For Quick Alerts
ALLOW NOTIFICATIONS  
For Daily Alerts
 

Breaking News: 2ನೇ ಟಿ20 ಪಂದ್ಯ ಎರಡು ಗಂಟೆ ತಡವಾಗಿ ಆರಂಭ: ಕಾರಣ ಏನು ಗೊತ್ತಾ!

West indies vs India: Due to a delay in the arrival of the teams luggage 2nd T20I delay by two hours

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ನಿಗದಿಗಿಂತ ಎರಡು ಗಂಟೆ ತಡವಾಗಿ ಆರಂಭವಾಗಲಿದೆ. ಈ ಬಗ್ಗೆ ಸ್ವತಃ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಅಧಿಕೃತವಾಗಿ ಮಾಹಿತಿ ನೀಡಿದೆ. ಸೈಂಟ್ ಕಿಟ್ಸ್‌ನ ವಾರ್ನರ್ ಪಾರ್ಕ್‌ನಲ್ಲಿ ಈ ಪಂದ್ಯ ಆಯೋಜನೆಯಾಗಲಿದ್ದು ಭಾರತೀಯ ಕಾಲಮಾನ ಸೋಮವಾರ 8 ಗಂಟೆಗೆ ಆರಂಭವಾಗಬೇಕಿದ್ದ ಪಂದ್ಯ ಎರಡು ಗಂಟೆ ತಡವಾಗಿ ಅಂದರೆ ರಾತ್ರಿ 10 ಗಂಟೆಗೆ ಆರಂಭವಾಗಲಿದೆ.

ಇನ್ನು ಈ ವಿಳಂಬಕ್ಕೆ ತಂಡದ ಲಗೇಜ್ ಸೈಂಟ್ ಕಿಟ್ಸ್‌ಗೆ ತಡವಾಗಿ ಆಗಮಿಸುತ್ತಿರುವುದು ಕಾರಣ ಎಂದು ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಮಾಹಿತಿ ನೀಡಿದೆ. ಮೊದಲ ಪಂದ್ಯ ನಡೆದ ಟ್ರಿನಿಡಾಡ್‌ನಿಂದ ಸೈಂಟ್ ಕಿಟ್ಸ್‌ಗೆ ನಿಗದಿತ ಸಮಯಕ್ಕೆ ಆಟಗಾರರ ಸಾಮಾಗ್ರಿಗಳು ತಲುಪಲು ಸಾಧ್ಯವಾಗಿಲ್ಲ. ಹೀಗಾಗಿ ಪಂದ್ಯ ಭಾರತೀಯ ಕಾಲಮಾನ ರಾತ್ರಿ 10 ಗಂಟೆಯಿಂದ ಆರಂಭವಾಗಲಿದೆ.

ಐದು ಪಂದ್ಯಗಳ ಈ ಸರಣಿಯಲ್ಲಿ ಭಾರತ ತಂಡ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು ಸರಣಿಯಲ್ಲಿ ಮೇಲುಗೈ ಸಾಧಿಸಿದೆ. ಮೊದಲ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ, ದಿನೇಶ್ ಕಾರ್ತಿಕ್ ಅವರ ಅದ್ಭುತ ಆಟದ ಪರಿಣಾಮವಾಗಿ ಭಾರತ ಬೃಹತ್ ಮೊತ್ತವನ್ನು ಪೇರಿಸಲು ಯಶಸ್ವಿಯಾಗಿತ್ತು. ಆದರೆ ಇದಕಗಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ವಿಂಡೀಸ್ ಬ್ಯಾಟಿಂಗ್‌ನಲ್ಲಿಯೂ ವೈಫಲ್ಯ ಅನುಭವಿಸಿ ಭಾರೀ ಅಂತರದಿಂದ ಸೋಲು ಕಂಡಿದೆ.

ಸ್ಕ್ವಾಡ್‌ಗಳು ಹೀಗಿದೆ
ವೆಸ್ಟ್ ಇಂಡೀಸ್ ತಂಡ: ಕೈಲ್ ಮೇಯರ್ಸ್, ಶಮರ್ಹ್ ಬ್ರೂಕ್ಸ್, ಜೇಸನ್ ಹೋಲ್ಡರ್, ನಿಕೋಲಸ್ ಪೂರನ್, ರೋವ್ಮನ್ ಪೊವೆಲ್, ಶಿಮ್ರಾನ್ ಹೆಟ್ಮೆಯರ್, ಅಕೆಲ್ ಹೊಸೈನ್, ಓಡಿಯನ್ ಸ್ಮಿತ್, ಕೀಮೋ ಪಾಲ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್, ಹೇಡನ್ ವಾಲ್ಷ್, ಡೆವೊನ್ ಥಾಮಸ್, ಬ್ರಾಂಡನ್ ಶೆಫರ್ಡ್ ಕಿಂಗ್ ಡ್ರೇಕ್ಸ್

ಭಾರತ ತಂಡ: ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ದಿನೇಶ್ ಕಾರ್ತಿಕ್, ರವಿಚಂದ್ರನ್ ಅಶ್ವಿನ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಅಕ್ಸರ್ ಪಟೇಲ್, ದೀಪಕ್ ಹೂಡಾ, ಕಿವೇಶ್ ಖಾಂಡ , ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್

Story first published: Monday, August 1, 2022, 19:11 [IST]
Other articles published on Aug 1, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+