ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಾಶಿಂಗ್ಟನ್ ಸುಂದರ್ ಬೌಲಿಂಗ್‌ನಲ್ಲಿನ ಕೊರತೆಯನ್ನು ಹೇಳಿದ ಸುನಿಲ್ ಗವಾಸ್ಕರ್

Washington Sundar balls too flat for Test, says Sunil Gavaskar

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋತ ಬಳಿಕ ಸಾಕಷ್ಟು ವಿಮರ್ಶೆಗಳು ನಡೆಯುತ್ತಿದೆ. ಎರಡನೇ ಪಂದ್ಯವೂ ಇದೇ ಅಂಗಳದಲ್ಲಿ ಶನಿವಾರದಿಂದ ಆರಂಭವಾಗಲಿದ್ದು ಟೀಮ್ ಇಂಡಿಯಾ ಹೇಗೆ ತಿರುಗಿ ಬೀಳಲಿದೆ ಎಂಬುದು ಕುತೂಹಲ ಮೂಡಿಸಿದೆ. ಈ ಸಂದರ್ಭದಲ್ಲಿ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಟೀಮ್ ಇಂಡಿಯಾ ಆಲ್‌ರೌಂಡರ್ ವಾಶಿಂಗ್ಟನ್ ಸುಂದರ್ ಬೌಲಿಂಗ್‌ನಲ್ಲಿನ ಕೊರತೆಯನ್ನು ಹೇಳಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮಿಂಚಿ ಅರ್ಹವಾಗಿಯೇ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೆ ಸ್ಥಾನವನ್ನು ಪಡೆದುಕೊಂಡ ವಾಶಿಂಗ್ಟನ್ ಸುಂದರ್ ಬ್ಯಾಟಿಂಗ್‌ನಲ್ಲಿ ನಿರ್ಣಾಯಕ ಪ್ರದರ್ಶನವನ್ನು ನೀಡಿ ಮಿಂಚಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ ಅಜೇಯ 85 ರನ್ ಬಾರಿಸಿದ್ದರು ಸುಂದರ್. ಆದರೆ ಬೌಲಿಂಗ್‌ನಲ್ಲಿ ಸಂಪೂರ್ಣ ವೈಫಲ್ಯವನ್ನು ಕಂಡಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ 26 ಓವರ್ ಎಸೆದರೂ ಒಂದೇ ಒಂದು ವಿಕೆಟ್ ಪಡೆಯಲು ಸುಂದರ್‌ಗೆ ಸಾಧ್ಯವಾಗಿರಲಿಲ್ಲ.

ಇಂಗ್ಲೆಂಡ್ ವಿರುದ್ಧ 2ನೇ ಟೆಸ್ಟ್ ಸೋತರೆ ಕೊಹ್ಲಿ ಕ್ಯಾಪ್ಟನ್ ಆಗಿ ಉಳಿಯಲ್ಲ!ಇಂಗ್ಲೆಂಡ್ ವಿರುದ್ಧ 2ನೇ ಟೆಸ್ಟ್ ಸೋತರೆ ಕೊಹ್ಲಿ ಕ್ಯಾಪ್ಟನ್ ಆಗಿ ಉಳಿಯಲ್ಲ!

ಈ ಬಗ್ಗೆ ಭಾರತೀಯ ಕ್ರಿಕೆಟ್‌ನ ದಿಗ್ಗಜ ಸುನಿಲ್ ಗವಾಸ್ಕರ್ ಪ್ರತಿಕ್ರಿಯಿಸಿದ್ದಾರೆ. "ವಾಶಿಂಗ್ಟನ್ ಸುಂದರ್ ಟೆಸ್ಟ್ ಕ್ರಿಕೆಟ್‌ನಲ್ಲಿ ಫ್ಲ್ಯಾಟ್ ಆಗಿ ಬೌಲಿಂಗ್ ಮಾಡುತ್ತಾರೆ. ಇದು ಟೆಸ್ಟ್ ಕ್ರಿಕೆಟ್‌ಗೆ ಸೂಕ್ತವಾಗಲಾರದು. ಆತ ಟಿ20 ಮಾದರಿಗೆ ಒಪ್ಪುವಂತಾ ಬೌಲರ್" ಎಂದಿದ್ದಾರೆ ಸುನಿಲ್ ಗವಾಸ್ಕರ್.

"ಆತ ಉತ್ತಮವಾಗಿ ಬ್ಯಾಟಿಂಗ್ ಮಾಡುವ ಕಾರಣದಿಂದಾಗಿ ಬೌಲಿಂಗ್ ಮಾಡಲು ಸ್ವಲ್ಪ ಹೆಚ್ಚಿನ ಅವಕಾಶವನ್ನು ಪಡೆಯಬಹುದು. ಆದರೆ ಆತ ಟಿ20 ಮಾದರಿಗೆ ಸೂಕ್ತವಾಗಬಲ್ಲ ಬೌಲರ್. ಯಾಕೆಂದರೆ ಆತ ಫ್ಲ್ಯಾಟ್ ಆಗಿ ಬೌಲಿಂಗ್ ನಡೆಸಬಲ್ಲವರಾಗಿದ್ದಾರೆ. ಹೀಗಾಗಿ ಅಶ್ವಿನ್ ರೀತಿಯಲ್ಲಿ ಚೆಂಡು ಹೆಚ್ಚು ಕಾಲ ಗಾಳಿಯಲ್ಲಿ ಇರುವುದಿಲ್ಲ" ಎಂದು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಜೊತೆಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಆರ್‌ಸಿಬಿ ಬ್ಯಾಟಿಂಗ್‌ ಸಲಹೆಗಾರರಾಗಿ ಸಂಜಯ್ ಬಂಗಾರ್ ಆಯ್ಕೆಆರ್‌ಸಿಬಿ ಬ್ಯಾಟಿಂಗ್‌ ಸಲಹೆಗಾರರಾಗಿ ಸಂಜಯ್ ಬಂಗಾರ್ ಆಯ್ಕೆ

ಇನ್ನು ಇದೇ ಸಂದರ್ಭದಲ್ಲಿ ಆರ್ ಅಶ್ವಿನ್ ಅವರ ಅನುಭವವನ್ನು ಡ್ರೆಸ್ಸಿಂಗ್ ರೂಮ್‌ನಲ್ಲಿ ಪಡೆದುಕೊಂಡರೆ ತನ್ನ ಫ್ಲ್ಯಾಟ್ ಬೌಲಿಂಗ್ ಸಮಸ್ಯೆಯನ್ನು ವಾಶಿಂಗ್ಟನ್ ಸುಂದರ್ ಬಗೆಹರಿಸಿಕೊಳ್ಳಬಹುದು ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ.

Story first published: Wednesday, February 10, 2021, 21:27 [IST]
Other articles published on Feb 10, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X