೆ ಕಾಡುತ್ತಿದೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ಹಾರ್ದಿಕ್ ಪಾಂಡ್ಯ ಹೊರಬಿದ್ದಿದ್ದು ತಂಡಕ್ಕೆ ಮರಳಬೇಕಾದರೆ ಹಾರ್ದಿಕ್ ಪಾಂಡ್ಯ ಮತ್ತೆ ಹಿಂದಿನ ಸಾಮರ್ಥ್ಯವನ್ನು ಪ್ರದರ್ಶಿಸಬೇಕಿದೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಹಾರ್ದಿಕ್ ಪಾಂಡ್ಯ ಸ್ಥಾನವನ್ನು ತುಂಬಬಲ್ಲ ಆಟಗಾರನನ್ನು ಹೆಸರಿಸಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಈ ಆಟಗಾರ ಬ್ಯಾಟಿಂಗ್ ಜೊತೆಗೆ ಮಧ್ಯಮ ವೇಗದ ಬೌಲಿಂಗ್ ಮೂಲಕವೂ ತಂಡಕ್ಕೆ ನೆರವಾಗುವ ಕಾರಣ ತಂಡಕ್ಕೆ ಸಮತೋಲನವನ್ನು ನೀಡಬಲ್ಲರು ಎಂದಿದ್ದಾರೆ.

ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಹೇಳಿದ ಆ ಆಟಗಾರ ಬೇರೆ ಯಾರೂ ಅಲ್ಲ. ಈ ಬಾರಿಯ ಐಪಿಎಲ್‌ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರವಾಗಿ ಆರಂಭಿಕನಾಗಿ ಕಣಕ್ಕಿಳಿದು ಶ್ರೇಷ್ಠ ಪ್ರದರ್ಶನ ನೀಡಿದ ವೆಂಕಟೇಶ್ ಐಯ್ಯರ್ ಬಗ್ಗೆ. ಬೌಲಿಂಗ್‌ ಹಾಗೂ ಬ್ಯಾಟಿಂಗ್‌ನಲ್ಲಿ ಕೊಡುಗೆ ನೀಡುವ ಸಾಮರ್ಥ್ಯವಿರುವ ವೆಂಕಟೇಶ್ ಐಯ್ಯರ್ ಟೀಮ್ ಇಂಡಿಯಾದಲ್ಲಿ ಹಾರ್ದಿಕ್ ಪಾಂಡ್ಯ ಸ್ಥಾನ ತುಂಬಬಲ್ಲ ಸಮರ್ಥ ಆಟಗಾರ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಾಬರ್ ಹಾಗೂ ಕೊಹ್ಲಿ ನಡುವಿನ ಹೋಲಿಕೆ ಸಲ್ಲದು: ಬಾಬರ್ ಅಜಮ್ ವ್ಯಕ್ತಿತ್ವ ಕೊಹ್ಲಿಗೆ ವಿರುದ್ಧವಾಗಿದೆ!ಬಾಬರ್ ಹಾಗೂ ಕೊಹ್ಲಿ ನಡುವಿನ ಹೋಲಿಕೆ ಸಲ್ಲದು: ಬಾಬರ್ ಅಜಮ್ ವ್ಯಕ್ತಿತ್ವ ಕೊಹ್ಲಿಗೆ ವಿರುದ್ಧವಾಗಿದೆ!

ವೆಂಕಟೇಶ್ ಐಯ್ಯರ್ ಮುಂದಿನ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯನ್ನು ಆಡುವ ಭಾರತ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಐಪಿಎಲ್‌ನಲ್ಲಿ ಆರಂಭಿಕ ಆಟಗಾರನಾಗಿ ಮಿಂಚಿರುವ ವೆಂಕಟೇಶ್ ಐಯ್ಯರ್ ನ್ಯೂಜಿಲೆಂಡ್ ಸರಣಿಗೆ ಆಯ್ಕೆಯಾಗಿರುವ ತಂಡದಲ್ಲಿರುವ ಐವರು ಆರಂಬಿಕ ಆಟಗಾರರಲ್ಲಿ ಒಬ್ಬರಾಗಿದ್ದಾರೆ.

"ವೆಂಕಟೇಶ್ ಐಯ್ಯರ್ ಅವರನ್ನು ಐದು ಅಥವಾ ಆರನೇ ಕ್ರಮಾಂಕದಲ್ಲಿ ಬಳಸಿಕೊಳ್ಳಲು ಬಯಸಿದರೆ ತಂಡಕ್ಕೆ ನೆರವಾಗಬಲ್ಲರು. ಅವರು ಬೌಲಿಂಗ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡುವ ಸಾಮರ್ಥ್ಯ ಹೊಂಡಿರುವ ಕಾರಣದಿಂದಾಗಿ ಒಂದೆರಡು ಅಥವಾ ಅದಕ್ಕಿಂತ ಹೆಚ್ಚು ಓವರ್‌ಗಳನ್ನು ನೀಡುವ ಮೂಲಕ ಅವರ ಸಾಮರ್ಥ್ಯವನ್ನು ಉಪಯೋಗಿಸಬಹುದು. ಆತ ಹಾರ್ದಿಕ್ ಪಾಂಡ್ಯಗೆ ಉತ್ತಮ ಬದಲಿ ಆಟಗಾರನಾಗಬಹುದು. ತಂಡಕ್ಕೆ ನೆರವಾಗಬಲ್ಲ ಉತ್ತಮವಾದ ಆಲ್‌ರೌಂಡರ್ ಆಗಿ ವೆಂಕಟೇಶ್ ಐಯ್ಯರ್ ಅವರನ್ನು ಬೆಳೆಸಬಹುದು" ಎಂದು ವಿವಿಎಸ್ ಲಕ್ಷ್ಮಣ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧ ಸೇಡು ತೀರಿಸಿಕೊಂಡ ನ್ಯೂಜಿಲೆಂಡ್: ಸೆಮಿಫೈನಲ್‌ನ 5 ಇಂಟ್ರೆಸ್ಟಿಂಗ್ ವಿಷಯಗಳು ಇಲ್ಲಿವೆಇಂಗ್ಲೆಂಡ್ ವಿರುದ್ಧ ಸೇಡು ತೀರಿಸಿಕೊಂಡ ನ್ಯೂಜಿಲೆಂಡ್: ಸೆಮಿಫೈನಲ್‌ನ 5 ಇಂಟ್ರೆಸ್ಟಿಂಗ್ ವಿಷಯಗಳು ಇಲ್ಲಿವೆ

"ವೆಂಕಟೇಶ್ ಐಯ್ಯರ್ ಅವರಂತಾ ಆಟಗಾರರು ತಮ್ಮ ಕ್ರಮಾಂಕವನ್ನು ಹೊರತುಪಡಿಸಿ ಆಡುವುದನ್ನು ನಾನು ಬಯಸುತ್ತೇನೆ. ನ್ಯೂಜಿಲೆಂಡ್ ವಿರುದ್ಧಧ ಸರಣಿಯಲ್ಲಿ ಭಾರತ ತಂಡದಲ್ಲಿ ಐವರು ಆರಂಭಿಕ ಆಟಗಾರರಿದ್ದಾರೆ. ಇಶಾನ್ ಕಿಶನ್, ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಆರಂಭಿಕರಾಗಿ ಮೊದಲ ಆಯ್ಕೆಯಾಗಲಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ವೆಂಕಟೇಶ್ ಐಯ್ಯರ್ ತಂಡದಲ್ಲಿ ಸ್ಥಾನವನ್ನು ಪಡೆದುಕೊಳ್ಳಬೇಕು. ಆದರೆ ಆರಂಭಿಕನಾಗಿ ಅಲ್ಲ" ಎಂದಿದ್ದಾರೆ ವಿವಿಎಸ್ ಲಕ್ಷ್ಮಣ್.

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ರೋಹಿತ್ ಶರ್ಮಾ ನಾಯಕನಾಗಿ ಮುನ್ನಡೆಸಲಿದ್ದಾರೆ. ಕೆಎಲ್ ರಾಹುಲ್ ಉಪನಾಯಕನ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದುಕೊಂಡಿದ್ದಾರೆ.

ನ್ಯೂಜಿಲೆಂಡ್ ಸರಣಿಗೆ ಆಯ್ಕೆಯಾದ ಭಾರತ ತಂಡ ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಾಹಲ್, ಆರ್ ಅಶ್ವಿನ್, ಅಕ್ಷರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್

ಪಾಕಿಸ್ತಾನದ ಕಡೆಗಿದ್ದ ಗೆಲುವು ಆಸ್ಟ್ರೇಲಿಯಾ ಕಡೆಗೆ ವಾಲಿದ್ದು ಹೇಗೆ? | Oneindia Kannada

Story first published: Friday, November 12, 2021, 9:51 [IST]
Other articles published on Nov 12, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X