ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಚೇತೇಶ್ವರ್ ಪೂಜಾರ ದಾಖಲೆ ಮುರಿದ ಪಾಕಿಸ್ತಾನ ಬ್ಯಾಟ್ಸ್‌ಮನ್ ಫವಾದ್ ಆಲಂ

West Indies vs Pakistan: Fawad Alam beats Cheteshwar Pujaras record

ಕಿಂಗ್‌ಸ್ಟನ್, ಆಗಸ್ಟ್ 24: ಪಾಕಿಸ್ತಾನ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ವಿಂಡೀಸ್ ವಿರುದ್ಧ ಉತ್ತಮ ಪ್ರದರ್ಶನ ನೀಡಿದೆ. ಹೀಗಾಗಿ ಅಂತಿಮ ದಿನದಾಟದಲ್ಲಿ ಪಾಕಿಸ್ತಾನ ತಂಡ ಗೆಲುವಿನ ಕನಸು ಕಾಣುತ್ತಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಬ್ಯಾಟ್ಸ್‌ಮನ್ ಫವಾದ್ ಆಲಂ ಮೊದಲ ಇನ್ನಿಂಗ್ಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಪಾಕಿಸ್ತಾನ ತಂಡವನ್ನು ಅತ್ಯುತ್ತಮ ಸ್ಥಿತಿಗೆ ತಂದು ನಿಲ್ಲಿಸಿದ್ದಾರೆ.

ಫವಾದ್ ಆಲಂ 213 ಎಸೆತಗಳನ್ನು ಎದುರಿಸಿದ್ದು 124 ರನ್‌ಗಳನ್ನು ಸಿಡಿಸಿದ್ದಾರೆ. ಈ ಮೂಲಕ ದಶಕದ ಬಳಿಕ ಪಾಕಿಸ್ತಾನ ತಂಡಕ್ಕೆ ಕಮ್‌ಬ್ಯಾಕ್ ಮಾಡಿರುವ ಫಾವದ್ ಅಲಂ ತಮ್ಮ ಅತ್ಯುತ್ತಮ ಪ್ರದರ್ಶನವನ್ನು ಮುಂದುವರಿಸಿದ್ದಾರೆ. ಅಲ್ಲದೆ ಕೇವಲ 2 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಅತ್ಯಂತ ಸಂಕಷ್ಟದಲ್ಲಿದ್ದ ಪಾಕಿಸ್ತಾನ ತಂಡದ ಪರವಾಗಿ ನಾಯಕ ಬಾಬರ್ ಅಜಂ ಜೊತೆ ಸೇರಿಕೊಂಡು ತಂಡವನ್ನು ಕುಸಿತದಿಂದ ಪಾರು ಮಾಡುವಲ್ಲಿ ಯಶಸ್ವಿಯಾಗಿದ್ದರು. ನಾಯಕ ಬಾಬರ್ ಅಜಂ ಜೊತೆ ಸೇರಿ ತಂಡಕ್ಕೆ ಉತ್ತಮ ರನ್‌ ಕಲೆ ಹಾಕಲು ಕಾರಣವಾದರು

ಈ ಶತಕದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಿದ ಬಳಿಕ ಫಾವದ್ ನಾಲ್ಕನೇ ಶತಕ ಸಿಡಿಸಿ ಮಿಂಚಿದ್ದಾರೆ. ಇನ್ನು ಈ ವರ್ಷದಲ್ಲಿ ಆಡಿದ 11 ಇನ್ನಿಂಗ್ಸ್‌ಗಳಲ್ಲಿ 513 ರನ್‌ಗಳಿಸಿರುವ ಫಾವದ್ ಅಲಂ 57ರ ಸರಾಸರಿಯಲ್ಲಿ ರನ್‌ಗಳಿಸಿದ್ದಾರೆ. ಈ ಮೂಲಕ ಈ ವರ್ಷದಲ್ಲಿ ಟೆಸ್ಟ್ ಕ್ರಿಕೆಟ್‌ ಮಾದರಿಯಲ್ಲಿ ಫಾವದ್ 8ನೇ ಅತಿ ಹೆಚ್ಚು ರನ್‌ಗಳಿಸಿದ ಬ್ಯಾಟ್ಸ್‌ಮನ್ ಎನಿಸಿದ್ದಾರೆ.

ಅಫ್ಘಾನಿಸ್ತಾನ-ಪಾಕಿಸ್ತಾನ ಏಕದಿನ ಸರಣಿ ಶ್ರೀಲಂಕಾದಿಂದ ಪಾಕಿಸ್ತಾನಕ್ಕೆ ಸ್ಥಳಾಂತರಅಫ್ಘಾನಿಸ್ತಾನ-ಪಾಕಿಸ್ತಾನ ಏಕದಿನ ಸರಣಿ ಶ್ರೀಲಂಕಾದಿಂದ ಪಾಕಿಸ್ತಾನಕ್ಕೆ ಸ್ಥಳಾಂತರ

ಇನ್ನು ಈ ಶತಕದ ಸಾಧನೆಯ ಮೂಲಕ ಫಾವದ್ ಅಲಂ ವಿಶೇಷ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ವೇಗವಾಗಿ 5 ಶತಕಗಳನ್ನು ದಾಖಲಿಸಿದ ಏಷ್ಯಾದ ಬ್ಯಾಟ್ಸ್‌ಮನ್ ಎನಿಸಿದ್ದಾರೆ ಫಾವದ್. ಪಾಕಿಸ್ತಾನದ ಈ ಬ್ಯಾಟ್ಸ್‌ಮನ್ 22 ಇನ್ನಿಂಗ್ಸ್‌ನಲ್ಲಿ ಈ ಮೈಲಿಗಲ್ಲು ನೆಟ್ಟಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಭಾರತದ ಚೇತೇಶ್ವರ್ ಪೂಜಾರ ಹೆಸರಿನಲ್ಲಿತ್ತು. ಪೂಜಾರ ಮೊದಲ ಐದು ಶತಕಗಳನ್ನು 24 ಇನ್ನಿಂಗ್ಸ್‌ಗಳಲ್ಲಿ ಗಳಿಸಿದ್ದರು.

ಮೊದಲ ದಿನದಾಟದಲ್ಲಿ 76 ರನ್‌ಗಳಿಸಿದ್ದ ಫಾವದ್ ಅಲಂ ನಂತರ ಗಾಯಗೊಂಡು ನಿವೃತ್ತರಾಗಿದ್ದರು. ನಂತರ ಅಂತಿಮ ಹಂತದಲ್ಲಿ ಮತ್ತೆ ಕಣಕ್ಕಿಳಿದ ಅವರು 124 ರನ್‌ಗಳನ್ನು ಸಿಡಿಸುವಲ್ಲಿ ಯಶಸ್ವಿಯಾಗಿದ್ದರು. ನಾಯಕ ಬಾಬರ್ ಅಜಂ ಮೊದಲ ಇನ್ನಿಂಗ್ಸ್‌ನಲ್ಲಿ ಪಾಕಿಸ್ತಾನ 302/9 ರನ್‌ಗಳಿಸುತ್ತಲೇ ಇನ್ನಿಂಗ್ಸ್ ಡಿಕ್ಲೇರ್ ಮಾಡಿದ್ದಾರೆ. ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ವೆಸ್ಟ್ ಇಂಡೀಸ್ ತಂಡ ಕೇವಲ 150 ರನ್‌ಗಳಿಗೆ ಆಲೌಟ್ ಆಗಿತ್ತು. ಪಾಕಿಸ್ತಾನ ತಂಡದ ಯುವ ವೇಹಿ ಶಹೀನ್ ಅಫ್ರಿದಿ ಬೌಲಿಂಗ್ ದಾಳಿಗೆ ವೆಸ್ಟ್ ಇಂಡೀಸ್ ದಾಂಡಿಗರು ನಿರುತ್ತರರಾಗಿದ್ದರು. ಶಹೀನ್ 6 ವಿಕೆಟ್‌ಗಳನ್ನು ಮೊದಲ ಇನ್ನಿಂಗ್ಸ್‌ನಲ್ಲಿ ಕಬಳಿಸುವಲ್ಲಿ ಯಶಸ್ವಿಯಾಗಿದ್ದರು.

ಪಾಕಿಸ್ತಾನ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಕೂಡ ಈಗ ರೋಚಕ ಘಟ್ಟವನ್ನು ತಲುಪಿದೆ. ಮೂರನೇ ದಿನದಾಟದ ಅಂತ್ಯಕ್ಕೆ ಎರಡನೇ ಇನ್ನಿಂಗ್ಸ್‌ನಲ್ಲಿ ವೆಸ್ಟ್ ಇಂಡೀಸ್ 49 ರನ್‌ಗಳಿಸಿದ್ದು 1 ವಿಕೆಟ್ ಕಳೆದುಕೊಂಡಿದೆ. ಅಂತಿಮ ದಿನದಾಟದಲ್ಲಿ 280 ರನ್‌ಗಳನ್ನು ಗಳಿಸುವ ಸವಾಲು ವೆಸ್ಟ್ ಇಂಡೀಸ್ ತಂಡದ ಮುಂದಿದ್ದು 9 ವಿಕೆಟ್ ಕೈಯಲ್ಲಿದೆ. ಆದರೆ ಪಾಕಿಸ್ತಾನ ಬೌಲರ್‌ಗಳು ವೆಸ್ಟ್ ಇಂಡೀಸ್ ದಾಂಡಿಗರ ಮುಂದೆ ಪ್ರಾಭಲ್ಯ ಸಾಧಿಸುವ ವಿಶ್ವಾಸದಲ್ಲಿದ್ದು ಕೊನೆಯ ದಿನದಾಟದಲ್ಲಿ ಯಾರ ಕೈಮೇಲಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ವೆಸ್ಟ್ ಇಂಡೀಸ್ ಆಡುವ ಬಳಗ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಕೀರನ್ ಪೊವೆಲ್, ಎನ್‌ಕ್ರುಮಾ ಬೋನರ್, ರೋಸ್ಟನ್ ಚೇಸ್, ಜೆರ್ಮೈನ್ ಬ್ಲ್ಯಾಕ್‌ವುಡ್, ಕೈಲ್ ಮೇಯರ್ಸ್, ಜೇಸನ್ ಹೋಲ್ಡರ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಜೇಡೆನ್ ಸೀಲ್ಸ್

Rishab pant ಹೊಸ ದಾಖಲೆಯ ಹೊಸ್ತಿಲಲ್ಲಿ | Oneindia Kannada

ಪಾಕಿಸ್ತಾನ ಆಡುವ ಬಳಗ: ಇಮ್ರಾನ್ ಬಟ್, ಅಬಿದ್ ಅಲಿ, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಫವಾದ್ ಆಲಂ, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಹೀಮ್ ಅಶ್ರಫ್, ನೌಮನ್ ಅಲಿ, ಹಸನ್ ಅಲಿ, ಶಾಹೀನ್ ಅಫ್ರಿದಿ, ಮೊಹಮ್ಮದ್ ಅಬ್ಬಾಸ್

Story first published: Tuesday, August 24, 2021, 13:43 [IST]
Other articles published on Aug 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X