IND vs AUS: ವಾಷಿಂಗ್ಟನ್ ಸುಂದರ್ ಅಮೋಘ ಆಟ: ಸರಣಿಯಲ್ಲಿ ಸಮಬಲ ಸಾಧಿಸಿದ ಭಾರತ
ಭರವಸೆಯ ಬ್ಯಾಟರ್ ವಾಷಿಂಗ್ಟನ್ ಸುಂದರ್ ಅವರ ಕೆಚ್ಚೆದೆಯ ಬ್ಯಾಟಿಂಗ್ ನೆರವಿನಿಂದ ಭಾರತ 5 ವಿಕೆಟ್‌ಗಳಿಂದ ಹೋಬಾರ್ಟ್‌ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಜಯ ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 1-1 ಸಮಬಲ ಸಾಧಿಸುವಲ್ಲಿ ಯಶಸ್ವಿಯಾಗಿದೆ.
187 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಭಾರತ ಆರಂಭ ಸಾಧಾರಣವಾಗಿತ್ತು. ಅಭಿಷೇಕ್ ಶರ್ಮಾ ಹಾಗೂ ಶುಭಮನ್ ಗಿಲ್ ಜೋಡಿ ಮೊದಲ ವಿಕೆಟ್‌ಗೆ 3.3 ಓವರ್‌ಗಳಲ್ಲಿ 33 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಈ ವೇಳೆ ಅಭಿಷೇಕ್ ಶರ್ಮಾ 2 ಬೌಂಡರಿ, 2 ಸಿಕ್ಸರ್ ನೆರವಿನಿಂದ 25 ರನ್ ಸಿಡಿಸಿ ಔಟ್ ಆದರು. ಶುಭಮನ್ ಗಿಲ್ ಈ ಅವಕಾಶವನ್ನು ಎರಡೂ ಕೈಗಳಲ್ಲಿ ಬಳಸಿಕೊಳ್ಳುವಲ್ಲಿ ಎಡವಿದರು. 12 ಎಸೆತಗಳಲ್ಲಿ 1 ಬೌಂಡರಿ ನೆರವಿನಿಂದ 15 ರನ್ ಬಾರಿಸಿ ಔಟ್ ಆದರು.

ನಾಯಕ ಸೂರ್ಯಕುಮಾರ್ ಯಾದವ್ ತಮ್ಮ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು ಕೇವಲ 11 ಎಸೆತಗಳಲ್ಲಿ 1 ಬೌಂಡರಿ, 2 ಸಿಕ್ಸರ್ ಸಹಾಯದಿಂದ 24 ರನ್ ಸಿಡಿಸಿ ಔಟ್ ಆದರು. ಮಧ್ಯಮ ಕ್ರಮಾಂಕದ ಭರವಸೆಯ ಆಟಗಾರ ತಿಲಕ್ ವರ್ಮಾ 26 ಎಸೆತಗಳಲ್ಲಿ 1 ಬೌಂಡರಿ, 1 ಸಿಕ್ಸರ್ ನೆರವಿನಿಂದ 29 ರನ್ ಬಾರಿಸಿ ಇಲ್ಲದ ಶಾಟ್ ಬಾರಿಸಲು ಹೋಗಿ ಔಟ್ ಆದರು. ಆಲ್‌ರೌಂಡರ್ ಅಕ್ಷರ್ ಪಟೇಲ್ 1 ಬೌಂಡರಿ ಸಹಾಯದಿಂದ 17 ರನ್ ಸಿಡಿಸಿದರು.
ಭರ್ಜರಿ ಜೊತೆಯಾಟ
ಭಾರತದ ಪರ ಆರನೇ ವಿಕೆಟ್‌ಗೆ ಜಿತೇಶ್ ಶರ್ಮಾ ಹಾಗೂ ವಾಷಿಂಗ್ಟನ್ ಸುಂದರ್ ತಂಡವನ್ನು ಗೆಲುವಿನ ದಡ ದಾಟಿಸುವಲ್ಲಿ ಸಫಲರಾದರು. ಈ ಜೋಡಿ ಭಾರಕ್ಕೆ ಅಗತ್ಯ ರನ್ ಕಲೆಹಾಕುವಲ್ಲಿ ಸಫಲವಾಯಿತು. ಈ ಜೊಡಿ 25 ಎಸೆತಗಳಲ್ಲಿ ಅಜೇಯ 43 ರನ್ ಸಿಡಿಸಿ ತಂಡಕ್ಕೆ ಆಧಾರವಾದರು. ವಾಷಿಂಗ್ಟನ್ ಸುಂದರ್ 23 ಎಸೆತಗಳಲ್ಲಿ 3 ಬೌಂಡರಿ, 4 ಸಿಕ್ಸರ್ ಸಹಾಯದಿಂದ ಅಜೇಯ 49 ರನ್ ಸಿಡಿಸಿದರು. ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಬ್ಯಾಟಿಂಗ್ ಮಾಡುವ ಅವಕಾಶವನ್ನು ಪಡೆದ ಜಿತೇಶ್ ಶರ್ಮಾ 3 ಬೌಂಡರಿ ಸಹಾಯದಿಂದ ಅಜೇಯ 22 ರನ್ ಸೇರಿಸಿತು. ಅಂತಿಮವಾಗಿ ಭಾರತ 18.3 ಓವರ್‌ಗಳಲ್ಲಿ 5 ವಿಕೆಟ್‌ಗೆ 188 ರನ್ ಸೇರಿಸಿ ಜಯ ಸಾಧಿಸಿತು.

ಡೇವಿಡ್ ಅರ್ಧಶತಕ
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆಸೀಸ್ ತಂಡದ ಆರಂಭ ಕಳಪೆಯಾಗಿತ್ತು. ಟ್ರಾವಿಸ್ ಹೆಡ್ (6), ಜೋಶ್ ಇಂಗ್ಲೀಷ್ (1) ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲಾರದರು. ಮಧ್ಯಮ ಕ್ರಮಾಂಕದಲ್ಲಿ ಟೀಮ್ ಡೇವಿಡ್ 38 ಎಸೆತಗಳಲ್ಲಿ 8 ಬೌಂಡರಿ, 5 ಸಿಕ್ಸರ್ ನೆರವಿನಿಂದ 74 ರನ್ ಬಾರಿಸಿದರು. ಸ್ಟಾರ್ ಆಲ್‌ರೌಂಡರ್ ಮಾರ್ಕಸ್ ಸ್ಟೋಯ್ನಿಸ್ ಸಹ ತಂಡಕ್ಕೆ ಆಧಾರವಾದರು. ಇವರು 47 ನಿಮಿಷ ಬ್ಯಾಟಿಂಗ್ ನಡೆಸಿ 64 ರನ್ ಬಾರಿಸಿದರು. ಈ ವೇಳೆ 8 ಬೌಂಡರಿ, 2 ಸಿಕ್ಸರ್ ಸಿಡಿಸಿದರು. ಇವರಿಬ್ಬರ ಅರ್ಧಶತಕ ಬಲದಿಂದ ಆಸೀಸ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 186 ರನ್ ಸೇರಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications