ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಬಲಿಷ್ಠ ವೆಸ್ಟ್ ಇಂಡೀಸ್ ತಂಡ ಘೋಷಣೆ

West Indies squad announced for 3 match ODI series against New zealand

ನ್ಯೂಜಿಲೆಂಡ್ ವಿರುದ್ಧದ ವೈಟ್‌ಬಾಲ್ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡ ತವರಿನಲ್ಲಿ ಆಡುತ್ತಿದ್ದು ಪ್ರಸ್ತಿತ ಟಿ20 ಸರಣಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಗೆ ವೆಸ್ಟ್ ಇಂಡಿಸ್ ತಂಡವನ್ನು ಘೋಷಣೆ ಮಾಡಿಲಾಗಿದೆ. ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಕ್ರೀಡಾಂಗಣದಲ್ಲಿ ಏಕದಿನ ಸರಣಿಯ ಮೂರು ಪಂದ್ಯಗಳು ಕೂಡ ನಡೆಯಲಿದ್ದು ನಿಕೋಲಸ್ ಪೂರನ್ ತಂಡವನ್ನು ಮುನ್ನಡೆಸಲಿದ್ದಾರೆ.

14 ಸದಸ್ಯರ ತಂಡವನ್ನು ವೆಸ್ಟ್ ಇಂಡೀಸ್ ಘೋಷಣೆ ಮಾಡಿದೆ. ಇನ್ನು ಈ ಸರಣಿಯಲ್ಲಿ ಸ್ಪಿನ್ನರ್ ಆಲ್‌ರೌಂಡರ್ ಕೆವಿನ್ ಸಿಕ್ಲೇರ್ ಆಡುವ ಅವಕಾಶ ಪಡೆದುಕೊಂಡಿದ್ದಾರೆ. ಕಳೆದ ವರ್ಷ ಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆದ ಸರಣಿಯಲ್ಲಿ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಬಳಿಕ ಮತ್ತೆ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಸಿಂಕ್ಲೇರ್ ಪಂದ್ಯಗಳಲ್ಲಿ 4 ವಿಕೆಟ್ ಸಂಪಾದಿಸಿದ್ದು 8.33ರ ಎಕಾನಮಿಯಲ್ಲಿ ಬೌಲಿಂಗ್ ನಡೆಸಿದ್ದಾರೆ. ಲಿಸ್ಟ್ ಎ ನಲ್ಲಿ ನೀಡಿರುವ ಭರವಸೆಯ ಪ್ರದರ್ಶನದಿಂದಾಗಿ ಮತ್ತೆ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ ಸಿಂಕ್ಲೇರ್.

ಏಕದಿನ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತೀರಾ? ಎಂಬ ಪ್ರಶ್ನೆಗೆ ಬಾಬರ್ ಅಜಮ್ ಉತ್ತರಏಕದಿನ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತೀರಾ? ಎಂಬ ಪ್ರಶ್ನೆಗೆ ಬಾಬರ್ ಅಜಮ್ ಉತ್ತರ

ಮೂರು ಪಂದ್ಯಗಳ ಏಕದಿನ ಸರಣಿ

ಮೂರು ಪಂದ್ಯಗಳ ಏಕದಿನ ಸರಣಿ

ವೆಸ್ಟ್ ಇಂಡಿಸ್ ಹಾಗೂ ನ್ಯೂಜಿಲೆಂಡ್ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಲಿದೆ. ಟಿ20 ಸರಣಿಯ ಮುಕ್ತಾಐದ ಬಳಿಕ ಏಕದಿನ ಸರಣಿ ಆರಂಭವಾಗಲಿದ್ದು ಆಗಸ್ಟ್ 17, 19 ಹಾಗೂ 21ರಂದು ಏಕದಿನ ಸರಣಿಯ ಪಂದ್ಯಗಳು ನಡೆಯಲಿದೆ. ಈ ಸರಿಯ ಮೂರು ಪಂದ್ಯಗಳು ಕೂಡ ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿರುವ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯಲಿದೆ. ಭಾರತದ ವಿರುದ್ಧದ ಸರಣಿಯಲ್ಲಿ ಗಾಯಗೊಂಡಿರುವ ಗುಡಕೇಶ್ ಮೋಟೀ ಕೂಡ ಈ ಸ್ಕ್ವಾಡ್‌ನಲ್ಲಿ ಸ್ಥಾನವನ್ನು ಪಡೆದುಕೊಮಿದ್ದು ಫಿಟ್‌ನೆಸ್ ಪರೀಕ್ಷೆಯಲ್ಲಿ ಸಮರ್ಥರೆನಿಸಿದರೆ ಈ ಸರಣಿಯಲ್ಲಿ ಆಡಲಿದ್ದಾರೆ.

ಏಕದಿನ ವಿಶ್ವಕಪ್‌ಗೆ ವಿಂಡೀಸ್ ಸಿದ್ಧತೆ

ಏಕದಿನ ವಿಶ್ವಕಪ್‌ಗೆ ವಿಂಡೀಸ್ ಸಿದ್ಧತೆ

ಇನ್ನು ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಅನ್ನು ದೃಷ್ಟಿಯಲ್ಲಿಟ್ಟುಕೊಂಡು ವೆಸ್ಟ್ ಇಂಡೀಸ್ ತಂಡವನ್ನು ಸಿದ್ಧಪಡಿಸುತ್ತಿದೆ. ಈ ಬಗ್ಗೆ ವಿಂಡೀಸ್ ಕ್ರಿಕೆಟ್‌ನ ಆಯ್ಕೆ ಸಮಿತಿಯ ಮುಖ್ಯಸ್ಥ ಡೆಸ್ಮಾಂಡ್ ಹೇಯ್ನೆಸ್ ಪ್ರತಿಕ್ರಿಯಿಸಿದ್ದಾರೆ. "ನ್ಯೂಜಿಲೆಂಡ್ ಉತ್ತಮವಾದ ಕ್ರಿಕೆಟ್ ಆಡುವ ರಾಷ್ಟ್ರವಾಗಿದೆ. ಹಾಗಾಗಿ ಇದು ಅತ್ಯಂತ ಸವಾಲಿನ ಸರಣಿಯಾಗಿದೆ. ನಾಬು ಆಯ್ಕೆ ಮಾಡಿರುವ ಆಟಗಾರರು ಉತ್ತಮ ಪ್ರದರ್ಶನ ನೀಡುವ ವಿಶ್ವಾಸವನ್ನು ಹೊಂದಿದ್ದೇವೆ. ಈ ಋತುವಿನಲ್ಲಿ ತವರಿನಲ್ಲಿ ನಡೆಯಲಿರುವ ಕೊನೆಯ ಸರಣಿ ಇದಾಗಿದ್ದು ಉತ್ತಮ ಪ್ರದರ್ಶನದೊಂದಿಗೆ ಈ ಋತು ಅಂತ್ಯವಾದರೆ ಮುಂದಿನ ವರ್ಷದ ವಿಶ್ವಕಪ್‌ಗೆ ಉತ್ತಮ ತಂಡವನ್ನು ಸಿದ್ಧಪಡಿಸಲು ಸಹಾಯವಾಗಲಿದೆ" ಎಂದಿದ್ದಾರೆ.

ಮೊದಲ ಟಿ20 ಪಂದ್ಯದಲ್ಲಿ ಸೋಲು

ಮೊದಲ ಟಿ20 ಪಂದ್ಯದಲ್ಲಿ ಸೋಲು

ವೆಸ್ಟ್ ಇಂಡೀಸ್ ಸದ್ಯ ಕಿವೀಸ್ ತಂಡದ ವಿರುದ್ಧ ಟಿ20 ಸರಣಿಯಲ್ಲಿ ಆಡುತ್ತಿದೆ. ಈ ಸರಣಿಯ ಮೊದಲ ಪಂದ್ಯ ಈಗಾಗಲೇ ಮುಕ್ತಾಯವಾಗಿದ್ದು ಸೋಲು ಅನುಭವಿಸಿ ಸರಣಿಯಲ್ಲಿ ಹಿನ್ನಡೆಯಲ್ಲಿದೆ. ್ರವಾಸಿ ನ್ಯೂಜಿಲೆಂಡ್ ತಂಡ ನೀಡಿದ್ದ 186 ರನ್‌ಗಳ ಗುರಿಯನ್ನು ಬೆನ್ನಟ್ಟಲು ವಿಫಲವಾದ ವೆಸ್ಟ್ ಇಂಡೀಸ್ 13 ರನ್‌ಗಳ ಅಂತರದಿಂದ ಸೋಲು ಅನುಭವಿಸಿತು. ಇನ್ನು ಇದಕ್ಕೂ ಹಿಂದೆ ಭಾರತದ ವಿರುದ್ಧ ತವರಿನಲ್ಲಿಯೇ ಆಡಿದ್ದ ಏಕದಿನ ಹಾಗೂ ಟಿ20 ಸರಣಿಯಲ್ಲಿಯೂ ವೆಸ್ಟ್ ಇಂಡೀಸ್ ಹೀನಾಯವಾಗಿ ಸೋಲು ಅನುಭವಿಸಿತು. ಭಾರತದ ವಿರುದ್ಧ ಒಟ್ಟು 8 ಪಂದ್ಯಗಳ ವೈಟ್‌ಬಾಲ್ ಸರಣಿಯನ್ನು ಆಡಿದ್ದು ಇದರಲ್ಲಿ ವೆಸ್ಟ್ ಇಂಡೀಸ್ ಗೆದ್ದಿರುವುದು ಕೇವಲ 2 ಪಂದ್ಯ ಮಾತ್ರ.

Dinesh Karthik ಬಗ್ಗೆ Jadeja ಹೀಗೆ ಹೇಳಿದ್ದೇಕೆ | *Cricket | OneIndia Kannada
ವೆಸ್ಟ್ ಇಂಡೀಸ್ ಸ್ಕ್ವಾಡ್ ಹೀಗಿದೆ

ವೆಸ್ಟ್ ಇಂಡೀಸ್ ಸ್ಕ್ವಾಡ್ ಹೀಗಿದೆ

ನಿಕೋಲಸ್ ಪೂರನ್ (ನಾಯಕ), ಶಾಯ್ ಹೋಪ್ (ವಿಕೆಟ್ ಕೀಪರ್), ಶಮರ್ ಬ್ರೂಕ್ಸ್, ಕೀಸಿ ಕಾರ್ಟಿ, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಗುಡಾಕೇಶ್ ಮೋಟಿ, ಕೀಮೋ ಪಾಲ್, ಜೇಡನ್ ಸೀಲ್ಸ್, ಕೆವಿನ್ ಸಿಂಕ್ಲೇರ್.

Story first published: Friday, August 12, 2022, 12:18 [IST]
Other articles published on Aug 12, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X