ವಿಂಡೀಸ್ vs ಇಂಗ್ಲೆಂಡ್ 2ನೇ ಟೆಸ್ಟ್: ಕುತೂಹಲ ಮೂಡಿಸಿದ ಅಂತಿಮ ದಿನದಾಟ; Live ಸ್ಕೋರ್

ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಕೂಡ ಈಗ ಬಹುತೇಕ ಡ್ರಾನತ್ತ ಮುಖಮಾಡಿದೆ. ಅಂತಿಮ ದಿನದಾಟ ಆರಂಭವಾಗಿದ್ದು ಇಂಗ್ಲೆಂಡ್ ತಂಡ ಎರಡನೇ ಇನ್ನಿಂಗ್ಸ್‌ನ ಬ್ಯಾಟಿಂಗ್ ಆರಂಭಿಸಿದ್ದು ಇಂಗ್ಲೆಂಡ್ ತಂಡವನ್ನು ವೆಸ್ಟ್ ಇಂಡೀಸ್ ಎರಡನೇ ಇನ್ನಿಂಗ್ಸ್‌ನಲ್ಲಿ ಬೇಗನೆ ಕಟ್ಟಿ ಹಾಲು ಯಶಸ್ವಿಯಾಗಲಿದೆಯಾ ಎಂಬುದು ಕುತೂಹಲ ಮೂಡಿಸಿದೆ. ಈ ಮೂಲಕ ಅನಿರೀಕ್ಷಿತ ಫಲಿತಾಂಶ ಸಾಧ್ಯವಾಗಿಲಿದೆಯಾ ಎಂಬ ಕುತೂಹಲ ಅಭಿಮಾನಿಗಳದ್ದು.
ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಿ ಮೊದಲನೇ ಇನ್ನಿಂಗ್ಸ್‌ನಲ್ಲಿ ನಾಯಕ ಜೋ ರೂಟ್ ಮತ್ತು ಆಲ್ ರೌಂಡರ್ ಆಟಗಾರ ಬೆನ್ ಸ್ಟೋಕ್ಸ್ ಅವರ ಭರ್ಜರಿ ಶತಕಗಳ ನೆರವಿನಿಂದ 9 ವಿಕೆಟ್ ನಷ್ಟಕ್ಕೆ 507 ರನ್ ಕಲೆಹಾಕಿತು. ಇಂಗ್ಲೆಂಡ್ ತಂಡದ ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ಬಳಿಕ ಬ್ಯಾಟಿಂಗ್ ನಡೆಸಿದ ವೆಸ್ಟ್ ಇಂಡೀಸ್ ತಂಡಕ್ಕೆ ಕ್ರೇಗ್ ಬ್ರಾಥ್ ವೈಟ್ ಹಾಗೂ ಬ್ಲ್ಯಾಕ್‌ವುಡ್ ನೆರವಾದರು. ಇಬ್ಬರು ಕೂಡ ಭರ್ಜರಿ ಶತಕ ಸಿಡಿಸಿದ್ದು ಬ್ರಾಥ್‌ವೈಟ್ 160 ರನ್‌ಗಳಿಸಿದ್ದರೆ ಜರ್ಮೈನ್ ಬ್ಲ್ಯಾಕ್ ವುಡ್ 102 ರನ್ ಗಳಿಸಿ ತಂಡಕ್ಕೆ ನೆರವಾದರು. ಈ ಮೂಲಕ ವೆಸ್ಟ್ ಇಂಡೀಸ್ ಕೂಡ ಮೊದಲ ಇನ್ನಿಂಗ್ಸ್‌ನಲ್ಲಿ 411 ರನ್‌ಗಳನ್ನು ಗಳಿಸಲು ಸಾಧ್ಯವಾಯಿತು. ನಂತರ ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್‌ನ ಬ್ಯಾಟಿಂಗ್ ಆರಂಭಿಸಿದೆ.
Live ಸ್ಕೋರ್‌ಕಾರ್ಡ್ ಹೀಗಿದೆ
ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ತಂಡಗಳು ಟೆಸ್ಟ್ ಸರಣಿಗೂ ಮುನ್ನ ಟಿ20 ಸರಣಿಯಲ್ಲಿ ಮುಖಾಮುಖಿಯಾಗಿದ್ದವು. ಈ ಟಿ20 ಸರಣಿಯಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ಇಂಗ್ಲೆಂಡ್ ವಿರುದ್ಧ 3-2 ಅಂತರದಿಂದ ಸರಣಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಇದೀಗ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ಹಾಗೂ ವಿಂಡೀಸ್ ತೀವ್ರ ಪೈಪೋಟಿಯ ಪ್ರದರ್ಶನ ನೀಡುತ್ತಿದೆ.
ಇಂಗ್ಲೆಂಡ್ ಪ್ಲೇಯಿಂಗ್ XI: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಜೋ ರೂಟ್ (ನಾಯಕ), ಡೇನಿಯಲ್ ಲಾರೆನ್ಸ್, ಬೆನ್ ಸ್ಟೋಕ್ಸ್, ಜಾನಿ ಬೈರ್‌ಸ್ಟೋ, ಬೆನ್ ಫೋಕ್ಸ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಮ್ಯಾಥ್ಯೂ ಫಿಶರ್, ಜ್ಯಾಕ್ ಲೀಚ್, ಸಾಕಿಬ್ ಮಹಮೂದ್
ಬೆಂಚ್: ಆಲಿ ಪೋಪ್, ಆಲಿ ರಾಬಿನ್ಸನ್, ಮ್ಯಾಥ್ಯೂ ಪಾರ್ಕಿನ್ಸನ್, ಮಾರ್ಕ್ ವುಡ್, ಕ್ರೇಗ್ ಓವರ್ಟನ್
ವೆಸ್ಟ್ ಇಂಡೀಸ್ ಪ್ಲೇಯಿಂಗ್ XI: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಜಾನ್ ಕ್ಯಾಂಪ್‌ಬೆಲ್, ಶಮರ್ ಬ್ರೂಕ್ಸ್, ಎನ್ಕ್ರುಮಾ ಬೊನ್ನರ್, ಜರ್ಮೈನ್ ಬ್ಲಾಕ್‌ವುಡ್, ಜೇಸನ್ ಹೋಲ್ಡರ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಕೆಮರ್ ರೋಚ್, ವೀರಸಾಮಿ ಪರ್ಮೌಲ್, ಜೇಡನ್ ಸೀಲ್ಸ್
ಬೆಂಚ್: ಕೈಲ್ ಮೇಯರ್ಸ್, ಆಂಡರ್ಸನ್ ಫಿಲಿಪ್

- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications