Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವೆಸ್ಟ್ ಇಂಡೀಸ್ vs ಇಂಗ್ಲೆಂಡ್ ಬಾರ್ಬಡೋಸ್ ಟೆಸ್ಟ್, ಟಾಸ್ ರಿಪೋರ್ಟ್, Live ಸ್ಕೋರ್ ಹಾಗೂ ಪ್ಲೇಯಿಂಗ್ XI

West Indies vs England, 2nd Test, 1st day, Live score and Playing XI, Barbados

ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ತಂಡಗಳು ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು ಬಾರ್ಬಡೋಸ್‌ನ ಕೆನ್ಸ್ಟಿಂಗ್ಟನ್ ಓವಲ್‌ನಲ್ಲಿ ಪಂದ್ಯ ಆರಂಭವಾಗಿದೆ. ಈ ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟೆಸ್ಟ್ ಸರಣಿಯ ಮೊದಲ ಪಂದ್ಯ ಡ್ರಾದಲ್ಲಿ ಅಂತ್ಯವಾಗಿತ್ತು.

ಇನ್ನು ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಪರವಾಗಿ ಇಬ್ಬರು ಆಟಗಾರರು ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಮಾಥ್ಯೂ ಫಿಷರ್ ಹಾಗೂ ಸಕೀಬ್ ಮಹಮೂದ್ ಮೊದಲ ಬಾರಿಗೆ ಇಂಗ್ಲೆಂಡ್ ತಂಡದ ಟೆಸ್ಟ್ ಕ್ಯಾಪ್ ತೊಟ್ಟಿದ್ದಾರೆ. ಇತ್ತ ವೆಸ್ಟ್ ಇಂಡೀಸ್ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಬಳಗದೊಂದಿಗೆ ಈ ಪಂದ್ಯದಲ್ಲಿಯೂ ಆಡಲಿಳಿದಿದೆ.

Live ಸ್ಕೋರ್ ಪಟ್ಟಿ

1
50929

ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ತಂಡಗಳು ಟೆಸ್ಟ್ ಸರಣಿಗೂ ಮುನ್ನ ಟಿ20 ಸರಣಿಯಲ್ಲಿ ಮುಖಾಮುಖಿಯಾಗಿದ್ದವು. ಈ ಟಿ20 ಸರಣಿಯಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ಇಂಗ್ಲೆಂಡ್ ವಿರುದ್ಧ 3-1 ಅಂತರದಿಮದ ಸರಣಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಇದೀಗ ಟೆಸ್ಟ್ ಸರಣಿಯಲ್ಲಿಯೂ ಇಂಗ್ಲೆಂಡ್ ವಿರುದ್ಧ ನೇಲುಗೈ ಸಾಧಿಸುವ ಉತ್ಸಾಹದಲ್ಲಿದೆ ವಿಂಡೀಸ್ ಪಡೆ. ಇತ್ತ ಇಂಗ್ಲೆಂಡ್ ಕೂಡ ಹೊಸ ಬಳಗದೊಂದಿಗೆ ಭರ್ಜರಿಯಾಗಿ ಪ್ರತಿರೋಧವೊಡ್ಡಲು ಯಶಸ್ವಿಯಾಗಿದೆ.

ಇಂಗ್ಲೆಂಡ್ ಪ್ಲೇಯಿಂಗ್ XI: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಜೋ ರೂಟ್ (ನಾಯಕ), ಡೇನಿಯಲ್ ಲಾರೆನ್ಸ್, ಬೆನ್ ಸ್ಟೋಕ್ಸ್, ಜಾನಿ ಬೈರ್‌ಸ್ಟೋ, ಬೆನ್ ಫೋಕ್ಸ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಮ್ಯಾಥ್ಯೂ ಫಿಶರ್, ಜ್ಯಾಕ್ ಲೀಚ್, ಸಾಕಿಬ್ ಮಹಮೂದ್
ಬೆಂಚ್: ಆಲಿ ಪೋಪ್, ಆಲಿ ರಾಬಿನ್ಸನ್, ಮ್ಯಾಥ್ಯೂ ಪಾರ್ಕಿನ್ಸನ್, ಮಾರ್ಕ್ ವುಡ್, ಕ್ರೇಗ್ ಓವರ್ಟನ್

ವೆಸ್ಟ್ ಇಂಡೀಸ್ ಪ್ಲೇಯಿಂಗ್ XI: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಜಾನ್ ಕ್ಯಾಂಪ್‌ಬೆಲ್, ಶಮರ್ ಬ್ರೂಕ್ಸ್, ಎನ್ಕ್ರುಮಾ ಬೊನ್ನರ್, ಜರ್ಮೈನ್ ಬ್ಲಾಕ್‌ವುಡ್, ಜೇಸನ್ ಹೋಲ್ಡರ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಕೆಮರ್ ರೋಚ್, ವೀರಸಾಮಿ ಪರ್ಮೌಲ್, ಜೇಡನ್ ಸೀಲ್ಸ್
ಬೆಂಚ್: ಕೈಲ್ ಮೇಯರ್ಸ್, ಆಂಡರ್ಸನ್ ಫಿಲಿಪ್

Story first published: Wednesday, March 16, 2022, 19:55 [IST]
Other articles published on Mar 16, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+