ಹೋಪ್, ಪೂರನ್ ಸ್ಪೋಟಕ ಆಟ: ವಿಂಡೀಸ್ ಕ್ಲೀನ್ ಸ್ವೀಪ್ ಸಾಧನೆ
ಭರವಸೆಯ ಆಟಗಾರರಾದ ಶೈ ಹೋಪ್ ಹಾಗೂ ನಿಕೋಲಸ್ ಪೂರನ್ ಅವರ ಅಮೋಘ ಆಟದ ನೆರವಿನಿಂದ ವೆಸ್ಟ್ ಇಂಡೀಸ್ ಮೂರನೇ ಟಿ20 ಪಂದ್ಯದಲ್ಲಿ 8 ವಿಕೆಟ್‌ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ, ಮೂರು ಪಂದ್ಯಗಳ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ.
ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ನಿಗದಿತ 13 ಓವರ್‌ಗಳಲ್ಲಿ 4 ವಿಕೆಟ್‌ಗೆ 108 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ಡಕ್‌ವರ್ತ್ ಲೂಯಿಸ್ ನಿಯಮದ ಪ್ರಕಾರ 9.2 ಓವರ್‌ಗಳಲ್ಲಿ 2 ವಿಕೆಟ್‌ಗೆ 116 ರನ್ ಸೇರಿಸಿ ಅಬ್ಬರಿಸಿತು. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು 3-0ಯಿಂದ ವಶಕ್ಕೆ ಪಡೆಯಿತು.

ಕಳಪೆ ಆರಂಭ
ಮಂಗಳವಾರ ನಡೆದ ಎರಡನೇ ಪಂದ್ಯದಲ್ಲಿ ಮೊದಲ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡದ ಆರಂಭ ಕಳಪೆಯಾಗಿತ್ತು. ರಿಜಾ ಹೆಂಡ್ರಿಕ್ಸ್ (9) ಜವಾಬ್ದಾರಿ ಮರೆತರು. ರಿಯಾನ್ ರಿಕೆಲ್ಟನ್ ಸ್ಥಿರ ಆಟದ ಪ್ರದರ್ಶನ ನೀಡಿದರೂ ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಇವರು 27 ರನ್‌ಗಳಿಗೆ ಆಟ ಮುಗಿಸಿದರು.
ನಾಯಕ ಐಡೆನ್ ಮಾರ್ಕ್ರಮ್ 12 ಎಸೆತಗಳಲ್ಲಿ 1 ಬೌಂಡರಿ, 2 ಸಿಕ್ಸರ್ ಸಹಾಯದಿಂದ 20 ರನ್ ಸೇರಿಸಿದರು. ಟ್ರಿಸ್ಟಾನ್ ಸ್ಟಬ್ಸ್ ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಆಧಾರವಾದರು. ಇವರು ಕೇವಲ 15 ಎಸೆತಗಳಲ್ಲಿ 5 ಬೌಂಡರಿ, 3 ಸಿಕ್ಸರ್ ಸಹಾಯದಿಂದ 40 ರನ್ ಸಿಡಿಸಿದರು.
ಪೂರನ್ ಆರ್ಭಟ
ಗುರಿಯನ್ನು ಬೆನ್ನಟ್ಟಿದ ವಿಂಡೀಸ್ ತಂಡದ ಆರಂಭ ಕಳಪೆಯಾಗಿತ್ತು. ಎರಡನೇ ವಿಕೆಟ್‌ಗೆ ಶಾಯ್ ಹೋಪ್ ಹಾಗೂ ಅನುಭವಿ ಬ್ಯಾಟರ್ ನಿಕೋಲಸ್ ಪೂರನ್ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿಯನ್ನು ಬೇರ್ಪಡಿಸಲು ದಕ್ಷಿಣ ಆಫ್ರಿಕಾ ವಿಫಲವಾಯಿತು. ಈ ಜೋಡಿ ಎರಡನೇ ವಿಕೆಟ್‌ಗೆ 58 ರನ್ ಕಾಣಿಕೆ ನೀಡಿತು.
ಸ್ಪೋಟಕ ಆಟವನ್ನು ಆಡುತ್ತಿದ್ದ ನಿಕೋಲಸ್ ಪೂರನ್ 35 ರನ್ ಬಾರಿಸಿ ಔಟ್ ಆದರು. ಇವರ ಅಮೋಘ ಇನಿಂಗ್ಸ್‌ನಲ್ಲಿ 2 ಬೌಂಡರಿ, 4 ಸಿಕ್ಸರ್ ಸೇರಿವೆ. ಭರವಸೆಯ ಆಟಗಾರ ಶೈ ಹೋಪ್ 24 ಎಸೆತಗಳಲ್ಲಿ 42 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಮಿಂಚಿದರು. ಶಿಮ್ರೋನ್ ಹೆಟ್ಮೆಯರ್ (ಅಜೇಯ 31) ಜವಾಬ್ದಾರಿ ಅರಿತು ಬ್ಯಾಟ್ ಮಾಡಿದರು. ಪರಿಣಾಮ ಕಠಿಣ ಗುರಿಯನ್ನು ವಿಂಡೀಸ್ ಸುಲಭವಾಗಿ ಮುಟ್ಟಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications