Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind vs WI: ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿದ ಮುಕೇಶ್ ಕುಮಾರ್

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಮತ್ತೋರ್ವ ಆಟಗಾರ ಪದಾರ್ಪಣೆ ಮಾಡಿದ್ದಾರೆ. 29ರ ಹರೆಯದ ವೇಗದ ಬೌಲರ್ ಮುಕೇಶ್ ಕುಮಾರ್ ಭಾರತ ತಂಡದ ಪರವಾಗಿ ಮೊದಲ ಬಾರಿಗೆ ಟೆಸ್ಟ್ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಸರಣಿಯ ಮೊದಲ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ಇಶಾನ್ ಕಿಶನ್ ಟೆಸ್ಟ್ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

ವೆಸ್ಟ್ ಇಂಡೀಸ್ ವಿರುದ್ಧ ಈ ಪಂದ್ಯ ಎರಡು ಕಾರಣಗಳಿಗೆ ವಿಶೇಷವೆನಿಸಿದೆ. ಈ ಪಂದ್ಯ ಭಾರತ ಹಾಗೂ ವೆಸ್ಟ್ ಇಮಡೀಸ್ ತಂಡಗಳ ನಡುವಿನ 100ನೇ ಟೆಸ್ಟ್ ಪಂದ್ಯವಾಗಿದ್ದರೆ ಟೀಮ್ ಇಂಡಿಯಾದ ಅನುಭವಿ ಆಟಗಾರ ವಿರಾಟ್ ಕೊಹ್ಲಿಗೆ ಇದು 500ನೇ ಅಂತಾರಾಷ್ಟ್ರೀಯ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಮುಕೇಶ್ ಕುಮಾರ್ ಚೊಚ್ಚಲ ಪಂದ್ಯವನ್ನಾಡುತ್ತಿರುವುದು ಮತ್ತೊಂದು ವಿಶೇಷ.

West Indies vs India, 2nd Test: Mukesh Kumar makes Test debut

ಡೊಮಿನಿಕಾದಲ್ಲಿ ಸರಣಿಯ ಮೊದಲ ಪಂದ್ಯವನ್ನು ಗೆದ್ದ ಭಾರತದ ಆಡಿವ ಬಳಗದಲ್ಲಿ ಕೇವಲ ಒಂದು ಬದಲಾವಣೆ ಮಾಡಿಕೊಂಡಿದ್ದು ಮುಖೇಶ್ ಕುಮಾರ್ ಅವಕಾಶ ದೊರೆತಿದೆ. ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಗಾಯಕ್ಕೆ ತುತ್ತಾಗಿದ್ದು ಈ ಬದಲಾವನೆ ಮಾಡಿಕೊಳ್ಳಲಾಗಿದೆ ಎಂದು ನಾಯಕ ರೋಹಿತ್ ಶರ್ಮಾ ಮಾಹಿತಿ ನೀಡಿದ್ದಾರೆ.

ವೆಸ್ಟ್ ಇಂಡೀಸ್ ಆಡುವ ಬಳಗ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ಕಿರ್ಕ್ ಮೆಕೆಂಜಿ, ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್ ಅಥಾನಾಜೆ, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಜೋಮೆಲ್ ವಾರಿಕನ್, ಶಾನನ್ ಗೇಬ್ರಿಯಲ್
ಬೆಂಚ್: ಕೆವಿನ್ ಸಿಂಕ್ಲೇರ್, ರಹಕೀಮ್ ಕಾರ್ನ್ವಾಲ್

ಟೀಮ್ ಇಂಡಿಯಾ ಆಡುವ ಬಳಗ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್, ಮುಖೇಶ್ ಕುಮಾರ್, ಮೊಹಮ್ಮದ್ ಸಿರಾಜ್
ಬೆಂಚ್: ಋತುರಾಜ್ ಗಾಯಕ್ವಾಡ್, ಶ್ರೀಕರ್ ಭರತ್, ಅಕ್ಸರ್ ಪಟೇಲ್, ನವದೀಪ್ ಸೈನಿ, ಶಾರ್ದೂಲ್ ಠಾಕೂರ್

Story first published: Thursday, July 20, 2023, 19:58 [IST]
Other articles published on Jul 20, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+