ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್, ಪಾಕಿಸ್ತಾನ ಅಲ್ಲ ಈ ತಂಡ ಟಿ ಟ್ವೆಂಟಿ ವಿಶ್ವಕಪ್ ಗೆಲ್ಲಲಿದೆ ಎಂದ ವಾಸಿಮ್ ಅಕ್ರಮ್

Wasim Akram picks favourites to win T20 World Cup 2021

ಈ ವರ್ಷದ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳುಗಳಲ್ಲಿ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಭಾರತ ನೆಲದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. 5 ವರ್ಷಗಳ ಬಳಿಕ ಭಾರತದಲ್ಲಿ ಟಿ ಟ್ವೆಂಟಿ ವಿಶ್ವಕಪ್ ನಡೆಯಲಿದ್ದು, ಕಳೆದ ಬಾರಿ 2016ರಲ್ಲಿ ಭಾರತದಲ್ಲಿ ನಡೆದಿದ್ದ ಟ್ವೆಂಟಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ವೆಸ್ಟ್ ಇಂಡೀಸ್ ತಂಡ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು.

ಆ ಒಬ್ಬ ಆಟಗಾರನಿಂದ ನನಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಸಿಗಲಿಲ್ಲ: ಅಕ್ಷರ್ ಪಟೇಲ್

ಈ ವರ್ಷ ಮತ್ತೊಮ್ಮೆ ಭಾರತದ ನೆಲದಲ್ಲಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ನಡೆಯಲಿದ್ದು ಯಾವ ತಂಡ ಟ್ರೋಫಿ ಗೆಲ್ಲಲಿದೆ ಎಂಬ ಚರ್ಚೆಗಳು ಹೆಚ್ಚಾಗಿ ನಡೆಯುತ್ತಿವೆ. ಈ ಚರ್ಚೆಗೆ ಇದೀಗ ಪಾಕಿಸ್ತಾನದ ಮಾಜಿ ಆಟಗಾರ ವಾಸಿಂ ಅಕ್ರಮ್ ಕೂಡ ಸೇರಿಕೊಂಡಿದ್ದು ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಗೆಲ್ಲಲಿದೆ ಎಂದಿದ್ದಾರೆ.

ರೋಹಿತ್, ರಾಹುಲ್ ಅಲ್ಲ ಈತನೇ ಕೊಹ್ಲಿ ನಂತರ ಭಾರತದ ನಾಯಕ ಎಂದ ಸಲ್ಮಾನ್ ಬಟ್

'ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲಿರುವ ಪ್ರಮುಖ ತಂಡಗಳ ಪೈಕಿ ನಾನು ಭಾರತ ತಂಡ ವಿಜಯ ಸಾಧಿಸಲಿದೆ ಎಂದು ಆಯ್ಕೆ ಮಾಡುತ್ತೇನೆ. ಟೀಮ್ ಇಂಡಿಯಾ ಆಟಗಾರರು ಯಾವುದೇ ಭಯವಿಲ್ಲದೆ ತಮ್ಮದೇ ಶೈಲಿಯ ಟಿ ಟ್ವೆಂಟಿ ಕ್ರಿಕೆಟ್ ಆಡುತ್ತಾರೆ. ಹೀಗಾಗಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಗೆಲ್ಲಲಿದೆ' ಎಂದು ವಾಸಿಂ ಅಕ್ರಮ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂಗ್ಲೆಂಡ್, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್ ತಂಡಗಳು ಕೂಡ ಡೇಂಜರಸ್

ಇಂಗ್ಲೆಂಡ್, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್ ತಂಡಗಳು ಕೂಡ ಡೇಂಜರಸ್

ಟಿ ಟ್ವೆಂಟಿ ವಿಶ್ವಕಪ್ ಗೆಲ್ಲುವ ತಂಡದ ಕುರಿತು ಮಾತನಾಡುವ ವೇಳೆ ವಾಸಿಂ ಅಕ್ರಂ ಇಂಗ್ಲೆಂಡ್, ನ್ಯೂಜಿಲೆಂಡ್ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಕೂಡ ಡೇಂಜರಸ್ ಆಗಿದ್ದು ತೀವ್ರ ಪೈಪೋಟಿಯನ್ನು ನೀಡಲಿವೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ತಂಡ ತನ್ನ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು

ಪಾಕಿಸ್ತಾನ ತಂಡ ತನ್ನ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು

ಓರ್ವ ಪಾಕಿಸ್ತಾನಿಯಾಗಿ ಪಾಕಿಸ್ತಾನ ಟಿ ಟ್ವೆಂಟಿ ವಿಶ್ವಕಪ್ ಗೆಲ್ಲಬೇಕು ಎಂಬ ಆಸೆ ನನಗಿದೆ ಆದರೆ ತಂಡದಲ್ಲಿ ಸಮಸ್ಯೆಗಳಿವೆ, ಅದರಲ್ಲಿಯೂ ಮಧ್ಯಮ ಕ್ರಮಾಂಕದ ಸಮಸ್ಯೆ ಮುಖ್ಯವಾಗಿ ಬಗೆಹರಿಯಬೇಕು. ಯುವ ಆಟಗಾರ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾನೆ, ಸಮಸ್ಯೆಗಳನ್ನು ಬಗೆಹರಿಸಿಕೊಂಡು ಪಾಕಿಸ್ತಾನ ತಂಡ ಉತ್ತಮ ಪ್ರದರ್ಶನ ನೀಡಿ ಟ್ರೋಫಿ ಗೆದ್ದರೆ ಕನಸು ನನಸಾದಂತೆ ಎಂದು ವಾಸಿಂ ಅಕ್ರಂ ಹೇಳಿಕೊಂಡಿದ್ದಾರೆ.

ಜೂನ್ 1ರಂದು ಐಸಿಸಿ ಕಾರ್ಯಕಾರಿ ಮಂಡಳಿ ಸಭೆ

ಜೂನ್ 1ರಂದು ಐಸಿಸಿ ಕಾರ್ಯಕಾರಿ ಮಂಡಳಿ ಸಭೆ

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಭಾರತದಲ್ಲಿ ನಡೆಸಲು ಯೋಜಿಸಲಾಗಿದೆ. ಆದರೆ ದೇಶದಲ್ಲಿ ಕೊರೊನಾವೈರಸ್ ದಿನೇದಿನೆ ಹೆಚ್ಚುತ್ತಿರುವ ಕಾರಣ ಟಿ ಟ್ವೆಂಟಿ ವಿಶ್ವಕಪ್ ನಡೆಸುವ ಸಂಭವ ಕಡಿಮೆಯಿದೆ ಎನ್ನಲಾಗುತ್ತಿದೆ. ಈ ವಿಷಯದ ಕುರಿತಾಗಿ ಜೂನ್ 1ರಂದು ಐಸಿಸಿ ಕಾರ್ಯಕಾರಿ ಮಂಡಳಿ ಸಭೆ ನಡೆಯಲಿದ್ದು, ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಭಾರತದಲ್ಲಿ ನಡೆಯಲಿದೆಯಾ ಅಥವಾ ಎರಡನೇ ಆಯ್ಕೆಯಾದ ಯುಎಇಯಲ್ಲಿ ನಡೆಯಲಿದೆಯಾ ಎಂಬುದರ ಕುರಿತು ಚರ್ಚೆ ನಡೆಯಲಿದೆ.

Story first published: Friday, May 28, 2021, 9:37 [IST]
Other articles published on May 28, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X