IND vs PAK: ವಿರಾಟ್ ಕೊಹ್ಲಿಯನ್ನು ಗೇಲಿ ಮಾಡಿದ ವಾಸಿಂ ಅಕ್ರಮ್
ಚಾಂಪಿಯನ್ಸ್ ಟ್ರೋಫಿ 2025ರ ಹೈವೋಲ್ಟೇಜ್ ಪಂದ್ಯ ಇಂದು ಭಾರತ ಮತ್ತು ಪಾಕಿಸ್ತಾನ ನಡುವೆ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭವಾಗಿದೆ. ಉಭಯ ತಂಡಗಳ ನಡುವಿನ ಪಂದ್ಯದ ಮೇಲೆ ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳ ಚಿತ್ತ ನೆಟ್ಟಿದೆ. ಈ ರೋಚಕ ಪಂದ್ಯಕ್ಕೂ ಮುನ್ನ, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ವಾಸಿಮ್ ಅಕ್ರಮ್ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರನ್ನು ಗೇಲಿ ಮಾಡಿದ್ದಾರೆ. ಇದರಿಂದ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಕೋಪಗೊಂಡಿದ್ದಾರೆ.
ಇಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೂ ಮುನ್ನ ಎರಡೂ ತಂಡಗಳ ಅಭಿಮಾನಿಗಳು ಮುಖಾಮುಖಿಯಾಗಿದ್ದಾರೆ. ಮಾಜಿ ಕ್ರಿಕೆಟಿಗರ ನಡುವೆ ಮಾತಿನ ಚಕಮಕಿಯೂ ಆರಂಭವಾಯಿತು. ಈ ವೇಳೆ ವಾಸಿಮ್ ಅಕ್ರಮ್ ಪಾಕಿಸ್ತಾನಿ ಟಿವಿ ಚಾನೆಲ್‌ವೊಂದರ ಲೈವ್ ಶೋನಲ್ಲಿ ವಿರಾಟ್ ಕೊಹ್ಲಿಯನ್ನು ಗೇಲಿ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಪಾಕಿಸ್ತಾನಿ ಟಿವಿ ಚಾನೆಲ್‌ನ ನಿರೂಪಕ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಕುರಿತು ಮಾತನಾಡುವಾಗ ಅಕ್ರಮ್‌ಗೆ ಕೊಹ್ಲಿ ಬಗ್ಗೆ ಏನಾದರೂ ಚರ್ಚಿಸೋಣ ಎಂದು ಹೇಳಿದರು. ಇದಕ್ಕೆ ಅಕ್ರಂ, 'ನೀವು ಕೊಹ್ಲಿ ಬಗ್ಗೆ ಮಾತನಾಡಲು ಬಯಸಿದರೆ ಸ್ಟಾರ್ ಸ್ಪೋರ್ಟ್ಸ್ ನೋಡಿ' ಎಂದು ಉತ್ತರಿಸಿದರು. ಇದಾದ ನಂತರ, ಅಕ್ರಮ್ ಲೈವ್ ಶೋನಲ್ಲಿ ಜೋರಾಗಿ ನಗಲು ಪ್ರಾರಂಭಿಸಿದರು. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಉಭಯ ತಂಡಗಳ ಅಭಿಮಾನಿಗಳು ಈ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ.
ರಾಟ್ ಕೊಹ್ಲಿ ಪ್ರಸ್ತುತ ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದಾರೆ. ಅದಕ್ಕಾಗಿಯೇ ಅವರು ಟೀಕೆಗಳನ್ನು ಎದುರಿಸುತ್ತಿದ್ದಾರೆ. ಆದರೆ, ಇಂದಿನ ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಕೊಹ್ಲಿ ರನ್ ಗಳಿಸುವ ನಿರೀಕ್ಷೆಯಿದೆ. 2017 ರ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿನ ಸೋಲಿಗೆ ಪಾಕಿಸ್ತಾನದ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾರೆ ಎಂದು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಆಶಿಸುತ್ತಿದ್ದಾರೆ.
ಪಾಕಿಸ್ತಾನ ವಿರುದ್ಧ ವಿರಾಟ್ ದಾಖಲೆ
ಪಾಕಿಸ್ತಾನ ವಿರುದ್ಧ ಆಡುವಾಗ ವಿರಾಟ್ ಕೊಹ್ಲಿ ಉತ್ತಮ ಅಂಕಿ-ಅಂಶಗಳನ್ನು ಕಲೆ ಹಾಕಿದ್ದಾರೆ. ಪಾಕಿಸ್ತಾನ ವಿರುದ್ಧ 16 ಏಕದಿನ ಪಂದ್ಯಗಳನ್ನು ಆಡಿರುವ ವಿರಾಟ್, 52.15 ರ ಸರಾಸರಿ ಮತ್ತು 100.29 ರ ಅತ್ಯುತ್ತಮ ಸ್ಟ್ರೈಕ್ ರೇಟ್‌ನಲ್ಲಿ ಒಟ್ಟು 678 ರನ್ ಗಳಿಸಿದ್ದಾರೆ. ಈ ವೇಳೆ ಅವರ 3 ಶತಕಗಳು ಮತ್ತು 2 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಪಾಕಿಸ್ತಾನ ವಿರುದ್ಧ ವಿರಾಟ್ 183 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications