ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ರೈನಾ ಅಲ್ಲ ತಾವು ಕೈಬಿಟ್ಟ ಈ ಆಟಗಾರನ ಮೇಲೆ ಮೆಗಾ ಆಕ್ಷನ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕಣ್ಣು!

We look forward to getting Faf Du Plessis back says CSK CEO Kasi Vishwanathan

ಈ ಬಾರಿ ನಡೆದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಫೈನಲ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ಸೋಲುಣಿಸುವುದರ ಮೂಲಕ ನಾಲ್ಕನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ಈ ಮೂಲಕ ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬೀಳುವ ಮೂಲಕ ಕಳಪೆ ಪ್ರದರ್ಶನ ನೀಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಯಶಸ್ವಿಯಾಗಿ ಗೆಲುವಿನ ಹಾದಿಗೆ ಮರಳಿತು.

ಜಡೇಜಾ ಸೇರಿ ಮೂವರು ಪ್ರಮುಖರು ನ್ಯೂಜಿಲೆಂಡ್‌ ವಿರುದ್ಧದ 2ನೇ ಟೆಸ್ಟ್‌ನಿಂದ ಹೊರಕ್ಕೆ!ಜಡೇಜಾ ಸೇರಿ ಮೂವರು ಪ್ರಮುಖರು ನ್ಯೂಜಿಲೆಂಡ್‌ ವಿರುದ್ಧದ 2ನೇ ಟೆಸ್ಟ್‌ನಿಂದ ಹೊರಕ್ಕೆ!

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹಲವಾರು ಕ್ರಿಕೆಟಿಗರು ಕೆಲ ವರ್ಷಗಳಿಂದ ಬೇರೆ ತಂಡಕ್ಕೆ ಹೋಗದೇ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿಯೇ ಆಡುತ್ತಾ ಬಂದಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಕೂಡ ತಮ್ಮ ತಂಡದ ಕೆಲ ಆಟಗಾರರನ್ನು ಪ್ರತಿ ಬಾರಿಯೂ ರಿಟೈನ್ ಮಾಡಿಕೊಳ್ಳುವುದರ ಮೂಲಕ ತಂಡದಲ್ಲಿಯೇ ಉಳಿಸಿಕೊಳ್ಳುವ ಪ್ರಯತ್ನವನ್ನು ಮಾಡುತ್ತಾ ಬಂದಿದೆ. ಆದರೆ ಈ ವರ್ಷ ನಡೆದ ಆಟಗಾರರ ರಿಟೆನ್ಷನ್ ಪ್ರಕ್ರಿಯೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ 4 ಆಟಗಾರರನ್ನು ಮಾತ್ರ ರಿಟೈನ್ ಮಾಡಿಕೊಂಡಿದ್ದು ತಮ್ಮ ತಂಡವನ್ನು ಹಲವಾರು ವರ್ಷಗಳಿಂದ ಪ್ರತಿನಿಧಿಸುತ್ತಾ ಬಂದಿರುವ ಪ್ರಮುಖ ಆಟಗಾರರನ್ನೇ ಕೈಬಿಟ್ಟಿದೆ.

ಮುಂಬೈ ಟೆಸ್ಟ್: ಶತಕ ಸಿಡಿಸಿ ತಂಡ ರಕ್ಷಿಸಿದ ಮಯಾಂಕ್; ಮೊದಲ ದಿನದಾಟದಂತ್ಯಕ್ಕೆ ಭಾರತ 4ಕ್ಕೆ 221ಮುಂಬೈ ಟೆಸ್ಟ್: ಶತಕ ಸಿಡಿಸಿ ತಂಡ ರಕ್ಷಿಸಿದ ಮಯಾಂಕ್; ಮೊದಲ ದಿನದಾಟದಂತ್ಯಕ್ಕೆ ಭಾರತ 4ಕ್ಕೆ 221

ಹೌದು, ಮುಂದಿನ ವರ್ಷ ನಡೆಯಲಿರುವ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನೂತನ ತಂಡಗಳಾದ ಲಖನೌ ಮತ್ತು ಅಹ್ಮದಾಬಾದ್ ಕೂಡ ಭಾಗವಹಿಸುವುದರಿಂದ ಒಟ್ಟು 10 ತಂಡಗಳ ನಡುವೆ ಟ್ರೋಫಿಗಾಗಿ ಹಣಾಹಣಿ ನಡೆಯಲಿದೆ. ಹೀಗಾಗಿ ಮುಂದಿನ ಐಪಿಎಲ್ ಆವೃತ್ತಿ ಆರಂಭಕ್ಕೂ ಮುನ್ನ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಜರುಗಲಿದ್ದು ಇದಕ್ಕೂ ಮುನ್ನ ಬಿಸಿಸಿಐ ಸದ್ಯ ಅಸ್ತಿತ್ವದಲ್ಲಿರುವ ತಂಡಗಳಿಗೆ 4 ಆಟಗಾರರನ್ನು ರಿಟೇನ್ ಮಾಡಿಕೊಳ್ಳುವ ಅವಕಾಶವನ್ನು ನೀಡಿತ್ತು. ಈ ನಿಯಮದಂತೆ ಚೆನ್ನೈ ಸೂಪರ್ ಕಿಂಗ್ಸ್ ರವೀಂದ್ರ ಜಡೇಜಾ, ಎಂಎಸ್ ಧೋನಿ, ಮೊಯಿನ್ ಅಲಿ ಮತ್ತು ರುತುರಾಜ್ ಗಾಯಕ್ವಾಡ್ ಈ 4 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಆದರೆ ತಂಡಕ್ಕೆ ಹಲವಾರು ಆವೃತ್ತಿಗಳಲ್ಲಿ ಆಸರೆಯಾಗಿದ್ದ ಪ್ರಮುಖ ಆಟಗಾರ ಫಾಫ್ ಡು ಪ್ಲೆಸಿಸ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ರಿಟೈನ್ ಮಾಡಿಕೊಳ್ಳದೇ ಇರುವುದು ಸದ್ಯ ಸಾಕಷ್ಟು ದೊಡ್ಡ ಮಟ್ಟದ ಚರ್ಚೆಗಳಿಗೆ ಕಾರಣವಾಗಿದೆ. ಈ ಕುರಿತಾಗಿ ವಿಶೇಷವಾಗಿ ಮಾತನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಒ ಕಾಶಿ ವಿಶ್ವನಾಥನ್ ಫಾಫ್ ಡು ಪ್ಲೆಸಿಸ್ ಕುರಿತು ಈ ಕೆಳಕಂಡಂತೆ ಹೇಳಿಕೆ ನೀಡಿದ್ದಾರೆ.

ಫಾಫ್ ಡು ಪ್ಲೆಸಿಸ್ ಮೇಲೆ ಮೆಗಾ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕಣ್ಣು

ಫಾಫ್ ಡು ಪ್ಲೆಸಿಸ್ ಮೇಲೆ ಮೆಗಾ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕಣ್ಣು

"ನಾವು ಮತ್ತೆ ಆತನನ್ನು ತಂಡಕ್ಕೆ ಕರೆತರುವ ಪ್ರಯತ್ನ ಮಾಡುತ್ತೇವೆ. ನಿಜ ಹೇಳಬೇಕೆಂದರೆ 2 ಐಪಿಎಲ್ ಆವೃತ್ತಿಗಳಲ್ಲಿ ಫಾಫ್ ಡು ಪ್ಲೆಸಿಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಫೈನಲ್ ಹಂತಕ್ಕೆ ಕರೆತರುವಂತಹ ಪ್ರದರ್ಶನ ನೀಡಿದ್ದರು. ಹೀಗಾಗಿ ಮೆಗಾ ಹರಾಜಿನಲ್ಲಿ ಫಾಫ್ ಡು ಪ್ಲೆಸಿಸ್ ಅವರನ್ನು ಖರೀದಿಸುವುದು ನಮ್ಮ ಕರ್ತವ್ಯವಾಗಿರುತ್ತದೆ. ಆದರೆ ಅದು ನಮ್ಮ ಕೈನಲ್ಲಿಲ್ಲ, ಅವರು ಎಲ್ಲೇ ಇದ್ದರೂ ಅವರಿಗೆ ಶುಭಾಶಯ ಕೋರಲು ಇಚ್ಛಿಸುತ್ತೇನೆ" ಎಂದು ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಶಿ ವಿಶ್ವನಾಥನ್ ಹೇಳಿದ್ದಾರೆ.

ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಅಬ್ಬರಿಸಿದ್ದ ಫಾಫ್ ಡು ಪ್ಲೆಸಿಸ್

ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಅಬ್ಬರಿಸಿದ್ದ ಫಾಫ್ ಡು ಪ್ಲೆಸಿಸ್

ಇನ್ನು ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಫೈನಲ್ ತಲುಪಿ ಯಶಸ್ವಿಯಾಗಿ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳುವಲ್ಲಿ ಫಾಫ್ ಡು ಪ್ಲೆಸಿಸ್ ಅವರ ಕೊಡುಗೆಯೂ ಕೂಡ ಇದೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಒಟ್ಟು 16 ಪಂದ್ಯಗಳನ್ನಾಡಿದ ಫಾಫ್ ಡು ಪ್ಲೆಸಿಸ್ 633 ರನ್ ಬಾರಿಸಿದ್ದಾರೆ. ಈ ಮೂಲಕ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಫಾಫ್ ಡು ಪ್ಲೆಸಿಸ್ ದ್ವಿತೀಯ ಸ್ಥಾನದಲ್ಲಿದ್ದಾರೆ.

ಫಾಫ್ ಡು ಪ್ಲೆಸಿಸ್ ಅವರನ್ನು ಮತ್ತೆ ಚೆನ್ನೈ ತಂಡಕ್ಕೆ ಸೇರಿಸಿಕೊಳ್ಳುವುದು ಸುಲಭದ ಮಾತಲ್ಲ

ಫಾಫ್ ಡು ಪ್ಲೆಸಿಸ್ ಅವರನ್ನು ಮತ್ತೆ ಚೆನ್ನೈ ತಂಡಕ್ಕೆ ಸೇರಿಸಿಕೊಳ್ಳುವುದು ಸುಲಭದ ಮಾತಲ್ಲ

ತಂಡದಿಂದ ಕೈಬಿಟ್ಟಿರುವ ಫಾಫ್ ಡು ಪ್ಲೆಸಿಸ್ ಅವರನ್ನು ಮತ್ತೆ ತಂಡಕ್ಕೆ ಸೇರಿಸಿಕೊಳ್ಳುವ ಆಲೋಚನೆಯಲ್ಲಿದೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಅಂದುಕೊಂಡಷ್ಟು ಸುಲಭದ ಕೆಲಸ ಇದಲ್ಲ. ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಗಿಂತ ಹೆಚ್ಚಿನ ಹಣ ನೂತನವಾಗಿ ಸೇರ್ಪಡೆಯಾಗುತ್ತಿರುವ ಲಖನೌ ಮತ್ತು ಅಹಮದಾಬಾದ್ ಬಳಿ ಇದೆ. ಹೀಗಾಗಿ ಮೆಗಾ ಹರಾಜಿನಲ್ಲಿ ನೂತನ ಫ್ರಾಂಚೈಸಿಗಳ ಮಟ್ಟಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಹರಾಜು ಕೂಗುವುದು ಸುಲಭದ ಮಾತಲ್ಲ.

ಹಜಾಜ್ ಪಟೇಲ್ ಕನಸು ನನಸಾದ ದಿನ | Oneindia Kannada

Story first published: Saturday, December 4, 2021, 15:27 [IST]
Other articles published on Dec 4, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X