ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್‌ನಿಂದ ಹೊರಬಿದ್ದ ವೆಸ್ಟ್ ಇಂಡೀಸ್: ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ ಫಿಲ್ ಸೈಮನ್ಸ್

West Indies early exit in T20 World Cup: Phil Simmons to step down as West Indies head coach

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ತಂಡ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಎರಡು ಬಾರಿಯ ಚಾಂಪಿಒಯನ್ ಎನಿಸಿಕೊಂಡಿರುವ ವಿಂಡೀಸ್ ತಂಡ ಅರ್ಹತಾ ಸುತ್ತಿನಲ್ಲೇ ಸೋತು ನಿರ್ಗಮಿಸಿದೆ. ಈ ಮುಖಭಂಗದ ನಂತರ ವೆಸ್ಟ್ ಇಂಡೀಸ್ ತಂಡದ ಕೋಚ್ ಫಿಲ್ ಸೈಮನ್ಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಕ್ರಿಕೆಟ್ ವೆಸ್ಟ್ ಇಂಡೀಸ್ ಅಧಿಕೃತ ಘೋಷಣೆ ಮಾಡಿದ್ದು ಡಿಸೆಂಬರ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಫಿಲ್ ಸೈಮನ್ಸ್ ಅವರ ಕೋಚ್ ಹುದ್ದೆಯ ಅಂತಿಮ ಜವಾಬ್ಧಾರಿಯಾಗಿರಲಿದೆ.

ಟಿ20 ವಿಶ್ವಕಪ್‌ನ ಮೊದಲ ಸುತ್ತಿನಲ್ಲೇ ವೆಸ್ಟ್ ಇಂಡೀಸ್ ನಿರ್ಗಮಿಸಿ ಅಭಿಮಾನಿಗಳಿಗೆ ಆಘಾತ ನೀಡಿತ್ತು. ಬಿ ಗುಂಪಿನಲ್ಲಿ ವೆಸ್ಟ್ ಇಂಡೀಸ್ ಅಂತಿಮ ಸ್ಥಾನ ಪಡೆದು ಟೂರ್ನಿಯಿಂದ ನಿರ್ಗಮಿಸಿದ್ದು ಕೇವಲ ಒಂದು ಗೆಲುವು ಮತ್ತು ಎರಡು ಸೋಲುಗಳನ್ನು ಅನುಭವಿಸಿದೆ. ಮೊದಲ ಮತ್ತು ದ್ವಿತೀಯ ಸ್ಥಾನ ಪಡೆದ ತಂಡಗಳು ಟೂರ್ನಿಯ ಸೂಪರ್ 12 ಹಂತಕ್ಕೆ ಮುನ್ನಡೆದವು.

"ಇದು ಕೇವಲ ಆಟಗಾರರಿಗೆ ಮಾತ್ರವೇ ನೋವುಂಟು ಮಾಡಿಲ್ಲ, ಬದಲಾಗಿ ನಾವು ಪ್ರತಿನಿಧಿಸುವ ರಾಷ್ಟ್ರಗಳಿಗೂ ಆಘಾತ ನೀಡಿದೆ ಎಂದು ಒಪ್ಪಿಕೊಳ್ಳುತ್ತೇನೆ. ಇದು ಅತ್ಯಂತ ಬೇಸರದ ಹಾಗೂ ಕಠಿಣವಾದ ಹಿನ್ನಡೆಯಾಗಿದ್ದು ಇದರಿಂದ ವಾಪಾಸಾಗಲು ಸಮಗೆ ಸಾಧ್ಯವಾಗಲಿಲ್ಲ. ನಮ್ಮ ಸಾಮರ್ಥ್ಯ ಸಾಕಾಗಲಿಲ್ಲ. ಹೀಗಾಗಿ ಈಗ ನಾವು ಟೂರ್ನಯಲ್ಲಿ ಭಾಗವಹಿಸದೆಯೇ ಟೂರ್ನಿಯನ್ನು ನೋಡಬೇಕಿದೆ. ಇದನ್ನು ಅರಗಿಸಿಕೊಳ್ಳಲಲು ಸಾಧ್ಯವಾಗುತ್ತಿಲ್ಲ. ನಮ್ಮ ಅಭಿಮಾನಿ ಹಾಗೂ ಬೆಂಬಲಿಗರಲ್ಲಿ ಅಂತರಾಳದಿಂದ ಕ್ಷಮೆಯಾಚನೆ ಮಾಡುತ್ತಿದ್ದೇನೆ" ಎಂದು ಫಿಲ್ ಸೈಮನ್ ಅವರ ಪ್ರತಿಕ್ರಿಯೆಯನ್ನು ವೆಸ್ಟ್ ಇಂಡೀಸ್ ಕ್ರಿಕೆಟ್ ಪ್ರಕಟಿಸಿದೆ.

ಸೈಮನ್ಸ್ ಈ ಹಿಂದೆ 2016ರಲ್ಲಿ ವಿಶ್ವಕಪ್ ಗೆದ್ದ ವೆಸ್ಟ್ ಇಂಡೀಸ್ ತಂಡದ ಕೋಚ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಈವರ್ಷ ವೆಸ್ಟ್ ಇಂಡೀಸ್ ಇಂಗ್ಲೆಂಡ್ ವಿರುದ್ಧ 1-0 ಅಂತರದಿಂದ ಟೆಸ್ಟ್ ಸರಣಿಯನ್ನು ಗೆದ್ದು ರಿಚರ್ಡ್ಸ್-ಬೋಥಮ್ ಟ್ರೋಫಿಯನ್ನು ಎತ್ತಿ ಹಿಡಿದಾಗಲೂ ಕೋಚ್ ಆಗಿ ತಂಡಕ್ಕೆ ಮಾರ್ಗದರ್ಶನ ನೀಡಿದ್ದಾರೆ.

ಸೂಪರ್ 12 ಹಂತಕ್ಕೂ ಮುನ್ನ ಅರ್ತಾ ಸುತ್ತಿನಲ್ಲಿ ವೆಸ್ಟ್ ಇಂಡೀಸ್ ಈ ಬಾರಿ ಆಡುವ ಅನಿವಾರ್ಯತೆಗೆ ಸಿಲುಕಿತ್ತು. ಆಸ್ಟ್ರೇಲಿಯಾದ ಹೋಬಾರ್ಟ್‌ನ ಬೆಲ್ಲೆರಿವ್ ಓವಲ್ ಮೈದಾನದಲ್ಲಿ ನಡೆದ ಐರ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಐರ್ಲೆಂಡ್ ತಂಡವ ವಿಂಡೀಸ್ ಪಡೆಗೆ 9 ವಿಕೆಟ್‌ಗಳ ಸೋಲುಣಿಸಲು ಯಶಸ್ವಿಯಾಗಿತ್ತು. ಈ ಮೂಲಕ ಐರ್ಲೆಂಡ್ ಸೂಪರ್ 12 ಹಂತವನ್ನು ತಲುಪಿದರೆ ಎರಡು ಬಾರಿಯ ವಿಶ್ವಕಪ್ ಚಾಂಪಿಯನ್ ವೆಸ್ಟ್ ಇಂಡೀಸ್ ವಿಶ್ವಕಪ್‌ನಿಂದ ಹೊರಬೀಳುವ ಮೂಲಕ ಆಘಾತಕ್ಕೆ ಒಳಗಾಯಿತು.

ಈ ಪಂದ್ಯದಲ್ಲಿ ಸಾಧಾರಣ ಬ್ಯಾಟಿಂಗ್ ಪ್ರದರ್ಶಿಸಿದ ವೆಸ್ಟ್ ಇಂಡೀಸ್ ಉತ್ತಮ ಆರಂಭ ಪಡೆಯುವಲ್ಲಿ ವಿಫಲಗೊಂಡಿದ್ದಲ್ಲದೆ ಆಮೆಗತಿಯಲ್ಲಿ ಬ್ಯಾಟಿಂಗ್ ಮಾಡಿದ್ದು ತಂಡದ ಸೋಲಿಗೆ ಕಾರಣವಾಗಿತ್ತು. ವೆಸ್ಟ್ ಇಂಡೀಸ್ ನೀಡಿದ್ದ 147 ರನ್‌ಗಳ ಗುರಿಯನ್ನ ಐರ್ಲೆಂಡ್ ಬೆನ್ನತ್ತುವಲ್ಲಿ ಯಶಸ್ವಿಯಾಗಿದ್ದಲ್ಲದೆ, ಪಾಲ್ ಸ್ಟಿರ್ಲಿಂಗ್ ಅಜೇಯ ಆಟಕ್ಕೆ ವೀಂಡೀಸ್ ಕನಸು ಛಿದ್ರವಾಯಿತು.

ವೆಸ್ಟ್‌ ಇಂಡೀಸ್ 2014 ಮತ್ತು 2016ರಲ್ಲಿ ಎರಡು ಬಾರಿ ಟಿ20 ವಿಶ್ವಕಪ್‌ ಗೆದ್ದಿದ್ದು ಈ ಸಾಧನೆ ಮಾಡಿರುವ ಏಕೈಕ ತಂಡ ಎನಿಸಿಕೊಂಡಿದೆ ಆದರೆ ಈ ಬಾರಿ ಅರ್ಹತಾ ಸುತ್ತಿನಿಮದಲೆ ಹೊರಬಿದ್ದಿರುವುದು ತಂಡಕ್ಕೆ ಮಾತ್ರವಲ್ಲದೆ ಅಭಿಮಾನಿಗಳಿಗೂ ದೊಡ್ಡ ಆಘಾತವನ್ನುಂಟು ಮಾಡಿದೆ.

Story first published: Tuesday, October 25, 2022, 8:50 [IST]
Other articles published on Oct 25, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X