T20 World Cup 2024: ಟಿ20 ವಿಶ್ವಕಪ್‌ಗೂ ಮುನ್ನ ವೆಸ್ಟ್ ಇಂಡೀಸ್ ತಂಡಕ್ಕೆ ಭಾರೀ ಹಿನ್ನಡೆ!
ಮೇ 27 ಭಾನುವಾರ, ವೆಸ್ಟ್ ಇಂಡೀಸ್ ಮತ್ತು ಅಮೆರಿಕಾ ದೇಶಗಳಲ್ಲಿ ಜೂನ್ 1 ರಿಂದ 29 ರವರೆಗೆ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ. ಈ ಮೆಗಾ ಟೂರ್ನಿ ಆರಂಭಕ್ಕೂ ಮುನ್ನ ಬಲಿಷ್ಠ ವೆಸ್ಟ್ ಇಂಡೀಸ್ ಹಿನ್ನೆಡೆ ಅನುಭವಿಸಿದೆ.
ವಿಶ್ವದಲ್ಲೇ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ನಡೆಸುತ್ತಿರುವ ಟಿ20 ವಿಶ್ವಕಪ್‌ಗೆ ಅಳೆದು ತೂಗಿ ವೆಸ್ಟ್ ಇಂಡೀಸ್ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿತ್ತು. ತಂಡದಲ್ಲಿ ಅನುಭವಿ ಆಟಗಾರರೊಂದಿಗೆ ಯುವ ಪ್ರತಿಭೆಗಳಿಗೂ ಸ್ಥಾನ ನೀಡಲಾಗಿತ್ತು.

ಆದರೆ ಇದೀಗಾ ವೆಸ್ಟ್ ಇಂಡೀಸ್ ಸ್ಟಾರ್ ಆಲೌರೌಂಡರ್ ಜೇಸನ್ ಹೋಲ್ಡರ್ ಗಾಯದ ಸಮಸ್ಯೆಯಿಂದಾಗಿ ಪ್ರತಿಷ್ಠಿತ ಟಿ20 ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ. ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ವೋರ್ಸೆಸ್ಟರ್‌ಶೈರ್ ಪರ ಆಡುವಾಗ ಹೋಲ್ಡರ್ ಗಾಯಗೊಂಡಿದ್ದಾರೆ.
ಈ ತಿಂಗಳ ಆರಂಭದಲ್ಲಿ ಹೋಲ್ಡರ್ ತಮ್ಮ ಕೊನೆಯ ಪಂದ್ಯದಲ್ಲಿ ಶತಕ ಹೊಡೆದಿದ್ದರು. ಹೀಗಾಗಿ ಟಿ20 ವಿಶ್ವಕಪ್‌ಗೂ ಮುನ್ನ ಉತ್ತಮ ಫಾರ್ಮ್ನನಲ್ಲಿದ್ದ ಹೋಲ್ಡರ್ ಗಾಯಕ್ಕೆ ತುತ್ತಾಗಿದ್ದಾರೆ.
ಇದರ ಬೆನ್ನಲ್ಲೆ ಭಾನುವಾರ ವೆಸ್ಟ್ ಇಂಡೀಸ್ ಕ್ರಿಕೆಟ್ ಬೋರ್ಡ್, ಜೇಸನ್ ಹೋಲ್ಡರ್ ಬದಲಿಗೆ ಎಡಗೈ ವೇಗ ಬೌಲರ್ ಓಬೆಡ್ ಮೆಕಾಯ್ ಅವರಿಗೆ ತಂಡದಲ್ಲಿ ಅವಕಾಶ ನೀಡಿದೆ. ಜೊತೆಗೆ ಹೋಲ್ಡರ್ ಗಾಯದ ಬಗ್ಗೆ ಯಾವುದೇ ಮಾಹಿತಿ ನೀಡದೆ, ಆಟಗಾರನಿಗೆ ಗಾಯದಿಂದ ಚೇತರಿಸಿಕೊಳ್ಳಲು ಸಮಯ ಬೇಕಾಗುತ್ತದೆ ಎಂದು ಹೇಳಿದೆ.
ಈ ಬಗ್ಗೆ ಮಾಹಿತಿ ನೀಡಿರುವ ವೆಸ್ಟ್ ಇಂಡೀದ್ ಮುಖ್ಯ ಆಯ್ಕೆಗಾರ ಮತ್ತು ಮಾಜಿ ಆಟಗಾರ ಡೆಸ್ಮಂಡ್ ಹೇನ್ಸ್ ಅವರು, 'ಜೇಸನ್ ನಮ್ಮ ತಂಡದಲ್ಲಿ ಅನುಭವಿ ಆಟಗಾರ. ಅವರ ಅನುಪಸ್ಥಿತಿಯು ತಂಡಕ್ಕೆ ನಿಸ್ಸಂದೇಹವಾಗಿ ಮೈದಾನದ ಒಳಗೆ ಮತ್ತು ಹೊರಗೆ ಹಿನ್ನೆಡೆ ತಂದುಕೊಡಲಿದೆ.
ಜೇಸನ್ ಶೀಘ್ರದಲ್ಲೇ ಸಂಪೂರ್ಣ ಫಿಟ್ ಆಗುತ್ತಾರೆ ಎಂದು ನಾವು ಭಾವಿಸುತ್ತೇವೆ. ಬದಲಿ ಆಟಗಾರ ಒಬೆಡ್ ಮೆಕಾಯ್ ಅವರ ಸಾಮರ್ಥ್ಯದ ಮೇಲೆ ವಿಶ್ವಾಸವಿದೆ. ಒಬೆಡ್ ಅವರು ಮೂಲಕ ಅಂತರರಾಷ್ಟ್ರೀಯ ವೇದಿಕೆಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಸಿಕ್ಕಿದೆ ಎಂದು ಹೇಳಿದ್ದಾರೆ.
ಇದರೊಂದಿಗೆ ವೆಸ್ಟ್ ಇಂಡೀಸ್ ಕ್ರಿಕೆಟ್ ಜೂನ್ 2 ರಿಂದ ಪ್ರಾರಂಭವಾಗುವ ಟಿ20 ವಿಶ್ವಕಪ್ ಪಂದ್ಯಾವಳಿಗೆ 5 ಮೀಸಲು ಆಟಗಾರರನ್ನು ಹೆಸರಿಸಿದೆ. ಕೈಲ್ ಮೇಯರ್ಸ್, ಫ್ಯಾಬಿಯನ್ ಅಲೆನ್, ಮ್ಯಾಥ್ಯೂ ಫೋರ್ಡ್, ಆಂಡ್ರೆ ಫ್ಲೆಚರ್ ಮತ್ತು ಹೇಡನ್ ವಾಲ್ಷ್ ಮೀಸಲು ಆಟಗಾರರಾಗಿದ್ದಾರೆ.
ವೆಸ್ಟ್ ಇಂಡೀಸ್ ತಂಡ: ರೋವ್ಮನ್ ಪೊವೆಲ್ (ನಾಯಕ), ಅಲ್ಜಾರಿ ಜೋಸೆಫ್ (ಉಪನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಶಾಯ್ ಹೋಪ್ (ವಿಕೆಟ್ ಕೀಪರ್), ಅಕೇಲ್ ಹೊಸೈನ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಓಬೆಡ್ ಮೆಕಾಯ್, ಗುಡಕೇಶ್ ಮೋತಿ, ಆಂಡ್ರೆ ರಸೆಲ್ , ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಶೆರ್ಫೇನ್ ರುದರ್‌ಫೋರ್ಡ್, ರೊಮಾರಿಯೋ ಶೆಫರ್ಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications