ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ ವೈಟ್‌ಬಾಲ್ ತಂಡಕ್ಕೆ ಈತನೇ ನಾಯಕನಾಗಲಿ: ವಾಸಿಮ್ ಜಾಫರ್

Wasim Jaffer said Hardik Pandya should be first choice for limited-overs captaincy absence of Rohit Sharma

ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಕೂಡ ಟೀಮ್ ಇಂಡಿಯಾ ಖಾಯಂ ನಾಯಕ ರೋಹಿತ್ ಶರ್ಮಾ ಅಲಭ್ಯವಾಗಿದ್ದಾರೆ. ಹೀಗಾಗಿ ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಹಾರ್ದಿಕ್ ಪಾಂಟ್ಯ ಮುನ್ನಡೆಸಲಿದ್ದಾರೆ. ಬಿಸಿಸಿಐನ ಈ ನಿರ್ಧಾರದ ಬಗ್ಗೆ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಮೆಚ್ಚುಗೆ ವ್ಯಕ್ತಪಡಿಸಿದ್ದು ಅಮೂಲ್ಯ ಸಲಹೆಯೊಂದನ್ನು ನೀಡಿದ್ದಾರೆ.

ರೋಹಿತ್ ಶರ್ಮಾ ಅಲಭ್ಯತೆಯಲ್ಲಿ ಹಾರ್ದಿಕ್ ಪಾಂಡ್ಯಗೆ ಟೀಮ್ ಇಂಡಿಯಾದ ನಾಯಕತ್ವ ನೀಡಿರುವುದು ಉತ್ತಮವಾದ ನಿರ್ಧಾರ ಎಂದಿದ್ದಾರೆ ವಾಸಿಂ ಜಾಫರ್. ದಕ್ಷಿಣ ಆಫ್ರಿಕಾ ವಿರುದ್ಧಧ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಉಪನಾಯಕನಾಗಿ ನಾಯಕ ರಿಷಭ್ ಪಂತ್‌ಗೆ ಬೆಂಬಲ ನೀಡುತ್ತಿದ್ದಾರೆ. ಐರ್ಲೆಂಡ್ ಪ್ರವಾಸಕ್ಕೆ ಪಂತ್‌ಗೆ ವಿಶ್ರಾಂತಿ ನೀಡಲಾಗಿದೆ.

ಭಾರತ vs ಇಂಗ್ಲೆಂಡ್ 5ನೇ ಟೆಸ್ಟ್: ಕೆಎಲ್ ರಾಹುಲ್ ಇಲ್ಲದೆ ಯುಕೆಗೆ ಪ್ರಯಾಣ ಬೆಳೆಸಿದ ಭಾರತೀಯ ಟೆಸ್ಟ್ ತಂಡಭಾರತ vs ಇಂಗ್ಲೆಂಡ್ 5ನೇ ಟೆಸ್ಟ್: ಕೆಎಲ್ ರಾಹುಲ್ ಇಲ್ಲದೆ ಯುಕೆಗೆ ಪ್ರಯಾಣ ಬೆಳೆಸಿದ ಭಾರತೀಯ ಟೆಸ್ಟ್ ತಂಡ

ನಾಯಕನಾಗಲು ಹಾರ್ದಿಕ್ ಅರ್ಹ

ನಾಯಕನಾಗಲು ಹಾರ್ದಿಕ್ ಅರ್ಹ

ಐರ್ಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡದ ನಾಯಕನಾಗಲು ಹಾರ್ದಿಕ್ ಪಾಆಂಡ್ಯ ಅರ್ಹವಾಗಿದ್ದಾರೆ ಎಂದು ವಾಸಿಂ ಜಾಫರ್ ಹೇಳಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಜಾಫರ್ ರೋಹಿತ್ ಶರ್ಮಾ ಅಲಭ್ಯವಾಗಿದ್ದ ಸಂದರ್ಭದಲ್ಲಿ ಭಾರತ ವೈಟ್‌ಬಾಲ್ ತಂಡದ ನಾಯಕನಾಗಲು ಹಾರ್ದಿಕ್ ಪಾಂಡ್ಯ ಅವರನ್ನು ಮೊದಲ ಆಯ್ಕೆಯಾಗಿ ಪರಿಗಣಿಸಲಿ ಎಂದಿದ್ದಾರೆ ಜಾಫರ್. ಆಯ್ಕೆಗಾರರು ಹಾರ್ದಿಕ್ ಪಾಮಡ್ಯ ಅವರನ್ನು ನಾಯಕತ್ವದ ಸ್ಥಾನಕ್ಕೆ ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರೋಹಿತ್ ಶರ್ಮಾಗೆ ಉಪ ನಾಯಕನಾಗಲಿ

