Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವೆಸ್ಟ್ ಇಂಡೀಸ್ vs ಇಂಗ್ಲೆಂಡ್ ಅಂತಿಮ ಟೆಸ್ಟ್, ಟಾಸ್ ರಿಪೋರ್ಟ್, Live ಸ್ಕೋರ್ ಹಾಗೂ ಪ್ಲೇಯಿಂಗ್ XI

West Indies vs England, 3rd Test, 1st day, Live score and Playing XI, Grenada

ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ತಂಡಗಳು ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು ಗ್ರೆನೆಡಾದ ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ಆರಂಭವಾಗಿದೆ. ಈ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳು ಡ್ರಾದಲ್ಲಿ ಅಂತ್ಯವಾಗಿತ್ತು.

ಈ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳು ಕೂಡ ಡ್ರಾದಲ್ಲಿ ಅಂತ್ಯವಾಗಿದೆ. ಸಾಕಷ್ಟು ಪೈಪೋಟಿಯಿಂದ ಕೂಡಿದ್ದ ಮೊದಲ ಎರಡು ಪಂದ್ಯಗಳಲ್ಲಿಯೂ ಎರಡೂ ತಂಡಗಳು ಅದ್ಭುತ ಹೋರಾಟವನ್ನು ಪ್ರದರ್ಶಿಸಿದೆ. ಅಂತಿಮ ಟೆಸ್ಟ್ ಪಂದ್ಯದಲ್ಲಿಯೂ ಅಂತಾದ್ದೇ ಪ್ರದರ್ಶನದ ನಿರೀಕ್ಷೆಯಿದೆ. ಇನ್ನು ಈ ಪಂದ್ಯಕ್ಕೂ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

Live ಸ್ಕೋರ್‌ಕಾರ್ಡ್ ಹೀಗಿದೆ:

1
50930

ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ತಂಡಗಳು ಟೆಸ್ಟ್ ಸರಣಿಗೂ ಮುನ್ನ ಟಿ20 ಸರಣಿಯಲ್ಲಿ ಮುಖಾಮುಖಿಯಾಗಿದ್ದವು. ಈ ಟಿ20 ಸರಣಿಯಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ಇಂಗ್ಲೆಂಡ್ ವಿರುದ್ಧ 3-1 ಅಂತರದಿಂದ ಸರಣಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಇದೀಗ ಟೆಸ್ಟ್ ಸರಣಿಯಲ್ಲಿಯೂ ಇಂಗ್ಲೆಂಡ್ ವಿರುದ್ಧ ಮೇಲುಗೈ ಸಾಧಿಸುವ ಉತ್ಸಾಹದಲ್ಲಿದ್ದ ವಿಂಡೀಸ್ ಪಡೆಗೆ ಇಂಗ್ಲೆಂಡ್ ತಂಡ ಮೊದಲ ಎರಡು ಪಂದ್ಯಗಳಲ್ಲಿಯೂ ಭರ್ಜರಿ ಪ್ರತಿರೋಧವೊಡ್ಡುವಲ್ಲಿ ಯಶಸ್ವಿಯಾಗಿತ್ತು. ಅಂತಿಮ ಪಂದ್ಯದಲ್ಲಿ ಈ ಎರ್ಡು ತಮಡಗಳಿಂದ ಯಾವ ರೀತಿಯ ಪ್ರದರ್ಶನ ಬರಲಿದೆ ಎಂಬುದು ಕುತೂಹಲ ಮೂಡಿಸಿದೆ.

ಇಂಗ್ಲೆಂಡ್ ಪ್ಲೇಯಿಂಗ್ XI: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಜೋ ರೂಟ್ (ನಾಯಕ), ಡೇನಿಯಲ್ ಲಾರೆನ್ಸ್, ಬೆನ್ ಸ್ಟೋಕ್ಸ್, ಜಾನಿ ಬೈರ್‌ಸ್ಟೋ, ಬೆನ್ ಫೋಕ್ಸ್ (ವಾಕ್), ಕ್ರಿಸ್ ವೋಕ್ಸ್, ಕ್ರೇಗ್ ಓವರ್‌ಟನ್, ಜ್ಯಾಕ್ ಲೀಚ್, ಸಾಕಿಬ್ ಮಹಮೂದ್
ಬೆಂಚ್: ಮ್ಯಾಥ್ಯೂ ಫಿಶರ್, ಆಲಿ ಪೋಪ್, ಆಲಿ ರಾಬಿನ್ಸನ್, ಮ್ಯಾಥ್ಯೂ ಪಾರ್ಕಿನ್ಸನ್

ವೆಸ್ಟ ಇಂಡೀಸ್ ಪ್ಲೇಯಿಂಗ್ XI: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಜಾನ್ ಕ್ಯಾಂಪ್‌ಬೆಲ್, ಶಮರ್ ಬ್ರೂಕ್ಸ್, ಎನ್ಕ್ರುಮಾ ಬೊನ್ನರ್, ಜೆರ್ಮೈನ್ ಬ್ಲಾಕ್‌ವುಡ್, ಜೇಸನ್ ಹೋಲ್ಡರ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಕೈಲ್ ಮೇಯರ್ಸ್, ಕೆಮರ್ ರೋಚ್, ಜೇಡನ್ ಸೀಲ್ಸ್, ಅಲ್ಜಾರಿ ಜೋಸೆಫ್
ಬೆಂಚ್: ಆಂಡರ್ಸನ್ ಫಿಲಿಪ್, ವೀರಸಾಮಿ ಪೆರ್ಮಾಲ್

Story first published: Thursday, March 24, 2022, 19:29 [IST]
Other articles published on Mar 24, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+