ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

West Indies vs England : ವೆಸ್ಟ್ ಇಂಡೀಸ್ vs ಇಂಗ್ಲೆಂಡ್, ಅಂತಿಮ ಟೆಸ್ಟ್, 2ನೇ ದಿನದಾಟ, Live ಸ್ಕೋರ್ ಮಾಹಿತಿ

West Indies vs England, 3rd Test, 2nd day, Live score and Playing XI, Grenada

ಭಾರತದಲ್ಲಿ ಐಪಿಎಲ್ 15ನೇ ಆವೃತ್ತಿಯ ಕಾವು ಹೆಚ್ಚಾಗುತ್ತಿದ್ದರೆ ಇತ್ತ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ತಂಡಗಳು ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಮೊದಲ ಎರಡು ಟೆಸ್ಟ್ ಪಂದ್ಯಗಳು ಡ್ರಾ ಆಗಿರುವ ಕಾರಣ ಈ ಪಂದ್ಯದ ಫಲಿತಾಂಶ ಸಾಕಷ್ಟು ಕುತೂಹಲ ಮೂಡಿಸಿದೆ. ಮೊದಲ ದಿನದಾಟದಲ್ಲಿ ಆತಿಥೇಯ ವಿಂಡೀಸ್ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದದರೂ ಅಂತಿಮ ವಿಕೆಟ್ ಕಬಳಿಸಲು ವಿಮಡಿಸ್ ಬೌಲರ್‌ಗಳು ಸಾಕಷ್ಟು ಪರದಾಡಿದರು.

ಗ್ರೆನೆಡಾದ ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಪಡೆ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಬ್ಯಾಟಿಂಗ್‌ಗೆ ಇಳಿದ ಇಂಗ್ಲೆಂಡ್ ತಂಡ ಆಘಾತದ ಮೇಲೆ ಆಘಾತ ಅನುಭವಿಸತೊಡಗಿತು. ಅಗ್ರ ಕ್ರಮಾಂಕದಿಂದ ಕೆಳ ಕ್ರಮಾಂಕದ ವರೆಗೆ ಯಾವೊಬ್ಬ ಆಟಗಾರ ಕೂಡ ವಿಂಡೀಸ್ ಬೌಲಿಂಗ್ ದಾಳಿಗೆ ಸೂಕ್ತ ಪ್ರತ್ಯುತ್ತರ ನೀಡಲು ಸಫಲವಾಗಲಿಲ್ಲ. ಆದರೆ ಬಾಲಂಗೋಚಿಗಳ ಬ್ಯಾಟಿಂಗ್ ಇಂಗ್ಲೆಂಡ್ ತಂಡದ ಮೊತ್ತವನ್ನು 200ರ ಗಡಿ ದಾಟಿಸಿತು.

ಒಂದು ಹಂತದಲ್ಲಿ ಇಂಗ್ಲೆಂಡ್ ತಂಡ 114 ರನ್‌ಗಳಿಗೆ 9 ವಿಕೆಟ್ ಕಳೆದುಕೊಂಡು ಕನಿಷ್ಟ ಮೊತ್ತಕ್ಕೆ ಆಲೌಟ್ ಆಗುವ ಹಂತವನ್ನು ತಲುಪಿತ್ತು. ಆದರೆ ಕೊನೆಯ ವಿಕೆಟ್‌ಗೆ ಜೊತೆಯಾದ ಜಾಕ್ ಲೀಚ್ ಹಾಗೂ ಸಾಕೀಬ್ ಮಹಮೂದ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಜೋಡಿ ಭರ್ಜರಿ 90 ರನ್‌ಗಳ ಜೊತೆಯಾಟ ನೀಡಿತು. ಈ ಮೂಲಕ 204 ರನ್‌ಗಳನ್ನು ಇಂಗ್ಲೆಂಡ್ ತಂಡ ಗಳಿಸಲು ಸಾಧ್ಯಯಿತು. ಜಾಕ್ ಲೀಚ್ 41 ರನ್‌ಗಳಿಸಿ ಔಟಾಗದೆ ಉಳಿದರೆ ಸಕೀಬ್ ಮಹಮೂದ್ 49 ರನ್‌ಗಳ ಕೊಡುಗೆ ನೀಡಿ ವಿಕೆಟ್ ಕಳೆದುಕೊಂಡರು. ಎರಡನೇ ದಿನ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಆರಂಭಿಸಿದೆ.

Live ಸ್ಕೋರ್‌ಕಾರ್ಡ್ ಹೀಗಿದೆ:

1
50930

ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ತಂಡಗಳು ಟೆಸ್ಟ್ ಸರಣಿಗೂ ಮುನ್ನ ಟಿ20 ಸರಣಿಯಲ್ಲಿ ಮುಖಾಮುಖಿಯಾಗಿದ್ದವು. ಈ ಟಿ20 ಸರಣಿಯಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ಇಂಗ್ಲೆಂಡ್ ವಿರುದ್ಧ 3-1 ಅಂತರದಿಂದ ಸರಣಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಇದೀಗ ಟೆಸ್ಟ್ ಸರಣಿಯಲ್ಲಿಯೂ ಇಂಗ್ಲೆಂಡ್ ವಿರುದ್ಧ ಮೇಲುಗೈ ಸಾಧಿಸುವ ಉತ್ಸಾಹದಲ್ಲಿದ್ದ ವಿಂಡೀಸ್ ಪಡೆಗೆ ಇಂಗ್ಲೆಂಡ್ ತಂಡ ಮೊದಲ ಎರಡು ಪಂದ್ಯಗಳಲ್ಲಿಯೂ ಭರ್ಜರಿ ಪ್ರತಿರೋಧವೊಡ್ಡುವಲ್ಲಿ ಯಶಸ್ವಿಯಾಗಿತ್ತು. ಅಂತಿಮ ಪಂದ್ಯದಲ್ಲಿ ಈ ಎರಡು ತಂಡಗಳಿಂದ ಯಾವ ರೀತಿಯ ಪ್ರದರ್ಶನ ಬರಲಿದೆ ಎಂಬುದು ಕುತೂಹಲ ಮೂಡಿಸಿದೆ.

ಇಂಗ್ಲೆಂಡ್ ಪ್ಲೇಯಿಂಗ್ XI: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಜೋ ರೂಟ್ (ನಾಯಕ), ಡೇನಿಯಲ್ ಲಾರೆನ್ಸ್, ಬೆನ್ ಸ್ಟೋಕ್ಸ್, ಜಾನಿ ಬೈರ್‌ಸ್ಟೋ, ಬೆನ್ ಫೋಕ್ಸ್ (ವಾಕ್), ಕ್ರಿಸ್ ವೋಕ್ಸ್, ಕ್ರೇಗ್ ಓವರ್‌ಟನ್, ಜ್ಯಾಕ್ ಲೀಚ್, ಸಾಕಿಬ್ ಮಹಮೂದ್
ಬೆಂಚ್: ಮ್ಯಾಥ್ಯೂ ಫಿಶರ್, ಆಲಿ ಪೋಪ್, ಆಲಿ ರಾಬಿನ್ಸನ್, ಮ್ಯಾಥ್ಯೂ ಪಾರ್ಕಿನ್ಸನ್

ಅಭ್ಯಾಸ ಪಂದ್ಯದಲ್ಲಿ Virat ಯಾಕೆ ಆಡ್ಲಿಲ್ಲ? ಫಾಫ್- ವಿರಾಟ್ ಮಧ್ಯೆ ಬಿರುಕು? | Oneindia Kannada

ವೆಸ್ಟ ಇಂಡೀಸ್ ಪ್ಲೇಯಿಂಗ್ XI: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಜಾನ್ ಕ್ಯಾಂಪ್‌ಬೆಲ್, ಶಮರ್ ಬ್ರೂಕ್ಸ್, ಎನ್ಕ್ರುಮಾ ಬೊನ್ನರ್, ಜೆರ್ಮೈನ್ ಬ್ಲಾಕ್‌ವುಡ್, ಜೇಸನ್ ಹೋಲ್ಡರ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಕೈಲ್ ಮೇಯರ್ಸ್, ಕೆಮರ್ ರೋಚ್, ಜೇಡನ್ ಸೀಲ್ಸ್, ಅಲ್ಜಾರಿ ಜೋಸೆಫ್
ಬೆಂಚ್: ಆಂಡರ್ಸನ್ ಫಿಲಿಪ್, ವೀರಸಾಮಿ ಪೆರ್ಮಾಲ್

Story first published: Saturday, March 26, 2022, 10:53 [IST]
Other articles published on Mar 26, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X