For Quick Alerts
ALLOW NOTIFICATIONS  
For Daily Alerts
 

Team India: ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾದ ದೌರ್ಬಲ್ಯಗಳೇನು?

ಇಂಗ್ಲೆಂಡ್ ವಿರುದ್ಧ 3-0 ಅಂತರದಲ್ಲಿ ಏಕದಿನ ಸರಣಿಯನ್ನು ಗೆಲ್ಲುವ ಮೂಲಕ ಮೂಲಕ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯನ್ನು ಪ್ರವೇಶಿಸಿದೆ. ಹೆಡ್‌ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಮ್ ಇಂಡಿಯಾ ಆಟಗಾರರು ಆಭ್ಯಾಸ ಆರಂಭಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಬ್ಯಾಟರ್‌ಗಳು ತಮ್ಮ ಅದ್ಭುತ ಇನ್ನಿಂಗ್ಸ್‌ನಿಂದ ಲಯ ಕಂಡುಕೊಂಡಿದ್ದಾರೆ. ಆದರೆ ಟೀಮ್ ಇಂಡಿಯಾ ಬೌಲರ್‌ಗಳು ಇಂಗ್ಲೆಂಡ್ ಬ್ಯಾಟರ್‌ಗಳನ್ನು ಕಟ್ಟಿ ಹಾಕುವಲ್ಲಿ ತಮ್ಮ ಕೈಲಾದಷ್ಟು ಪ್ರಯತ್ನಿಸಿದ್ದಾರೆ.

ಭಾರತ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದ್ದು, ಚಾಂಪಿಯನ್ಸ್ ಟ್ರೋಫಿಯಲ್ಲೂ ತನ್ನ ಅಮೋಘ ಪ್ರದರ್ಶನವನ್ನು ಮುಂದುವರಿಸಲು ಉತ್ಸುಕವಾಗಿದೆ. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ 2017 ರ ನಂತರ ಮೊದಲ ಬಾರಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುತ್ತಿದೆ. ಹೀಗಾಗಿ ಟೀಮ್ ಇಂಡಿಯಾ ತಂಡದ ಸಾಮರ್ಥ್ಯ ಮತ್ತು ದೌರ್ಬಲ್ಯಗಳೇನು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

What are Team India weaknesses in the Champions Trophy 2025

ಟೀಮ್ ಇಂಡಿಯಾದ ಬಲ

ಟೀಮ್ ಇಂಡಿಯಾದ ಪ್ರಮುಖ ಬಲ ಎಂದರೆ ಅಗ್ರ ಕ್ರಮಾಂಕದ ಬ್ಯಾಟಿಂಗ್ ವಿಭಾಗ. ನಾಲ್ವರು ಸ್ಟಾರ್ ಬ್ಯಾಟರ್‌ಗಳು ಟೀಮ್ ಇಂಡಿಯಾ ಆರಂಭಿಕ ಶಕ್ತಿಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧ ಕಟಕ್‌ನಲ್ಲಿ ಮೊದಲ 10 ಓವರ್‌ಗಳಲ್ಲಿ ನಾಯಕ ರೋಹಿತ್ ಶರ್ಮಾ 119 ರನ್ ಗಳಿಸುವ ಮೂಲಕ ತಮ್ಮ ಆಕ್ರಮಣಕಾರಿ ಆಟವನ್ನು ಪ್ರದರ್ಶಿಸಿದರು. ಅಹಮದಾಬಾದ್‌ನಲ್ಲಿ ಶುಭಮನ್ ಗಿಲ್ ಅದ್ಭುತ ಶತಕ ಗಳಿಸಿದರು. ರೋಹಿತ್-ಗಿಲ್ ಅವರ ಆರಂಭಿಕ ಜೋಡಿ ಭಾರತಕ್ಕೆ ಅತ್ಯಂತ ಯಶಸ್ವಿ ಜೋಡಿಯಾಗಿದೆ. 2023 ರಲ್ಲಿ ಒಟ್ಟಿಗೆ ಸೇರಿದಾಗಿನಿಂದ, ರೋಹಿತ್ ಮತ್ತು ಗಿಲ್ 27 ಇನ್ನಿಂಗ್ಸ್‌ಗಳಲ್ಲಿ ಆರಂಭಿಕ ಜೋಡಿಯಾಗಿ 72.07 ರ ಸರಾಸರಿಯಲ್ಲಿ 1874 ರನ್ ಗಳಿಸಿದ್ದಾರೆ. ಇದರಲ್ಲಿ ಆರು 100 ಪ್ಲಸ್ ಮತ್ತು 11 ಐವತ್ತು ಪ್ಲಸ್ ಜೊತೆಯಾಟ ಸೇರಿವೆ. ಇದು 50 ಓವರ್‌ಗಳ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾಕ್ಕೆ ಬಹಳ ಉಪಯುಕ್ತವಾದ ಆರಂಭಿಕ ಜೋಡಿಯಾಗಿದೆ.

ಅಹಮದಾಬಾದ್‌ನಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿದರು. ಶ್ರೇಯಸ್ ಅಯ್ಯರ್ ನಾಲ್ಕನೇ ಸ್ಥಾನದಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಅಕ್ಸರ್ ಪಟೇಲ್, ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಅವರ ಅದ್ಭುತ ಬ್ಯಾಟಿಂಗ್ ಮತ್ತು ಪ್ರಸ್ತುತ ಆಲ್‌ರೌಂಡ್ ಫಾರ್ಮ್‌ನೊಂದಿಗೆ ದುಬೈನಲ್ಲಿ ಭಾರತ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಬಹುದು.

ಟೀಮ್ ಇಂಡಿಯಾದ ದೌರ್ಬಲ್ಯ

ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿ ಭಾರತ ತಂಡಕ್ಕೆ ಕಾಡಲಿದೆ. ಯಾವುದೇ ಹಂತದಲ್ಲೂ ಪಂದ್ಯವನ್ನು ತಿರುಗಿಸಬಲ್ಲ ವೇಗದ ಬೌಲರ್ ಭಾರತ ತಂಡದಲ್ಲಿ ಇಲ್ಲ. ಅವರ ಅನುಪಸ್ಥಿತಿ ಭಾರತಕ್ಕೆ ದೊಡ್ಡ ಹೊಡೆತವಾಗಿದ್ದು, ಪಾಂಡ್ಯ, ಮೊಹಮ್ಮದ್ ಶಮಿ, ಹರ್ಷಿತ್ ರಾಣಾ ಮತ್ತು ಅರ್ಶ್‌ದೀಪ್ ಸಿಂಗ್ ಅವರಿಂದ ಉತ್ತಮ ಪ್ರದರ್ಶನ ನಿರೀಕ್ಷಿಸಬಹುದು. ಭಾರತದ ದೌರ್ಬಲ್ಯದ ಮತ್ತೊಂದು ಅಂಶವೆಂದರೆ ಕೆಎಲ್ ರಾಹುಲ್ ಅವರ ಬಲವನ್ನು ದುರ್ಬಲಗೊಳಿಸುವುದು.

ರಾಹುಲ್ ಐದನೇ ಕ್ರಮಾಂಕದಲ್ಲಿ ಸುಲಭವಾಗಿ ರನ್ ಗಳಿಸುವ ಆಟಗಾರನಾಗಿರುವುದು ರಹಸ್ಯವಲ್ಲ. ಆದರೆ ಗೌತಮ್ ಗಂಭೀರ್ ಎಡ-ಬಲ ಸಂಯೋಜನೆಗೆ ಆದ್ಯತೆ ನೀಡುತ್ತಿರುವುದರಿಂದ, ಅಕ್ಸರ್ ಆ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಬೇಕಾಗುತ್ತದೆ. ರಾಹುಲ್ ಅವರನ್ನು ಆರನೇ ಸ್ಥಾನಕ್ಕೆ ತಳ್ಳಲಾಗಿದೆ. ಅವರ ಇತ್ತೀಚಿನ ಹೇಳಿಕೊಳ್ಳವಂತಿಲ್ಲ.

ಭಾರತ ತನ್ನ ಬ್ಯಾಟಿಂಗ್ ಇನ್ನಿಂಗ್ಸ್‌ನಲ್ಲಿ ತ್ವರಿತ ರನ್‌ಗಳ ಹುಡುಕಾಟದಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡರೆ ಕುಸಿದರೆ ಅಂತಹ ನಿರ್ಧಾರವು ವಿರುದ್ಧ ಪರಿಣಾಮ ಬೀರಬಹುದು.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ ಮತ್ತು ವರುಣ್ ಚಕ್ರವರ್ತಿ.

Story first published: Monday, February 17, 2025, 11:08 [IST]
Other articles published on Feb 17, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+