ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವೆಸ್ಟ್‌ ಇಂಡೀಸ್ ಕ್ರಿಕೆಟಿಗರಿಗೆ ಪಂದ್ಯದ ಶೇಕಡಾ 80ರಷ್ಟು ದಂಡ

IND vs WI ODI : West Indies players face huge fine after 1st ODI | INDIA | WI | ONEINDIA KANNADA
West Indies players fined 80% of their match fee for slow over rate in Chennai

ಮೊದಲ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್ ಟೀಮ್ ಇಂಡಿಯಾವನ್ನು ಭರ್ಜರಿಯಾಗಿ ಸೋಲಿಸಿ ಸರಣಿಯಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಆದರೆ ಈ ಮಧ್ಯೆ ವಿಂಡೀಸ್ ಆಟಗಾರರಿಗೆ ಆಘಾತವೊಂದು ಕಾದಿದೆ. ಪಂದ್ಯದಲ್ಲಿ ನಿಧಾನಗತಿಯಲ್ಲಿ ಬೌಲಿಂಗ್ ಮಾಡಿದ ಕಾರಣಕ್ಕೆ ವೆಸ್ಟ್‌ ಇಂಡೀಸ್ ದಂಡ ತೆರಬೇಕಾಗಿದೆ.

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಬಾನುವಾರ ಮೊದಲ ಏಕದಿನ ಪಂದ್ಯ ನಡೆಯಿತು. ಪಂದ್ಯದಲ್ಲಿ ಟಾಸ್‌ಗೆದ್ದ ವೆಸ್ಟ್ ಇಂಡೀಸ್ ಮೊದಲು ಬೌಲಿಂಗ್ ಆಯ್ದುಕೊಂಡಿತು. ಆದರೆ ಈ ಸಂದರ್ಭದಲ್ಲಿ ನಿಗದಿತ ಸಮಯಕ್ಕಿಂತ ನಿಧಾನವಾಗಿ ಬೌಲಿಂಗ್ ಮಾಡಿದ ಕಾರಣ ಶೇಕಡಾ 80ರಷ್ಟು ದಂಡವನ್ನು ವಿಧಿಸಲಾಗಿದೆ.

ಐಸಿಸಿ ನೀತಿ ಸಂಹಿತೆ 2.22ನೇ ವಿಧಿಯನ್ವಯ ಪಂದ್ಯದ ಎಲ್ಲಾ ಆಟಗಾರರು ಮತ್ತು ಸಿಬ್ಬಂದಿಗಳಿಗೆ ಒಂದು ಓವರ್‌ನಷ್ಟು ನಿಧಾನಗತಿಯಲ್ಲಿ ಬೌಲಿಂಗ್ ಮಾಡಿದರೆ ಶೇಕಡಾ 20 ರಷ್ಟು ದಂಡವನ್ನು ವಿಧಿಸಲಾಗುತ್ತದೆ. ಆದರೆ ನಿನ್ನೆಯ ಪಂದ್ಯದಲ್ಲಿ ವಿಂಡೀಸ್ ನಾಲ್ಕು ಓವರ್‌ನಷ್ಟು ನಿಧಾನವಾಗಿ ಬೌಲಿಂಗ್ ಮಾಡಿದ ಕಾರಣ ಪ್ರತಿ ಆಟಗಾರರು ಕೂಡ ಪಂದ್ಯದ ಸಂಭಾವನೆಯ 80% ದಂಡಕ್ಕೆ ಗುರಿಯಾಗಿದ್ದಾರೆ.

ಪಂದ್ಯದ ಬಳಿಕ ಈ ವಿಚಾರವಾಗಿ ವಿಂಡೀಸ್ ನಾಯಕ ಕಿರಾನ್ ಪೊಲಾರ್ಡ್ ತಪ್ಪೊಪ್ಪಿಕೊಂಡಿದ್ದಾರೆ. ಹೀಗಾಗಿ ವಿಚಾರಣೆಯ ಅಗತ್ಯವಿರುವುದಿಲ್ಲ. ಆನ್ ಫೀಲ್ಟ್ ಅಂಫೈರ್‌ಗಳಾದ ನಿತಿನ್ ಮೆನನ್ ಮತ್ತು ಶಾನ್ ಜಾರ್ಜ್ ಮೂರನೇ ಅಂಪೈರ್, ನಾಲ್ಕನೇ ಅಂಫೈರ್ ಅನಿಲ್ ಚೌಧರಿ ಈ ಆರೋಪವನ್ನು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮ್ಯಾಚ್ ರೆಫ್ರಿ ಡೇವಿಡ್ ಬೂನ್ ಈ ತೀರ್ಮಾನಕ್ಕೆ ಬಂದಿದ್ದಾರೆ.

Story first published: Monday, December 16, 2019, 20:01 [IST]
Other articles published on Dec 16, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X