ರೋಹಿತ್ ಶರ್ಮಾಗೆ ಉಪ ನಾಯಕನಾಗಲಿ

ಈ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಬಗ್ಗೆ ವಾಸಿಂ ಜಾಫರ್ ವಿಶೇಷ ಮಾತುಗಳನ್ನಾಡಿದ್ದಾರೆ. ನಾಯಕತ್ವವನ್ನು ಹಾರ್ದಿಕ್ ಪಾಂಡ್ಯ ಯಶಸ್ವಿಯಾಗಿ ಮುನ್ನಡೆಸುವ ಅರ್ಹತೆಯನ್ನು ಹೊಂದಿದ್ದಾರೆ. ಅವರನ್ನು ರೋಹಿತ್ ಶರ್ಮಾ ನಾಯಕತ್ವದಲ್ಲಿ ಉಪನಾಯಕನನ್ನಾಗಿ ಆಯ್ಕೆ ಮಾಡಬೇಕಿದೆ ಎಂದಿದ್ದಾರೆ ವಾಸಿಂ ಜಾಫರ್. ಐಪಿಎಲ್‌ನಲ್ಲಿ ತಂಡವನ್ನು ಮುನ್ನಡೆಸುವುದರ ಜೊತೆಗೆ ವೈಯಕ್ತಿಕವಾಗಿಯೂ ಹಾರ್ದಿಕ್ ಪಾಂಡ್ಯ ಅವರ ಪ್ರದರ್ಶನ ಉತ್ತಮವಾಗಿತ್ತು ಎಂಬುದನ್ನು ಜಾಫರ್ ಉಲ್ಲೇಖಿಸಿದ್ದಾರೆ.

ರೋಹಿತ್ ಶರ್ಮಾ ಬಳಿಕ ಹಾರ್ದಿಕ್ ನಾಯಕನಾಗಲಿ

ರೋಹಿತ್ ಶರ್ಮಾ ಬಳಿಕ ಹಾರ್ದಿಕ್ ನಾಯಕನಾಗಲಿ

ಮುಂದುವರಿದು ಮಾತನಾಡಿದ ವಾಸಿಂ ಜಾಫರ್ 28ರ ಹರೆಯದ ಹಾರ್ದಿಕ್ ಪಾಂಡ್ಯ ತಮ್ಮ ಅತ್ಯುತ್ತಮ ಪ್ರದರ್ಶನವನ್ನು ನೀಡುವುದಲ್ಲದೆ ಇತರರಿಂದಲೂ ಅಂಥಾದ್ದೇ ಪ್ರದರ್ಶನ ತೆಗೆಯಬಲ್ಲ ಸಾಮರ್ಥ್ಯವನ್ನು ಹೊಂದಿದ್ದಾರೆ. ಹಾಗಾಗಿ ರೋಹಿತ್ ಶರ್ಮಾ ಬಳಿಕ ವೈಟ್‌ಬಾಲ್ ತಂಡದ ನಾಯಕತ್ವಕ್ಕೆ ಅವರು ಪ್ರಮುಖ ಅಭ್ಯರ್ಥಿ ಎಂದಿದ್ದಾರೆ. ನನ್ನ ಪ್ರಕಾರ ರೋಹಿತ್ ಶರ್ಮಾ ಬಳಿಕ ತಂಡದ ನಾಯಕತ್ವ ವಹಿಸಿಕೊಳ್ಳಲು ಅರ್ಹ ಆಟಗಾರ ಎಂದರೆ ಹಾರ್ದಿಕ್ ಪಾಂಡ್ಯ ಎಂದಿದ್ದಾರೆ ಭಾರತದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್.

ಐರ್ಲೆಂಡ್ ಪ್ರವಾಸಕ್ಕೆ ಭಾರತ ತಂಡ

ಐರ್ಲೆಂಡ್ ಪ್ರವಾಸಕ್ಕೆ ಭಾರತ ತಂಡ

ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್ (ಉಪ ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್.

Story first published: Thursday, June 16, 2022, 15:43 [IST]
Other articles published on Jun 16, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X