ಕೊರೊನಾ ಸೋಂಕಿಗೆ ಒಳಗಾದ ವನಿಂದು ಹಸರಂಗ ಪ್ರಮುಖ ಟೂರ್ನಿಯಿಂದ ಔಟ್

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಂಬರುವ ಮಾರ್ಚ್ ಕೊನೆಯ ವಾರ ಅಥವಾ ಏಪ್ರಿಲ್ ತಿಂಗಳಿನಲ್ಲಿ ಆರಂಭಗೊಳ್ಳಲಿದ್ದು, ಈ ಬಾರಿಯ ಟೂರ್ನಿಯಲ್ಲಿ ಟ್ರೋಫಿಗಾಗಿ ಒಟ್ಟು ಹತ್ತು ತಂಡಗಳ ನಡುವೆ ಸೆಣಸಾಟ ನಡೆಯುವುದರಿಂದ ಸಾಕಷ್ಟು ವಿಶೇಷತೆಯಿಂದ ಕೂಡಿರಲಿದೆ ಹಾಗೂ ಕುತೂಹಲವನ್ನೂ ಕೂಡ ಹುಟ್ಟು ಹಾಕಿದೆ. ಹೌದು, ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್ ಸೇರ್ಪಡೆಗೊಳ್ಳುತ್ತಿರುವ ಸಲುವಾಗಿ ಮೆಗಾ ಹರಾಜು ಪ್ರಕ್ರಿಯೆಯೂ ನಡೆದಿದೆ. ಕಳೆದ ಶನಿವಾರ ಹಾಗೂ ಭಾನುವಾರದಂದು ಬೆಂಗಳೂರಿನಲ್ಲಿ ನಡೆದ ಈ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 590 ಆಟಗಾರರು ಭಾಗವಹಿಸಿದ್ದು, 203 ಆಟಗಾರರು ಯಶಸ್ವಿಯಾಗಿ ಬಿಕರಿಯಾಗಿದ್ದಾರೆ. ಹೀಗೆ ಯಶಸ್ವಿಯಾಗಿ ಹರಾಜಾದ ಆಟಗಾರರ ಪೈಕಿ 66 ವಿದೇಶಿ ಆಟಗಾರರಿದ್ದರೆ, ಇನ್ನುಳಿದ 137 ಆಟಗಾರರು ಭಾರತೀಯರಾಗಿದ್ದಾರೆ.
ಹೀಗೆ ಬಿಕರಿಯಾದ ಆಟಗಾರರಲ್ಲಿ ಶ್ರೀಲಂಕಾ ಮೂಲದ ಆಲ್ ರೌಂಡರ್ ವನಿಂದು ಹಸರಂಗ ನಿರೀಕ್ಷೆಗೂ ಮೀರಿದ ಮೊತ್ತಕ್ಕೆ ಹರಾಜಾಗುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದರು. ಹೌದು, ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ವನಿಂದು ಹಸರಂಗ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬರೋಬ್ಬರಿ 10.75 ಕೋಟಿಗೆ ಖರೀದಿ ಮಾಡಿದೆ. ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಕೇವಲ 2 ಪಂದ್ಯಗಳನ್ನಾಡಿದ್ದ ವನಿಂದು ಹಸರಂಗ ಅವರನ್ನು ಖರೀದಿಸಲು ಈ ಬಾರಿಯ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಜಿದ್ದಾಜಿದ್ದಿನ ಹೋರಾಟ ನಡೆಸಿದವು.
ಹೀಗೆ ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ಭಾರಿ ಬೇಡಿಕೆಯೊಂದಿಗೆ ದೊಡ್ಡ ಮೊತ್ತಕ್ಕೆ ಬಿಕರಿಯಾದ ಬೆನ್ನಲ್ಲೇ ವನಿಂದು ಹಸರಂಗ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಹೌದು, ವನಿಂದು ಹಸರಂಗ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಸದ್ಯ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಟಿ ಟ್ವೆಂಟಿ ಸರಣಿಯಿಂದ ಹೊರಬಿದ್ದಿದ್ದಾರೆ. ಇನ್ನು ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಂಡಿರುವ ಶ್ರೀಲಂಕಾ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಭಾಗವಹಿಸುತ್ತಿದ್ದು ಇಂದು ( ಫೆಬ್ರವರಿ 15 ) ಇತ್ತಂಡಗಳ ನಡುವಿನ ಮೂರನೇ ಟಿ ಟ್ವೆಂಟಿ ಪಂದ್ಯ ನಡೆಯಲಿದೆ. ಹಾಗೂ ಈಗಾಗಲೇ ಮುಕ್ತಾಯಗೊಂಡಿರುವ ಇತ್ತಂಡಗಳ ನಡುವಿನ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಡಕ್ವರ್ಥ್ ಲೂಯಿಸ್ ನಿಯಮದ ಪ್ರಕಾರ ಆಸ್ಟ್ರೇಲಿಯಾ 20 ರನ್‌ಗಳ ಜಯ ಸಾಧಿಸಿತ್ತು ಹಾಗೂ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಆಸ್ಟ್ರೇಲಿಯ ಸೂಪರ್ ಓವರ್ ಜಯ ಸಾಧಿಸಿತ್ತು. ಹೀಗೆ ಸರಣಿಯಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿರುವ ಆಸ್ಟ್ರೇಲಿಯಾ ಉಳಿದ 3 ಪಂದ್ಯಗಳ ಪೈಕಿ ಯಾವುದಾದರೊಂದು ಪಂದ್ಯವನ್ನು ಗೆದ್ದರೂ ಸರಣಿಯನ್ನು ವಶಪಡಿಸಿಕೊಳ್ಳಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications