For Quick Alerts
ALLOW NOTIFICATIONS  
For Daily Alerts
 

ಕೆ.ಎಲ್ ರಾಹುಲ್ ಅದ್ಭುತವಾಗಿ ಕಂಬ್ಯಾಕ್ ಮಾಡಿದ್ದಾರೆ: ಅವರ ಹೆಗಲ ಮೇಲೆ ಜವಾಬ್ದಾರಿ ಹೆಚ್ಚಿದೆ ಎಂದ ವಿವಿಎಸ್ ಲಕ್ಷ್ಮಣ್‌

VVS Laxman

ಟೀಂ ಇಂಡಿಯಾ ಪರ ಲಿಮಿಟೆಡ್ ಓವರ್‌ ಕ್ರಿಕೆಟ್‌ನಲ್ಲಿ ಅತ್ಯಂತ ಪ್ರಮುಖ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡಿರುವ ಕೆ.ಎಲ್ ರಾಹುಲ್ ಮೂರು ಫಾರ್ಮೆಟ್‌ನಲ್ಲಿ ಅತ್ಯಂತ ಸೊಗಸಾಗಿ ಬ್ಯಾಟ್ ಬೀಸಬಲ್ಲ ಕೆಲವೇ ಕೆಲವು ಆಟಗಾರರಲ್ಲಿ ಒಬ್ಬರಾಗಿದ್ದಾರೆ.

ವೈಟ್ ಬಾಲ್ ಕ್ರಿಕೆಟ್‌ನಲ್ಲಿ ಭಾರತಕ್ಕಾಗಿ ಅಸಾಧಾರಣವಾಗಿ ಪ್ರದರ್ಶನ ನೀಡುತ್ತಾ ಬಂದಿರುವ ಕೆ.ಎಲ್ ರಾಹುಲ್ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅಷ್ಟು ದೊಡ್ಡಮಟ್ಟಿಗೆ ಆಟಗಾರನಾಗಿ ಹೊರಹೊಮ್ಮಿಲ್ಲ. ಆದ್ರೆ ಟೀಂ ಇಂಡಿಯಾ ಪರ ಮೂರು ಫಾರ್ಮೆಟ್‌ನಲ್ಲಿ ಪ್ರಮುಖ ಆಟಗಾರರಾಗಿ ಕಾಣಿಸಿಕೊಳ್ಳಲು ಪ್ರಾರಂಭಿಸಿದ್ದಾರೆ. ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧ ಪ್ರದರ್ಶನ ನೀಡಿದ ರೀತಿಯಲ್ಲಿ ಬಹಳಷ್ಟು ಭರವಸೆಗಳನ್ನು ಇಟ್ಟುಕೊಳ್ಳಲಾಗಿದ್ದು, ಅವರು ಇನ್ನೂ ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ಥಿರತೆಯನ್ನು ಕಂಡುಕೊಳ್ಳಬೇಕಾಗಿದೆ.

ಈ ಹಿಂದೆ ಇಂಗ್ಲೆಂಡ್‌ನಲ್ಲಿ ರಾಹುಲ್ ಆಡಿದ ರೀತಿಯನ್ನು ಭಾರತದ ಮಾಜಿ ಬ್ಯಾಟ್ಸ್‌ಮನ್ ವಿವಿಎಸ್ ಲಕ್ಷ್ಮಣ್ ಶ್ಲಾಘಿಸಿದ್ದಾರೆ. ಜೊತೆಗೆ ಕೆ. ಎಲ್ ರಾಹುಲ್ ದಕ್ಷಿಣ ಆಫ್ರಿಕಾದಲ್ಲಿ ಮುಂಬರುವ ಟೆಸ್ಟ್‌ ಸರಣಿಯಲ್ಲಿ ಅದೇ ಫಾರ್ಮ್ ಅನ್ನು ಮುಂದುವರಿಸಬೇಕೆಂದು ಬಯಸಿದ್ದಾರೆ.

