IND-W vs WI-W: ಹರ್ಮನ್ ಪಡೆಯನ್ನು 9 ವಿಕೆಟ್‌ಗಳಿಂದ ಮಣಿಸಿದ ವಿಂಡೀಸ್
ಭಾರತ ಪ್ರವಾಸದಲ್ಲಿರುವ ವೆಸ್ಟ್ ಇಂಡೀಸ್ ಮಹಿಳಾ ತಂಡ ಎರಡನೇ ಟಿ20 ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿ 9 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ವಿಂಡೀಸ್ 1-1ರಿಂದ ಸಬಮಬಲ ಸಾಧಿಸಿದೆ. ಹೇಲಿ ಮ್ಯಾಥ್ಯೂಸ್ ಭರ್ಜರಿ ಆಟದ ನೆರವಿನಿಂದ ವಿಂಡೀಸ್, ಟೀಮ್ ಇಂಡಿಯಾವನ್ನು ಮಣಿಸಿದೆ. ಇನ್ನು ವೆಸ್ಟ್ ಇಂಡೀಸ್ ತಂಡದ ಅನುಭವಿ ಬೌಲರ್‌ಗಳು ಶಿಸ್ತು ಬದ್ಧ ದಾಳಿ ನಡೆಸಿ ಜಯದಲ್ಲಿ ಮಿಂಚಿದರು.
ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 159 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 15.4 ಓವರ್‌ಗಳಲ್ಲಿ 1 ವಿಕೆಟ್‌ಗೆ 160 ರನ್ ಸೇರಿಸಿ ಜಯ ಸಾಧಿಸಿತು.

ಕಳಪೆ ಆರಂಭ
ಟೀಮ್ ಇಂಡಿಯಾ ವನಿತೆಯರ ಆರಂಭ ಕಳಪೆಯಾಗಿತ್ತು. ಉಮಾ ಚೆಟ್ರಿ 4 ರನ್‌ಗಳಿಗೆ ಆಟ ಮುಗಿಸಿದರು. ಎರಡನೇ ವಿಕೆಟ್‌ಗೆ ಆರಂಭಿಕ ಸ್ಮೃತಿ ಮಂಧನಾ ಹಾಗೂ ಜೆಮಿಮಾ ರಾಡ್ರಿಗಸ್ ಸಾಧಾರಣ ಜೊತೆಯಾಟ ಉತ್ತಮವಾಗಿತ್ತು. ಈ ಜೋಡಿ 26 ಎಸೆತಗಳಲ್ಲಿ 29 ರನ್ ಸಿಡಿಸಿ ತಂಡಕ್ಕೆ ಆಧಾರವಾದರು. ಮಧ್ಯಮ ಕ್ರಮಾಂಕದಲ್ಲಿ ರಾಘವಿ ಬಿಸ್ತಾ (5) ರನ್ ಬರ ಅನುಭವಿಸಿದರು.
48 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಸ್ಮೃತಿ ಮಂಧನಾ ಹಾಗೂ ದೀಪ್ತಿ ಶರ್ಮಾ ಜೋಡಿ ಆಧಾರವಾಯಿತು. ಈ ಜೋಡಿ ವಿಂಡೀಸ್ ತಂಡದ ಬೌಲರ್‌ಗಳನ್ನು ಕಾಡಿದರು. ನಾಲ್ಕನೇ ವಿಕೆಟ್‌ಗೆ 34 ಎಸೆತಗಳಲ್ಲಿ 56 ರನ್ ಸೇರಿಸಿ ತಂಡಕ್ಕೆ ಆಧಾರವಾಯಿತು.

ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಸ್ಮೃತಿ ಮಂಧನಾ, ಎರಡನೇ ಟಿ20 ಪಂದ್ಯದಲ್ಲಿ ಅಬ್ಬರಿಸಿದರು. ಸ್ಮೃತಿ 41 ಎಸೆತಗಳಲ್ಲಿ 9 ಬೌಂಡರಿ, 1 ಸಿಕ್ಸರ್ ನೆರವಿನಿಂದ 62 ರನ್ ಸಿಡಿಸಿ ತಂಡಕ್ಕೆ ಆಧಾರವಾದರು. ದೀಪ್ತಿ ಶರ್ಮಾ 32 ರನ್ ಸಿಡಿಸಿದರು. ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ವಿಂಡೀಸ್ ಪರ ಚಿನೆಲ್ಲೆ ಹೆನ್ರಿ, ಡಿಯಾಂಡ್ರಾ ಡಾಟಿನ್, ಹೇಲಿ ಮ್ಯಾಥ್ಯೂಸ್, ಅಫಿ ಫ್ಲೆಚರ್ ತಲಾ ಎರಡು ವಿಕೆಟ್ ಪಡೆದರು.
ಭರ್ಜರಿ ಜೊತೆಯಾಟ
ಗುರಿಯನ್ನು ಹಿಂಬಾಲಿಸಿದ ವಿಂಡೀಸ್ ಮಹಿಳಾ ತಂಡದ ಆರಂಭ ಭರ್ಜರಿಯಾಗಿತ್ತು. ಹೇಲಿ ಮ್ಯಾಥ್ಯೂಸ್ ಹಾಗೂ ಕಿಯಾನಾ ಜೋಸೆಫ್ (38) ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ 6.4 ಓವರ್‌ಗಳಲ್ಲಿ 66 ರನ್ ಸಿಡಿಸಿ ತಂಡಕ್ಕೆ ಆಧಾರವಾಯಿತು. ಎರಡನೇ ವಿಕೆಟ್‌ಗೆ ಹೇಲಿ ಮ್ಯಾಥ್ಯೂಸ್ ಮತ್ತು ಶೆಮೈನ್ ಕ್ಯಾಂಪ್ಬೆಲ್ಲೆ ಜೋಡಿ ಸೊಗಸಾದ ಬ್ಯಾಟಿಂಗ್ ನಡೆಸಿದರು. ಈ ಜೋಡಿ 55 ಎಸೆತಗಳಲ್ಲಿ ಅಜೇಯ 94 ರನ್ ಸಿಡಿಸಿದರು. ಆರಂಭಿಕ ಆಟಗಾರ್ತಿ ಹೇಲಿ ಮ್ಯಾಥ್ಯೂಸ್ 47 ಎಸೆತಗಳಲ್ಲಿ 17 ಬೌಂಡರಿ ಸಹಾಯದಿಂದ ಅಜೇಯ 85 ರನ್ ಸಿಡಿಸಿ ಔಟ್ ಆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications