For Quick Alerts
ALLOW NOTIFICATIONS  
For Daily Alerts
 

ಭಾರತ ವಿರುದ್ಧದ ಟೆಸ್ಟ್‌ ಸರಣಿಗೆ ವೆಸ್ಟ್‌ ಇಂಡೀಸ್ ತಂಡ ಪ್ರಕಟ

ಸದ್ಯ ಭಾರತ ಯುಎಇನಲ್ಲಿ ಏಷ್ಯಾ ಕಪ್‌ ಟಿ20 ಪಂದ್ಯಗಳನ್ನು ಆಡುತ್ತಿದೆ. ಈ ಟೂರ್ನಿ ಮುಗಿದ ಬಳಿಕ ತವರಿನಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ಎರಡು ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡಲಿದೆ. ಈ ಸರಣಿಗೆ ಇನ್ನು ಟೀಮ್ ಇಂಡಿಯಾವನ್ನು ಪ್ರಕಟಿಸಬೇಕಿದೆ. ಆದರೆ ಈಗಾಗಲೇ ಈ ಸರಣಿಗೆ ವೆಸ್ಟ್‌ ಇಂಡೀಸ್ ತಂಡವನ್ನು ಪ್ರಕಟಿಸಲಾಗಿದೆ. ಭಾರತದಲ್ಲಿ ನಡೆಯಲಿರುವ ಸರಣಿಗೆ ವೆಸ್ಟ್‌ ಇಂಡೀಸ್ ತಂಡವನ್ನು ರೋಸ್ಟನ್‌ ಚೇಸ್‌ ಮುನ್ನಡೆಸಲಿದ್ದಾರೆ. ಇನ್ನು ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ಭಾರತದ ಪಿಚ್‌ಗಳ ಮರ್ಮ ಅರಿತುಕೊಂಡು ವೆಸ್ಟ್‌ ಇಂಡೀಸ್ ತಂಡವನ್ನು ಪ್ರಕಟಿಸಿದೆ.

ಭಾರತ ಹಾಗೂ ವೆಸ್ಟ್‌ ಇಂಡೀಸ್‌ ನಡುವಣ ಮೊದಲ ಟೆಸ್ಟ್‌ ಪಂದ್ಯ ಅಹಮದಾಬಾದ್‌ನಲ್ಲಿ ಅಕ್ಟೋಬರ್‌ 2 ರಿಂದ ಆರಂಭವಾಗಲಿದೆ. ಅಕ್ಟೋಬರ್‌ 10 ರಿಂದ ದೆಹಲಿಯ ಅರುಣ್‌ ಜೇಟ್ಲಿ ಮೈದಾನದಲ್ಲಿ ಎರಡನೇ ಟೆಸ್ಟ್‌ ಪಂದ್ಯ ಆರಂಭವಾಗಲಿದೆ. ಈ ಸರಣಿಗೆ ವೆಸ್ಟ್‌ ಇಂಡೀಸ್‌ 15 ಆಟಗಾರರ ತಂಡವನ್ನು ಪ್ರಕಟಿಸಿದೆ. 7 ವರ್ಷಗಳ ಬಳಿಕ ವೆಸ್ಟ್‌ ಇಂಡೀಸ್‌ ಭಾರತ ಪ್ರವಾಸವನ್ನು ಬೆಳೆಸಲಿದೆ.

West Indies Announce Squad for India Test Series Roston Chase to Lead

ಪ್ರಸಕ್ತ ವಿಶ್ವ ಟೆಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ವೆಸ್ಟ್‌ ಇಂಡೀಸ್ ಆಡಿದ ಮೂರು ಪಂದ್ಯಗಳಲ್ಲಿ ಮೂರರಲ್ಲೂ ಸೋಲು ಕಂಡಿದೆ. ಇನ್ನು ಭಾರತ ಆಡಿದ 5 ಪಂದ್ಯಗಳಲ್ಲಿ 2 ಸೋಲು ಕಂಡಿದ್ದು, 2 ಜಯ ಸಾಧಿಸಿದೆ. ಅಲ್ಲದೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಪ್ರಸಕ್ತ ವಿಶ್ವ ಟೆಸ್ಟ್‌ ಚಾಂಪಿಯನ್ ಶಿಪ್‌ ಸೈಕಲ್‌ನಲ್ಲಿ ಉಭಯ ದೇಶಗಳು ಎರಡನೇ ಸರಣಿ ಆಡಲಿವೆ.

ಬದಲಾವಣೆಯ ಗಾಳಿ

ಭಾರತ ವಿರುದ್ಧ ಟೆಸ್ಟ್ ಸರಣಿಗೆ ವೆಸ್ಟ್‌ ಇಂಡೀಸ್ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ಶಿವನಾರಾಯಣ್ ಚಂದ್ರಪಾಲ್ ಅವರ ಪುತ್ರ ತೆಗ್ನನಾರಾಯಣ್ ಚಂದ್ರಪಾಲ್, ಅಲಿಕ್ ಅಥಾನಾಜೆ ಹಾಗೂ ಸ್ಪಿನ್ನರ್ ಖಾರಿ ಪಿಯರೆ ಅವರಿಗೂ ತಂಡದಲ್ಲಿ ಸ್ಥಾನ ನೀಡಲಾಗಿದೆ. ಭಾರತದಲ್ಲಿನ ನಿಧಾನಗತಿಯ ಪಿಚ್‌ಗಳನ್ನು ಗಮನದಲ್ಲಿಟ್ಟುಕೊಂಡು ತಂಡವನ್ನು ಕಟ್ಟಲಾಗಿದೆ. ವೆಸ್ಟ್ ಇಂಡೀಸ್ ತಂಡ ಸೆಪ್ಟೆಂಬರ್ 24 ರಂದು ಅಹಮದಾಬಾದ್ ತಲುಪಲಿದೆ ಎಂದು ತಿಳಿದುಬಂದಿದೆ.

West Indies Announce Squad for India Test Series Roston Chase to Lead

ವೆಸ್ಟ್ ಇಂಡೀಸ್ ತಂಡ: ರೋಸ್ಟನ್ ಚೇಸ್ (ನಾಯಕ), ಜೊಮ್ಮೆಲ್ ವಾರಿಕನ್ (ಉಪನಾಯಕ), ಕೆವಲನ್ ಆಂಡರ್ಸನ್, ಅಲಿಕ್ ಅಥನಾಜೆ, ಜಾನ್ ಕ್ಯಾಂಪ್ಬೆಲ್, ಟೆಗ್ನನಾರಾಯಣ್ ಚಂದ್ರಪಾಲ್, ಜಸ್ಟಿನ್ ಗ್ರೀವ್ಸ್, ಶೈ ಹೋಪ್, ಟೆವಿನ್ ಇಮ್ಲಾಚ್, ಅಲ್ಜಾರಿ ಜೋಸೆಫ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಆಂಡರ್ಸನ್ ಫಿಲಿಪ್, ಖಾರಿ ಪಿಯರೆ, ಜೇಡೆನ್ ಸೀಲ್ಸ್.

Story first published: Wednesday, September 17, 2025, 9:34 [IST]
Other articles published on Sep 17, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+