ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟೆಸ್ಟ್ ಸರಣಿ ಮುಗಿದಿದೆ. ಈ ಸರಣಿಯಲ್ಲಿ ವೆಸ್ಟ್ ಇಂಡೀಸ್, ಪ್ರವಾಸಿ ತಂಡದ ವಿರುದ್ಧ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಆತಿಥೇಯ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಅನುಭವಿ ಆಟಗಾರರಿಗೆ ಸ್ಥಾನ ಪಡೆಯುವವಲ್ಲಿ ವಿಫಲರಾಗಿದ್ದಾರೆ.
ವೆಸ್ಟ್ ಇಂಡೀಸ್ ತಂಡದ ಅನುಭವಿ ಆಟಗಾರರು ವಿದೇಶಿ ಲೀಗ್‌ಗಳಲ್ಲಿ ಅಮೋಘ ಪ್ರದರ್ಶನ ನೀಡಿ ತಂಡಕ್ಕೆ ನೆರವಾಗುತ್ತಿದ್ದಾರೆ. ಆದರೆ ಟಿ20 ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಅನುಭವಿಗಳು ವಿಫಲರಾಗಿದ್ದಾರೆ. ವಿಂಡೀಸ್ ತಂಡದಲ್ಲಿ ಆಲ್‌ರೌಂಡರ್‌ಗಳಾದ ಆಂಡ್ರೆ ರಸೆಲ್ ಮತ್ತು ಜೇಸನ್ ಹೋಲ್ಡರ್ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ.

ಈ ಇಬ್ಬರೂ ಆಟಗಾರರು ಈಗಾಗಲೇ ವೆಸ್ಟ್ ಇಂಡೀಸ್ ಕ್ರಿಕೆಟ್ ಸಂಸ್ಥೆಯಲ್ಲಿ ವಿಶ್ರಾಂತಿಗೆ ಬೇಡಿಕೆ ಇಟ್ಟಿದ್ದರು. ಅದರಂತೆ ವಿಂಡೀಸ್ ಮಂಡಳಿ ಇವರಿಗೆ ವಿಶ್ರಾಂತಿ ನೀಡಿದೆ. ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ನಡುವಣ ಟಿ20 ಸರಣಿ ಆಗಸ್ಟ್ 23 ರಿಂದ 27 ರವರೆಗೆ ನಡೆಯಲಿದೆ. ಸರಣಿಯ ಎಲ್ಲಾ ಪಂದ್ಯಗಳು ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ ಸ್ಟೇಡಿಯಂನಲ್ಲಿ ನಡೆಯಲಿವೆ.
ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಯಿಂದ ಆಂಡ್ರೆ ರಸೆಲ್ ಹಾಗೂ ಹೋಲ್ಡರ್ ಅವರನ್ನು ಏಕೆ ಕೈ ಬಿಟ್ಟಿದ್ದು ಎಂಬ ಪ್ರಶ್ನೆಗಳು ಉದ್ಭವಿಸಿದೆ. ಅಸಲಿಗೆ ಆಂಡ್ರೆ ರಸೆಲ್ ವಿಶ್ರಾಂತಿ ಮತ್ತು ಚೇತರಿಸಿಕೊಳ್ಳಲು ಸಮಯ ಕೇಳಿದ್ದಾರೆ ಮತ್ತು ಜೇಸನ್ ಹೋಲ್ಡರ್ ವಿಶ್ರಾಂತಿ ಮತ್ತು ಚೇತರಿಸಿಕೊಳ್ಳಲು ಸಮಯ ಕೇಳಿದ್ದಾರೆ. ಅಲ್ಲದೆ ಈ ಇಬ್ಬರೂ ಆಟಗಾರರು ಸತತ ಐದು ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಈ ಸಮಯದಲ್ಲಿ ವೆಸ್ಟ್ ಇಂಡೀಸ್ ವೈದ್ಯಕೀಯ ತಂಡ ಆಟಗಾರರೊಂದಿಗೆ ನಿಕಟ ಸಂಪರ್ಕದಲ್ಲಿದೆ.
ವೆಸ್ಟ್ ಇಂಡೀಸ್ ತಂಡ ಮುಂದಿನ ಬಾರಿ ನಡೆಯಲಿರುವ ವಿಶ್ವಕಪ್‌ನ್ನು ಗಮನದಲ್ಲಿಟ್ಟುಕೊಂಡು ಹಲವು ಬದಲಾವಣೆಗಳನ್ನು ಮಾಡಿದೆ. ಮುಂದಿನ ಬಾರಿಯ ಟಿ20 ವಿಶ್ವಕಪ್ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸಲು ಪ್ಲ್ಯಾನ್ ಮಾಡಿದೆ.

ರೋವ್ಮನ್ ಪೊವೆಲ್ (ನಾಯಕ), ರೋಸ್ಟನ್ ಚೇಸ್ (ಉಪನಾಯಕ), ಅಲೆಕ್ ಅಥನಾಜೆ, ಜಾನ್ಸನ್ ಚಾರ್ಲ್ಸ್, ಮ್ಯಾಥ್ಯೂ ಫೋರ್ಡ್, ಶಿಮ್ರಾನ್ ಹೆಟ್ಮೆಯರ್, ಫ್ಯಾಬಿಯನ್ ಅಲೆನ್, ಶಾಯ್ ಹೋಪ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಓಬೆಡ್ ಮೆಕಾಯ್, ಗುಡಕೇಶ್ ಮೋತಿ, ನಿಕೋಲಸ್ ಪೂರನ್, ಶೆರ್ಫಾನ್ ರುಥರ್ ರೊಮಾರಿಯೋ ಶೆಫರ್ಡ್,
23 ಆಗಸ್ಟ್ - 1 ನೇ T20 ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ, ಟ್ರಿನಿಡಾಡ್
25 ಆಗಸ್ಟ್ - 2 ನೇ T20 ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ, ಟ್ರಿನಿಡಾಡ್
27 ಆಗಸ್ಟ್ - 3ನೇ T20 ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ, ಟ್ರಿನಿಡಾಡ್