ಬಾಂಗ್ಲಾದೇಶ vs ವೆಸ್ಟ್ ಇಂಡೀಸ್ ಟೆಸ್ಟ್ ಸರಣಿ ಮೊದಲ ಪಂದ್ಯ: ಟಾಸ್ ವರದಿ , ಪ್ಲೇಯಿಂಗ್ XI

ಬಾಂಗ್ಲಾದೇಶ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿಗೆ ಚಾಲನೆ ದೊರೆತಿದ್ದು ಮೊದಲ ಟೆಸ್ಟ್ ಪಂದ್ಯ ಆಂಟಿಗುವಾದಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪ್ರವಾಸಿ ಬಾಂಗ್ಲಾದೇಶ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಕ್ರೇಗ್ ಬ್ರೇತ್‌ವೇಟ್ ನಾಯಕತ್ವದ ವೆಸ್ಟ್ ಇಂಡೀಸ್ ತಂಡ ಸಾಕಷ್ಟು ಸಮತೋಲಿತವಾಗಿದ್ದು ತವರಿನಲ್ಲಿ ಅಬ್ಬರಿಸುವ ಲಕ್ಷಣ ತೋರಿಸಿದೆ. ಇನ್ನು ಬಾಂಗ್ಲಾದೇಶ ತಂಡ ಸಂಫೂರ್ಣ ಸಾಮರ್ಥ್ಯಗೊಂದಿಗೆ ಕಣಕ್ಕಿಳಿದಿದ್ದು ಕದನ ಕುತೂಹಲ ಮೂಡಿಸಿದೆ.
ಬಾಂಗ್ಲಾದೇಶ ಈ ಸರಣಿಯಲ್ಲಿ ಮೂರು ಮಾದರಿಯಲ್ಲಿಯೂ ಆತಿಥೇಯ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆದ ಬಳಿಕ ವೈಟ್‌ಬಾಲ್ ಸರಣಿ ನಡೆಯಲಿದೆ. ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದ್ದು ಮೊದಲ ಎರಡು ಪಂದ್ಯಗಳು ಡಾಮಿನಿಕಾದಲ್ಲಿ ನಡೆಯಲಿದೆ. ಅಂತಿಮ ಟಿ20 ಪಂದ್ಯ ಗಯಾನದಲ್ಲಿ ನಡೆಯಲಿದ್ದು ಅದಾದ ಬಳಿಕ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿ ಕೂಡ ಗಯಾನದಲ್ಲಿ ನಡೆಯಲಿದೆ.
Live ಸ್ಕೋರ್ ಹೀಗಿದೆ
ಆಡುವ ಬಳಗ:
ವೆಸ್ಟ್ ಇಂಡೀಸ್: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಜಾನ್ ಕ್ಯಾಂಪ್‌ಬೆಲ್, ಎನ್ಕ್ರುಮಾ ಬೊನ್ನರ್, ರೇಮನ್ ರೀಫರ್, ಜೆರ್ಮೈನ್ ಬ್ಲಾಕ್‌ವುಡ್, ಕೈಲ್ ಮೇಯರ್ಸ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಗುಡಕೇಶ್ ಮೋಟಿ, ಜೇಡನ್ ಸೀಲ್ಸ್
ಬೆಂಚ್: ಆಂಡರ್ಸನ್ ಫಿಲಿಪ್, ಡೆವೊನ್ ಥಾಮಸ್
ಬಾಂಗ್ಲಾದೇಶ: ತಮೀಮ್ ಇಕ್ಬಾಲ್, ಮಹ್ಮುದುಲ್ ಹಸನ್ ಜಾಯ್, ನಜ್ಮುಲ್ ಹೊಸೈನ್ ಶಾಂಟೋ, ಮೊಮಿನುಲ್ ಹಕ್, ಶಾಕಿಬ್ ಅಲ್ ಹಸನ್ (ನಾಯಕ), ಲಿಟ್ಟನ್ ದಾಸ್, ನೂರುಲ್ ಹಸನ್ (ವಿಕೆಟ್ ಕೀಪರ್), ಮೆಹದಿ ಹಸನ್, ಎಬಾಡೋತ್ ಹೊಸೈನ್, ಖಲೀದ್ ಅಹ್ಮದ್, ಮುಸ್ತಫಿಜುರ್ ರೆಹಮಾನ್
ಬೆಂಚ್: ಮೊಸದ್ದೆಕ್ ಹೊಸೈನ್, ತೈಜುಲ್ ಇಸ್ಲಾಂ, ರೆಜೌರ್ ರೆಹಮಾನ್ ರಾಜ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications