Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ವೆಸ್ಟ್ ಇಂಡೀಸ್: ಮೊದಲ ಏಕದಿನ ಪಂದ್ಯ; ಹೆಡ್ ಟು ಹೆಡ್ ಮಾಹಿತಿ

ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಏಕದಿನ ಸರಣಿಯಲ್ಲಿ ಮುಖಾಮುಖಿಯಾಗುತ್ತಿದ್ದು ಕುತೂಹಲ ಮೂಡಿಸಿದೆ. ಟೆಸ್ಟ್ ಸರಣಿಯಲ್ಲಿ ಪೈಪೋಟಿ ನಡೆಸಿದ ಬಳಿಕ ಇದೀಗ ಏಕದಿನ ಮಾದರಿಯಲ್ಲಿ ಸೆಳೆಸಾಡಲು ಎರಡು ತಂಡಗಳು ಕೂಡ ಸಜ್ಜಾಗಿದೆ. ಟೀಮ್ ಇಂಡಿಯಾ ರೋಹಿತ್ ಶರ್ಮಾ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿದ್ದರೆ ಶಾಯ್ ಹೋಪ್ ವೆಸ್ಟ್ ಇಂಡೀಸ್ ಪಡೆಯನ್ನು ಮುನ್ನಡೆಸುತ್ತಿದ್ದಾರೆ.

2023ರ ವಿಶ್ವಕಪ್‌ಗೆ ಅರ್ಹತೆ ಪಡೆಯಲು ವಿಫಲವಾದ ನಂತರ ವೆಸ್ಟ್ ಇಂಡೀಸ್ ತಮ್ಮ ಏಕದಿನ ತಂಡವನ್ನು ಮರಳಿ ಕಟ್ಟುವ ಪ್ರಯತ್ನದಲ್ಲಿದೆ. ಶಿಮ್ರಾನ್ ಹೆಟ್ಮೆಯರ್ ಮತ್ತು ಒಶಾನೆ ಥಾಮಸ್ ಅವರನ್ನು ತಂಡಕ್ಕೆ ಮರಳಿ ಸೇರ್ಪಡೆಗೊಳಿದೆ. ಆದರೆ ಕೀಮೋ ಪಾಲ್, ನಿಕೋಲಸ್ ಪೂರನ್ ಮತ್ತು ಜೇಸನ್ ಹೋಲ್ಡರ್ ಈ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿಲ್ಲ.

West Indies vs India 1st ODI: Head to Head Records and stats

ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಏಕದಿನ ಮಾದರಿಯಲ್ಲಿ 139 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿದೆ. ಇದರಲ್ಲಿ ಭಾರತ 70 ಪಂದ್ಯಗಳನ್ನು ಗೆದ್ದಿದ್ದರೆ, ವಿಂಡೀಸ್ 63 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಎರಡು ಪಂದ್ಯಗಳು ಟೈ ಮತ್ತು ನಾಲ್ಕು ಪಂದ್ಯಗಳು ಫಲಿತಾಂಶವಿಲ್ಲದೆ ಅಂತ್ಯಕಂಡಿದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿರುವ ಕೆನ್ಸಿಂಗ್ಟನ್ ಓವಲ್‌ನಲ್ಲಿ ವೇಗಿಗಳು ಹೆಚ್ಚು ಯಶಸ್ಸು ಸಾಧಿಸಿದ್ದಾರೆ. ಇಲ್ಲಿ ಆಡಿದ 45 ಪಂದ್ಯಗಳಲ್ಲಿ ವೇಗಿಗಳು 29.91 ಸರಾಸರಿಯಲ್ಲಿ 424 ವಿಕೆಟ್‌ಗಳನ್ನು ಪಡೆದರೆ, ಸ್ಪಿನ್ ಬೌಲರ್‌ಗಳು 39.62 ಸರಾಸರಿಯಲ್ಲಿ 148 ವಿಕೆಟ್‌ಗಳನ್ನು ಪಡೆದಿದ್ದಾರೆ. ಇನ್ನು ಈ ಮೈದಾನದಲ್ಲಿನ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 230 ಆಗಿದೆ.

ಟೀಮ್ ಇಂಡಿಯಾ ಏಕದಿನ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಶುಬ್ಮನ್ ಗಿಲ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಸೂರ್ಯ ಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್-ಕೀಪರ್), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ (ಉಪ ನಾಯಕ), ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

ವೆಸ್ಟ್ ಇಂಡೀಸ್ ಏಕದಿನ ಸ್ಕ್ವಾಡ್: ಶಾಯ್ ಹೋಪ್ (ನಾಯಕ), ರೋವ್ಮನ್ ಪೊವೆಲ್ (ಉಪನಾಯಕ), ಅಲಿಕ್ ಅಥಾನಾಜೆ, ಯಾನಿಕ್ ಕ್ಯಾರಿಯಾ, ಕೀಸಿ ಕಾರ್ಟಿ, ಡೊಮಿನಿಕ್ ಡ್ರೇಕ್ಸ್, ಶಿಮ್ರಾನ್ ಹೆಟ್ಮೆಯರ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಗುಡಾಕೇಶ್ ಮೋಟಿ, ಜೇಡನ್ ಸೀಲ್ಸ್, ರೊಮಾರಿಯೊ ಶೆಫರ್ಡ್, ಕೆವಿನ್ ಸಿಂಕ್ಲೇರ್, ಓಶೇನ್ ಥಾಮಸ್.

Story first published: Wednesday, July 26, 2023, 23:38 [IST]
Other articles published on Jul 26, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+