'ವನಿಂದು ಹಸರಂಗ, ದುಶ್ಮಂತ ಚಮೀರ ಆರ್‌ಸಿಬಿಗೆ ಹೊಸ ಆಯಾಮ ನೀಡಿದ್ದಾರೆ'

ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭಿಕ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿದ್ದನ್ನು ನಾವು ತಲೆಗೆ ತೆಗೆದುಕೊಳ್ಳುವುದಿಲ್ಲ. ದ್ವಿತೀಯ ಹಂತದಲ್ಲಿ ಇನ್ನೂ ಉತ್ತಮ ಪ್ರದರ್ಶನ ನೀಡಲು ಯೋಚಿಸಿದ್ದೇವೆ. ಶ್ರೀಲಂಕಾದ ವನಿಂದು ಹಸರಂಗ ಮತ್ತು ದುಶ್ಮಂತ ಚಮೀರ ತಂಡ ಸೇರಿಕೊಂಡಿರುವುದು ತಂಡಕ್ಕೆ ಹೊಸ ಆಯಾಮ ನೀಡಿದಂತಾಗಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಭಾರತದಲ್ಲಿ ಆರಂಭವಾಗಿ ಕೋವಿಡ್-19 ಕಾರಣದಿಂದಾಗಿ ಅರ್ಧಕ್ಕೆ ನಿಲ್ಲಿಸಲ್ಪಟ್ಟಿದ್ದ ಐಪಿಎಲ್ 2021ನೇ ಆವೃತ್ತಿ ಸೆಪ್ಟೆಂಬರ್ 19ರಿಂದ ಅಕ್ಟೋಬರ್ 15ರ ವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಯಲ್ಲಿ ನಡೆಯಲಿದೆ. ಎಲ್ಲಾ ಐಪಿಎಲ್ ತಂಡಗಳ ಆಟಗಾರರು ಸದ್ಯ ಯುಎಇಯಲ್ಲಿದ್ದು, ಎರಡನೇ ಹಂತದ ಪಂದ್ಯಗಳಿಗೆ ಸಜ್ಜಾಗಿದ್ದಾರೆ.
ಪ್ರಮುಖ ಆಟಗಾರರು ದ್ವಿತೀಯ ಹಂತಕ್ಕೆ ಮಿಸ್
ಐಪಿಎಲ್ ಆರಂಭಿಕ ಹಂತದಲ್ಲಿ ಆರ್‌ಸಿಬಿ ತಂಡದಲ್ಲಿ ಆಡಿದ್ದ ಕೆಲ ಆಟಗಾರರು ದ್ವಿತೀಯ ಹಂತದಿಂದ ಕಾರಣಾಂತರಗಳಿಂದ ಮಿಸ್ ಆಡಿದ್ದರು. ಮಿಸ್ ಆದವರಲ್ಲಿ ಆಸ್ಟ್ರೇಲಿಯಾದ ಆ್ಯಡಂ ಜಂಪಾ ಮತ್ತು ಕೇನ್ ರಿಚರ್ಡ್ಸನ್ ಕೂಡ ಇದ್ದರು. ಇವರ ಬದಲಾಗಿ ಆರ್‌ಸಿಬಿ ವನಿಂದು ಹಸರಂಗ ಮತ್ತು ದುಶ್ಮಂತ ಚಮೀರ ಅವರೊಡನೆ ಒಪ್ಪಂದ ಮಾಡಿಕೊಂಡಿದೆ. "ನಾವು ತಂಡದಲ್ಲಿ ಬದಲಾವಣೆ ಮಾಡಿಕೊಂಡಿದ್ದೇವೆ. ನಾವು ಬದಲಿ ಆಟಗಾರರನ್ನು ತಂಡಕ್ಕೆ ತಂದಿದ್ದೇವೆ. ಆರಂಭಿಕ ಹಂತದಲ್ಲಿ ಆಡಿದ್ದ ಆ್ಯಡಂ ಜಂಪಾ ಮತ್ತು ಕೇನ್ ರಿಚರ್ಡ್ಸನ್ ಎರಡನೇ ಹಂತದಲ್ಲಿ ಆಡುತ್ತಿಲ್ಲ. ಅವರು ಕೊಟ್ಟ ಕಾರಣ ಖಂಡಿತವಾಗಿಯೂ ಅರ್ಥಮಾಡಿಕೊಳ್ಳುವಂಥದ್ದು. ಅವರ ಬದಲಾಗಿಯೇ ಇಲ್ಲಿನ ಪರಿಸ್ಥಿತಿ ಗೊತ್ತಿರುವ ಈ ಇಬ್ಬರು ಆಟಗಾರರು ಆರ್‌ಸಿಬಿ ಸೇರಿಕೊಂಡಿದ್ದಾರೆ. ವನಿಂದು ಹಸರಂಗ ಮತ್ತು ದುಶ್ಮಂತ ಚಮೀರ ಇಬ್ಬರೂ ಶ್ರೀಲಂಕಾ ಪರ ಬಹಳಷ್ಟು ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದಾರೆ. ಇಬ್ಬರೂ ಆರ್‌ಸಿಬಿಗೆ ಹೊಸ ಆಯಾಮ ನೀಡಿದ್ದಾರೆ," ಎಂದು ಕೊಹ್ಲಿ ಹೇಳಿದ್ದಾರೆ.
