ಅದ್ಭುತ ಶತಕದಿಂದ ವಂಚಿತವಾದರು: ಪೂಜಾರ ಆಟಕ್ಕೆ ತಲೆದೂಗಿದ ಜಾಫರ್

ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಮೊದಲ ದಿನ ಸಾಧಾರಣ ಪ್ರದರ್ಶನ ನೀಡಿದೆ. ಮೊದಲ ದಿನದಾಟದ ಅಂತ್ಯದಲ್ಲಿ ಟೀಮ್ ಇಂಡಿಯಾ 276 ರನ್‌ಗಳನ್ನು ಗಳಿಸಿದ್ದು 6 ವಿಕೆಟ್ ಕಳೆದುಕೊಂಡಿದೆ. ಟೀಮ್ ಇಂಡಿಯಾ ಪರವಾಗಿ ಅನುಭವಿ ಆಟಗಾರ ಚೇತೇಶ್ವರ್ ಪೂಜಾರ ಅದ್ಭುತ ಪ್ರದರ್ಶನ ನಿಡಿದ್ದು 90 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಇನ್ನು ಶ್ರೇಯಸ್ ಐಯ್ಯರ್ ಅವರಿಂದ ಕೂಡ ಉತ್ತಮ ಇನ್ನಿಂಗ್ಸ್ ಬಂದಿದ್ದು 82 ರನ್‌ಗಳಿಸಿ ಅಜೇಯವಾಗುಳಿದಿದ್ದಾರೆ.
ಇನ್ನು ಈ ಪಂದ್ಯದ ಬಳಿಕ ಮಾತನಾಡಿದ ಮಾಜಿ ಕ್ರಿಕೆಟಿಗ ವಾಸಿಮ್ ಜಾಫರ್ ಪೂಜಾರ ಬ್ಯಾಟಿಂಗ್ ಬಗ್ಗೆ ವಿಶೇಷ ಮಾತುಗಳನ್ನಾಡಿದ್ದಾರೆ. ತಮ್ಮ ಸಾಮರ್ಥ್ಯವನ್ನು ಅರಿತುಕೊಂಡು ಆಡಿರುವ ಪೂಜಾರ ಒತ್ತಡವನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಉತ್ತಮ ಪ್ರದರ್ಶನ ನೀಡಿದ್ದಾರೆ ಎಂದಿದ್ದಾರೆ. "ಪೂಜಾರ ಮ್ಮಿಂದ ಯಾವ ರೀತಿಯ ಪ್ರದರ್ಶನದ ಅಗತ್ಯವಿದೆ ಎಂಬುದನ್ನು ಅರ್ಥಮಾಡಿಕೊಳ್ಳುವಂತಾ ಆಟಗಾರ. ಇದು ಪೂಜಾರ ಅವರ ಗುಣಮಟ್ಟದ ಆಟವಾಗಿದೆ. ಒಂದು ತುದಿಯಲ್ಲಿ ವಿಕೆಟ್ ಉರುಳುತ್ತಿದ್ದರೂ ಎಲ್ಲಾ ಒತ್ತಡವನ್ನು ನಿಭಾಯಿಸಿಕೊಂಡು ಮುನ್ನಡೆಯುವ ಶಕ್ತಿ ಅವರಲ್ಲಿದೆ" ಎಂದಿದ್ದಾರೆ ವಾಸಿಮ್ ಜಾಫರ್.
ಮುಂದುವರಿದು ಮಾತನಾಡಿದ ಅವರು "ಉತ್ತಮ ಇನ್ನಿಂಗ್ಸ್ ಕಟ್ಟಿದರೂ ಪೂಜಾರ ಅವರಿಗೆ ದುರದೃಷ್ಟ ಕಾದಿತ್ತು. ಅದ್ಭುತವಾದ ಶತಕವನ್ನು ಕಳೆದುಕೊಂಡಿರುವುದಕ್ಕೆ ಬೇಸರವಾಗುತ್ತದೆ" ಎಂದಿದ್ದಾರೆ ಮಾಜಿ ಕ್ರಿಕೆಟಿಗ ವಾಸಿಮ್ ಜಾಫರ್. ಪೂಜಾರ ಈ ಪಂದ್ಯದಲ್ಲಿ ಶ್ರೇಯಸ್ ಐಯ್ಯರ್ ಅವರೊಂದಿಗೆ 5ನೇ ವಿಕೆಟ್‌ಗೆ 149 ರನ್‌ಗಳ ಅದ್ಭುತ ಜೊತೆಯಾಟ ನೀಡುವ ಮೂಲಕ ಭಾರತ ತಂಡವನ್ನು ಕುಸಿತದಿಂದ ಪಾರು ಮಾಡುವುದರ ಜೊತೆಗೆ ಸವಾಲಿನ ಮೊತ್ತ ಪೇರಿಸುವತ್ತ ಹೆಜೆಯಿಡಲು ಕಾರಣವಾಗಿದ್ದಾರೆ.
ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಜೋಡಿಯಿಂದ ಸಾಧಾರಣ ಪ್ರದರ್ಶನ ವ್ಯಕ್ತವಾಯಿತು. ಬಳಿಕ ವಿರಾಟ್ ಕೊಹ್ಲಿ ಕೂಡ ಶೀಘ್ರವಾಗಿ ವಿಕೆಟ್ ಕಳೆದುಕೊಂಡು ಫೆವಿಲಿಯನ್ ಸೇರಿಕೊಂಡರು. ಆದರೆ ಚೇತೇಶ್ವರ್ ಪೂಜಾರ, ರಿಷಬ್ ಪಂತ್ ಹಾಗೂ ಶ್ರೇಯಸ್ ಐಯ್ಯರ್ ಅವರಿಂದ ಉತ್ತಮ ಬ್ಯಾಟಿಂಗ್ ಪ್ರದರ್ಶನ ಬಂದಿದ್ದು ಹೋರಾಟದ ಪ್ರದರ್ಶನ ನೀಡಿದೆ.
ಬಾಂಗ್ಲಾದೇಶದ ಎಡಗೈ ಸ್ಪಿನ್ನರ್ ತೈಜುಲ್ ಇಸ್ಲಾಮ್ ಟೀಮ್ ಇಂಡಿಯಾ ಬ್ಯಾಟಿಂಗ್ ವಿಭಾಗದ ಮೇಲೆ ಮೊದಲ ದಿನ ಯಶಸ್ಸು ಸಾಧಿಸಿದರು. ಮೊದಲಿಗೆ ಆರಂಭಿಕ ಜೋಡಿಯಾದ ಕೆಎಲ್ ರಾಹುಲ್ ಹಾಗೂ ಶುಬ್ಮನ್ ಗಿಲ್ ಅವರನ್ನು ಬೇರ್ಪಡಿಸುವ ಮೂಲಕ ಬಾಂಗ್ಲಾದೇಶ ತಂಡಕ್ಕೆ ಮೊದಲ ಯಶಸ್ಸು ನೀಡಿದರು. 20 ರನ್‌ಗಳಿಸಿದ ಶುಬ್ಮನ್ ಗಿಲ್ ತೈಜುಲ್ ಇಸ್ಲಾಮ್‌ಗೆ ವಿಕೆಟ್ ನೀಡುವ ಮೂಲಕ ಆಘಾತ ಅನುಭವಿಸಿರು. ಬಳಿಕ ವಿರಾಟ್ ಕೊಹ್ಲಿ ಕೂಡ ತೈಜುಲ್ ಎಸೆತದಲ್ಲಿ ಕೇವಲ 1 ರನ್‌ಗಳಿಸಿದ್ದಾಗ ಎಲ್‌ಬಿಡಬ್ಲ್ಯು ಬಲೆಗೆ ಬಿದ್ದಿದ್ದರು. ನಂತರ 90 ರನ್‌ಗಳಿಸಿ ಶತಕದತ್ತ ಹೆಚ್ಚೆ ಹಾಕುತ್ತಿದ್ದ ಚೇತೇಶ್ವರ್ ಪೂಜಾರ ಕೂಡ ಬೌಲ್ಡ್ ಆಗಿ ನಿರ್ಗಮಿಸುವ ಮೂಲಕ ತೈಜುಲ್ 3ನೇ ವಿಕೆಟ್ ಸಂಪಾದಿಸಿದರು.
ಇತ್ತಂಡಗಳ ಆಡುವ ಬಳಗ
ಬಾಂಗ್ಲಾದೇಶ ಆಡುವ ಬಳಗ: ಝಾಕಿರ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಲಿಟ್ಟನ್ ದಾಸ್, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್, ಯಾಸಿರ್ ಅಲಿ, ನೂರುಲ್ ಹಸನ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್, ಎಬಾಡೋತ್ ಹೊಸೈನ್
ಬೆಂಚ್: ಮಹಮ್ಮದುಲ್ ಹಸನ್ ಜಾಯ್, ಮೊಮಿನುಲ್ ಹಕ್, ಶೋರಿಫುಲ್ ಇಸ್ಲಾಂ, ಅನಾಮುಲ್ ಹಕ್, ರೆಜೌರ್ ರೆಹಮಾನ್ ರಾಜ
ಟೀಮ್ ಇಂಡಿಯಾ ಆಡುವ ಬಳಗ: ಶುಬ್ಮನ್ ಗಿಲ್, ಕೆಎಲ್ ರಾಹುಲ್ (ನಾಯಕ), ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್,
ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್
ಬೆಂಚ್: ಶ್ರೀಕರ್ ಭರತ್, ನವದೀಪ್ ಸೈನಿ, ಅಭಿಮನ್ಯು ಈಶ್ವರನ್, ಸೌರಭ್ ಕುಮಾರ್, ಶಾರ್ದೂಲ್ ಠಾಕೂರ್, ಜಯದೇವ್ ಉನದ್ಕಟ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications