ಟಿ20 ಸರಣಿಯಿಂದ ವಾಷಿಂಗ್ಟನ್ ಸುಂದರ್ ಔಟ್: ಮೂರು ಪಂದ್ಯಗಳಿಗೂ ಮಿಸ್

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನ ವೈಟ್ ವಾಶ್ ಮಾಡಿ ಟಿ20 ಸರಣಿಗೆ ರೆಡಿಯಾಗುತ್ತಿರುವ ಬೆನ್ನಲ್ಲೇ ಟೀಂ ಇಂಡಿಯಾಗೆ ಕೊಂಚ ಹಿನ್ನಡೆಯಾಗಿದೆ. ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಮುಂದಿನ ಮೂರು ಟಿ20 ಪಂದ್ಯಗಳಿಗೂ ಅಲಭ್ಯರಾಗಿದ್ದಾರೆ.
ಕೋವಿಡ್-19 ಸೋಂಕಿನ ಕಾರಣದಿಂದಾಗಿ ಕೊನೆಯ ಕ್ಷಣದಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಮಿಸ್ ಮಾಡಿಕೊಂಡಿದ್ದ ತಮಿಳುನಾಡು ಮೂಲದ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಟೀಂ ಇಂಡಿಯಾಗೆ ಕಂಬ್ಯಾಕ್ ಮಾಡಿದ್ರು. ಏಕದಿನ ಸರಣಿಯಲ್ಲಿ ಭಾಗವಹಿಸಿದ್ದ ಸುಂದರ್ 10 ತಿಂಗಳುಗಳ ಕಾಲ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ಹೊರಗುಳಿದಿದ್ರು. ಆದ್ರೆ ಏಕದಿನ ಸರಣಿ ಆಡಿದ ಬೆನ್ನಲ್ಲೇ ಮತ್ತೆ ಅಲಭ್ಯರಾಗಿದ್ದು, ಗಾಯಾಳುವಾಗಿ ಟಿ20 ಸರಣಿ ಮಿಸ್ ಮಾಡಿಕೊಂಡಿದ್ದಾರೆ.
ಇನ್ನು ನ್ಯೂಜಿಲೆಂಡ್ ವಿರುದ್ಧ ಚೊಚ್ಚಲ ಟಿ20 ಸರಣಿ ಹಾಗೂ ವಿಂಡೀಸ್ ವಿರುದ್ಧ ಏಕದಿನ ಸರಣಿಯಲ್ಲಿ ಯಶಸ್ವಿಯಾಗಿ ತಂಡವನ್ನ ಮುನ್ನಡೆಸಿದ್ದ ರೋಹಿತ್ ಶರ್ಮಾ ವಿಂಡೀಸ್ ವಿರುದ್ಧ ಟಿ20 ಸರಣಿಯಲ್ಲಿ ಗೆಲುವಿನ ಓಟ ಮುಂದುವರಿಸುವ ಲೆಕ್ಕಾಚಾರ ಹೊಂದಿದ್ದಾರೆ.
ಫೆಬ್ರವರಿ 16ರಿಂದ ಕೊಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಆರಂಭಗೊಳ್ಳಲಿರುವ ಟಿ20 ಸರಣಿಯಲ್ಲಿ ಭಾಗವಹಿಸುವ ಭಾರತದ ಸ್ಕ್ವಾಡ್ ಈ ಕೆಳಗಿದೆ
ಟೀಂ ಇಂಡಿಯಾ ಟಿ20 ಸ್ಕ್ವಾಡ್
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಸರ್ ಪಟೇಲ್, ಯುಜವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್, ಅವೇಶ್ ಖಾನ್, ಹರ್ಷಲ್ ಪಟೇಲ್
ವೆಸ್ಟ್ ಇಂಡಿಸ್ ವಿರುದ್ಧ ಟಿ20 ಸರಣಿಯ ವೇಳಾಪಟ್ಟಿ
ಟಿ20 ಸರಣಿಯ ವೇಳಾಪಟ್ಟಿ:
1 ನೇ T20, ಫೆಬ್ರವರಿ 16 , ಬುಧವಾರ, ಕೋಲ್ಕತ್ತಾ (7PM)
2 ನೇ T20, ಫೆಬ್ರವರಿ 18 , ಶುಕ್ರವಾರ, ಕೋಲ್ಕತ್ತಾ (7PM)
3ನೇ T20, ಫೆಬ್ರವರಿ 20 , ಭಾನುವಾರ, ಕೋಲ್ಕತ್ತಾ (7PM)
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications