Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವೆಸ್ಟ್ ಇಂಡೀಸ್ vs ನ್ಯೂಜಿಲೆಂಡ್: ಮೂರನೇ ಏಕದಿನ ಪಂದ್ಯ; Live ಸ್ಕೋರ್, ಆಡುವ ಬಳಗ

West Indies vs New Zealand: 3rd ODI match, Live score and playing XI details

ವೆಸ್ಟ್ ಇಂಡೀಸ್ ಹಾಗೂ ನ್ಯೂಜಿಲೆಂಡ್ ಕ್ರಿಕೆಟ್ ತಂಡಗಳು ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಿದ್ದು ಮೂರು ಪಂದ್ಯಗಳ ಸರಣಿಯ ಅಂತಿಮ ಪಂದ್ಯ ಆರಂಭವಾಗಿದೆ. ವೆಸ್ಟ್ ಇಂಡೀಸ್‌ನ ಆತಿಥ್ಯದಲ್ಲಿ ನಡೆಯುತ್ತಿರುವ ಈ ಸರಣಿಯ ಕೊನೆಯ ಪಂದ್ಯದಲ್ಲಿ ಪ್ರವಾಸಿ ನ್ಯೂಜಿಲೆಂಡ್ ಬಳಗ ಪಡೆ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದೆ. ಹೀಗಾಗಿ ಆತಿಥೇಯ ವೆಸ್ಟ್ ಇಂಡೀಸ್ ಪಡೆ ಬಳಗ ರನ್ ಬೆನ್ನಟ್ಟುವ ಸವಾಲು ಸ್ವೀಕರಿಸಿದೆ.

ಈ ಸರಣಿಯ ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಅದ್ಭುತ ಪ್ರದರ್ಶನ ನೀಡಿ ಭರ್ಜರಿ ಗೆಲುವು ಸಾಧಿಸಿತ್ತು. ಮಳೆಯಿಂದಾಗಿ ಅಡ್ಡಿಯುಂಟಾಗಿದ್ದ ಎರಡನೇ ಪಂದ್ಯದಲ್ಲಿ ತಿರುಗಿ ಬಿದ್ದ ನ್ಯೂಜಿಲೆಂಡ್ ತಂಡ ಭರ್ಜರಿ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿತ್ತು. ಈ ಮೂಲಕ 50 ರನ್‌ಗಳಿಂದ ಪಂದ್ಯ ಗೆದ್ದ ನ್ಯೂಜಿಲೆಂಡ್ ತಂಡ ಸರಣಿಯನ್ನು ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ. ಇಂದು ನಡೆಯುತ್ತಿರುವುದು ಸರಣಿಯ ಅಂತಿಮ ಪಂದ್ಯವಾಗಿದ್ದು ಗೆದ್ದ ತಂಡ ಸರಣಿ ವಶಕ್ಕೆ ಪಡೆಯಲಿದೆ.

Live ಸ್ಕೋರ್‌ ಹೀಗಿದೆ:

1
54172

ಇನ್ನು ಈ ಏಕದಿನ ಸರಣಿಗೂ ಮುನ್ನ ಟಿ20 ಸರಣಿ ಆಯೋಜನೆಯಾಗಿತ್ತು. ಮೂರು ಪಂದ್ಯಗಳ ಚುಟುಕು ಸರಣಿಯಲ್ಲಿ ಪ್ರವಾಸಿ ನ್ಯೂಜಿಲೆಂಡ್ ತಂಡ ಭರ್ಜರಿ ಪ್ರದರ್ಶನ ನೀಡಿ ಮೇಲುಗೈ ಸಾಧಿಸಿತ್ತು. ಹೀಗಾಗಿ ಏಕದಿನ ಸರಣಿಗೆ ಕಿವಿಸ್ ಪಡೆ ಆತ್ಮವಿಶ್ವಾಸದಿಂದಲೇ ಕಣಕ್ಕಿಳಿದಿತ್ತು. ಆದರೆ ಮೊದಲ ಪಂದ್ಯದಲ್ಲಿ ನಿರಾಸೆ ಅನುಭವಿಸಿದೆ. ಮತ್ತೊಂದೆಡೆ ಆತಿಥೆಯ ವಿಂಡೀಸ್ ತಂಡ ಸತತವಾಗಿ ತವರಿನಲ್ಲಿ ಸೋಲಿನ ಬಳಿಕ ಸೋಲು ಅನುಭವಿಸುತ್ತಿದ್ದು ಈಗಾಗಲೇ ಭಾರೀ ಮುಖಭಂಗಕ್ಕೆ ಒಳಗಾಗಿದೆ. ಹೀಗಾಗಿ ಈ ಸರಣಿಯಲ್ಲಿ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದೆ.

ಇತ್ತಂಡಗಳ ಆಡುವ ಬಳಗ
ವೆಸ್ಟ್ ಇಂಡೀಸ್: ಶಾಯ್ ಹೋಪ್ (ವಿಕೆಟ್ ಕೀಪರ್), ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಶಮರ್ ಬ್ರೂಕ್ಸ್, ಕೀಸಿ ಕಾರ್ಟಿ, ನಿಕೋಲಸ್ ಪೂರನ್ (ನಾಯಕ), ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಯಾನಿಕ್ ಕ್ಯಾರಿಯಾ, ಅಲ್ಜಾರಿ ಜೋಸೆಫ್, ಕೆವಿನ್ ಸಿಂಕ್ಲೇರ್

ಬೆಂಚ್: ಜರ್ಮೈನ್ ಬ್ಲಾಕ್ವುಡ್, ಜೇಡನ್ ಸೀಲ್ಸ್, ಕೀಮೋ ಪಾಲ್, ಗುಡಾಕೇಶ್ ಮೋಟಿ, ಶಿಮ್ರಾನ್ ಹೆಟ್ಮೆಯರ್

ನ್ಯೂಜಿಲೆಂಡ್ ತಂಡ: ಮಾರ್ಟಿನ್ ಗಪ್ಟಿಲ್, ಫಿನ್ ಅಲೆನ್, ಡೆವೊನ್ ಕಾನ್ವೇ, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮೈಕೆಲ್ ಬ್ರೇಸ್‌ವೆಲ್, ಲಾಕಿ ಫರ್ಗುಸನ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್
ಬೆಂಚ್: , ಕೇನ್ ವಿಲಿಯಮ್ಸನ್, ಇಶ್ ಸೋಧಿ, ಬೆನ್ ಸಿಯರ್ಸ್, ಗ್ಲೆನ್ ಫಿಲಿಪ್ಸ್

Story first published: Sunday, August 21, 2022, 23:31 [IST]
Other articles published on Aug 21, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+