ಸ್ಟಾರ್ ಸ್ಪೋರ್ಟ್ ಶೋವೊಂದರಲ್ಲಿ ಮಾತನಾಡಿದ ಲಕ್ಷ್ಮಣ್ '' ಟೆಸ್ಟ್ ಕ್ರಿಕೆಟ್‌ನಲ್ಲಿ ಕೆ.ಎಲ್ ರಾಹುಲ್ ಅವರ ಸಾಧನೆ ಶ್ಲಾಘನೀಯ. ಇಂಗ್ಲೆಂಡ್ ಸರಣಿಯಲ್ಲಿ ಶುಬ್ಮನ್ ಗಿಲ್ ಮತ್ತು ಮಯಾಂಕ್ ಅಗರ್ವಾಲ್ ಗಾಯಗೊಂಡಿದ್ದರಿಂದ ಕೆ.ಎಲ್ ರಾಹುಲ್ ಅವರಿಗೆ ಅವಕಾಶ ನೀಡಲಾಯಿತು. ಆದರೆ ಅವರು ಎರಡೂ ಕೈಗಳಿಂದ ಅವಕಾಶವನ್ನು ಬಾಚಿಕೊಂಡರು'' ಎಂದು ವಿವಿಎಸ್ ಹೇಳಿದ್ದಾರೆ.

ಕೆಎಲ್ ರಾಹುಲ್ ಅವರ ಶಾಟ್ ಸೆಲೆಕ್ಷನ್ ಬಗ್ಗೆ ಮಾತನಾಡಿದ ಲಕ್ಷ್ಮಣ್, ಕೆ. ಎಲ್ ರಾಹುಲ್ ಆಕ್ರಮಣಕಾರಿ ಬ್ಯಾಟ್ಸ್‌ಮನ್, ಅವರು ಸ್ಟ್ರೋಕ್ ಆಟಗಾರ. ಆದರೆ ನೀವು ದಕ್ಷಿಣ ಆಫ್ರಿಕಾದಲ್ಲಿ ಯಶಸ್ವಿಯಾಗಬೇಕಾದರೆ, ನಿಮ್ಮ ಆಫ್-ಸ್ಟಂಪ್ ಎಲ್ಲಿದೆ ಎಂದು ನೀವು ತಿಳಿದಿರಬೇಕು ಎಂದು ಸಲಹೆ ನೀಡಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ರೋಹಿತ್ ಹೊರಗುಳಿದಿದ್ದು, ಕೆ. ಎಲ್ ರಾಹುಲ್ ಅವರ ಹೆಗಲ ಮೇಲೆ ಹೆಚ್ಚಿನ ಜವಾಬ್ದಾರಿಗಳಿವೆ. ಕೆ.ಎಲ್ ರಾಹುಲ್ ಕೊನೆಯ ಬಾರಿಗೆ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಾಗ, ಆ ಸರಣಿಯಲ್ಲಿ ಅವರು ಆಡಿದ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಕೇವಲ 30 ರನ್ ಗಳಿಸಿದ್ದರಿಂದ ಅವರು ಸಂಪೂರ್ಣವಾಗಿ ಫಾರ್ಮ್‌ ಕಳೆದುಕೊಂಡಿದ್ದರು. ಡಿಸೆಂಬರ್ 26 ರಿಂದ ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೆ.ಎಲ್ ರಾಹುಲ್ ಕಳೆದ ಬಾರಿಯ ಪ್ರವಾಸದಲ್ಲಿ ಅನುಭವಿಸಿದ ಅವಮಾನಗಳನ್ನು ಸರಿದೂಗಿಸುವ ನಿರೀಕ್ಷೆಯಿದೆ. ಏಕೆಂದರೆ ಕೆಎಲ್ ರಾಹುಲ್ ಇನ್ನೂ ಶತಕ ಗಳಿಸದ ನಾಲ್ಕು ಟೆಸ್ಟ್ ಆಡುವ ರಾಷ್ಟ್ರಗಳಲ್ಲಿ ದಕ್ಷಿಣ ಆಫ್ರಿಕಾ ಕೂಡ ಒಂದಾಗಿದೆ.

ಭಾರತದ ಇಂಗ್ಲೆಂಡ್ ಪ್ರವಾಸದ ಸಮಯದಲ್ಲಿ, ರಾಹುಲ್ 39.37 ರ ಸರಾಸರಿಯಲ್ಲಿ 315 ರನ್ ಗಳಿಸಿದರು, ಜೊತೆಗೆ ಭಾರತದ ಪರ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದರು. ಅವರು ರೋಹಿತ್ ಶರ್ಮಾ ಅವರ 368 ರನ್‌ಗಳ ಹಿಂದಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ಗಾಯಾಳು ರೋಹಿತ್ ಹೊರಗುಳಿದಿದ್ದು, ರಾಹುಲ್ ಅವರ ಹೆಚ್ಚಿನ ನಿರೀಕ್ಷೆಗಳಿವೆ.

Story first published: Thursday, December 16, 2021, 14:18 [IST]
Other articles published on Dec 16, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+