ಮೂರನೇ ಸ್ಥಾನದಲ್ಲಿ ಆರ್‌ಸಿಬಿ
ಭಾರತದಲ್ಲಿ ಆರಂಭಾಗಿದ್ದ ಐಪಿಎಲ್ ಕೋವಿಡ್-19 ಕಾರಣದಿಂದಾಗಿ ಅರ್ಧಕ್ಕೆ ನಿಲ್ಲಿಸಲ್ಪಟ್ಟಿತ್ತು. ಆರಂಭಿಕ ಹಂತದಲ್ಲಿ 29 ಪಂದ್ಯಗಳು ನಡೆದಿದ್ದವು. ಇನ್ನುಳಿದ 31 ಪಂದ್ಯಗಳು ಯುಎಇಯಲ್ಲಿ ನಡೆಯಲಿದೆ. ಆರಂಭಿಕ ಹಂತದ ಪಂದ್ಯಗಳು ಮುಗಿಯುವಾಗ ಅಂಕಪಟ್ಟಿಯಲ್ಲಿ ಆರ್‌ಸಿಬಿ 3ನೇ ಸ್ಥಾನದಲ್ಲಿತ್ತು. 7 ಪಂದ್ಯಗಳನ್ನಾಡಿದ್ದ ಆರ್‌ಸಿಬಿ 5 ಗೆಲುವು, 2 ಸೋಲಿನೊಂದಿಗೆ 10 ಅಂಕ ಕಲೆ ಹಾಕಿ 3ನೇ ಸ್ಥಾನದಲ್ಲಿತ್ತು. ಮೊದಲ ಸ್ಥಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ದ್ವಿತೀಯ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಇದ್ದವು. ಹೀಗಾಗಿ ಈ ಬಾರಿ ಫೈನಲ್ ಪ್ರವೇಶಿಸಲು ಮತ್ತು ಟ್ರೋಫಿ ಗೆಲ್ಲಲು ಆರ್‌ಸಿಬಿಗೆ ಅವಕಾಶವಿದೆ. ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಆರ್‌ಸಿಬಿ ಸೇರಿಕೊಂಡಿರುವುದರಿಂದ ತಂಡದ ಬಲ ಹೆಚ್ಚಿದೆ. ಆರ್‌ಸಿಬಿ ಮೊದಲ ಪಂದ್ಯವಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಸವಾಲು ಸ್ವೀಕರಿಸಲಿದೆ.
ಭಾರತದ ಮುಖ್ಯಕೋಚ್ ಸ್ಥಾನಕ್ಕೆ ಅನಿಲ್ ಕುಂಬ್ಳೆ, ವಿವಿಎಸ್ ಲಕ್ಷ್ಮಣ್ ಅರ್ಜಿ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ವೇಳಾಪಟ್ಟಿ
* ಸೆಪ್ಟೆಂಬರ್ 20: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತಾ ನೈಟ್ ರೈಡರ್ಸ್, ರಾತ್ರಿ 7.30
* ಸೆಪ್ಟೆಂಬರ್ 24: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಚೆನ್ನೈ ಸೂಪರ್ ಕಿಂಗ್ಸ್, ರಾತ್ರಿ 7.30
* ಸೆಪ್ಟೆಂಬರ್ 26: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್, ರಾತ್ರಿ 7.30ಕ್ಕೆ
* ಸೆಪ್ಟೆಂಬರ್ 29: ರಾಜಸ್ಥಾನ ರಾಯಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸಂಜೆ 7.30ಕ್ಕೆ
* ಅಕ್ಟೋಬರ್ 3: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್, ಮಧ್ಯಾಹ್ನ 3.30ಕ್ಕೆ
* ಅಕ್ಟೋಬರ್ 6: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಸನ್ ರೈಸರ್ಸ್ ಹೈದರಾಬಾದ್, ಸಂಜೆ 7.30ಕ್ಕೆ
* ಅಕ್ಟೋಬರ್ 8: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ದೆಹಲಿ ಕ್ಯಾಪಿಟಲ್ಸ್, ಸಂಜೆ 7.30ಕ್ಕೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications