For Quick Alerts
ALLOW NOTIFICATIONS  
For Daily Alerts
 

ವೆಸ್ಟ್ ಇಂಡೀಸ್ vs ದಕ್ಷಿಣ ಆಫ್ರಿಕಾ: ಅಂತಿಮ ಟಿ20 ಪಂದ್ಯದ Live ಸ್ಕೋರ್ ಹಾಗೂ ಆಡುವ ಬಳಗ

West Indies vs South Africa, 3rd t20 match, Toss report, playing XI and Live score, Johannesburg

ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟಿ20 ಸರಣಿಯ ಅಂತಿಮ ಪಂದ್ಯ ಜೊಹನ್ಸ್‌ಬರ್ಗ್‌ನಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ವೆಸ್ಟ್ ಇಂಡೀಸ್ ತಂಡ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಮೂರು ಪಂದ್ಯಗಳ ಈ ಸರಣಿಯಲ್ಲಿ ಕೊನೆಯ ಪಂದ್ಯ ಸರಣಿಯ ನಿರ್ಣಾಯಕ ಪಂದ್ಯ ಎನಿಸಿದೆ. ಮೊದಲ ಎರಡು ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ತಲಾ ಒಂದೊಂದು ಗೆಲುವು ಸಾಧಿಸಿದೆ. ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಅಬ್ಬರದ ಪ್ರದರ್ಶನ ನೀಡಿ ಅಮೋಘ ಗೆಲುವು ಸಾಧಿಸಿ ಬೀಗಿತ್ತು. ಆದರೆ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ತಿರುಗಿಬಿದ್ದಿದ್ದು ಸರಣಿ ಗೆಲ್ಲುವ ವೆಸ್ಟ್ ಇಂಡೀಸ್ ಕನಸಿಗೆ ಅಡ್ಡಿ ಪಡಿಸಿತ್ತು. ಹೀಗಾಗಿ ಇಂದಿನ ಈ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ.

Live ಸ್ಕೋರ್ ಹೀಗಿದೆ

1
55693

ಇನ್ನು ಈ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡದ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿರುವುದು ತಂಡದ ಆತ್ಮ ವಿಶ್ವಾಸ ಹೆಚ್ಚಿಸಿದೆ. ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಬ್ಯಾಟಿಂಗ್‌ನಲ್ಲಿ ಬರೊಬ್ಬರಿ 258 ರನ್‌ಳನ್ನು ಗಳಿಸಿತ್ತು. ಆದರೆ ದಕ್ಷಿಣ ಆಫ್ರಿಕಾ ತಂಡ ಈ ಮೊತ್ತವನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾಗಿದ್ದು ಚುಟುಕು ಮಾದರಿಯಲ್ಲಿ ದಾಖಲೆ ಬರೆಯಿತು.

ದಕ್ಷಿಣ ಆಫ್ರಿಕಾ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ರಿಲೀ ರೊಸ್ಸೌ, ಡೇವಿಡ್ ಮಿಲ್ಲರ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್, ವೇಯ್ನ್ ಪಾರ್ನೆಲ್, ಜಾರ್ನ್ ಫೋರ್ಚುಯಿನ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ
ಬೆಂಚ್: ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಸಿಸಂದಾ ಮಗಲಾ, ತಬ್ರೈಜ್ ಶಮ್ಸಿ

ವೆಸ್ಟ್ ಇಂಡೀಸ್ ಆಡುವ ಬಳಗ: ಬ್ರೆಂಡನ್ ಕಿಂಗ್, ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್ (ನಾಯಕ), ರೋಸ್ಟನ್ ಚೇಸ್, ರೊಮಾರಿಯೋ ಶೆಫರ್ಡ್, ಜೇಸನ್ ಹೋಲ್ಡರ್, ರೇಮನ್ ರೈಫರ್, ಶೆಲ್ಡನ್ ಕಾಟ್ರೆಲ್, ಅಲ್ಜಾರಿ ಜೋಸೆಫ್
ಬೆಂಚ್: ಓಡಿಯನ್ ಸ್ಮಿತ್, ಅಕೇಲ್ ಹೊಸೈನ್, ಒಬೆಡ್ ಮೆಕಾಯ್, ಶಮರ್ ಬ್ರೂಕ್ಸ್, ಯಾನಿಕ್ ಕ್ಯಾರಿಯಾ

Story first published: Tuesday, March 28, 2023, 21:39 [IST]
Other articles published on Mar 28, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+